• search
  • Live TV
ಬಾಗಲಕೋಟೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಶಾಸಕ ಸಿದ್ದು ಸವದಿ ಎಳೆದಾಡಿದ್ದ ಪುರಸಭೆ ಸದಸ್ಯೆಗೆ ಗರ್ಭಪಾತ

By Lekhaka
|

ಬಾಗಲಕೋಟೆ, ನವೆಂಬರ್ 30: ಈಚೆಗೆ ಜಿಲ್ಲೆಯ ಮಹಾಲಿಂಗಪುರದ ಪುರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ಚುನಾವಣೆ ವೇಳೆ ಬಿಜೆಪಿಯ ಮಹಿಳಾ ಸದಸ್ಯೆಯನ್ನು ಶಾಸಕ ಸಿದ್ದು ಸವದಿ ಎಳೆದಾಡಿ ಅಮಾನಿಸಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಬಿಜೆಪಿಯ ಮೂವರು ಮಹಿಳಾ ಸದಸ್ಯರ ಮೇಲೆ ಸಿದ್ದು ಸವದಿ ಹಾಗೂ ಅವರ ಬೆಂಬಲಿಗರು ಹಲ್ಲೆ ನಡೆಸಿದ್ದ ಆರೋಪ ಕೇಳಿಬಂದಿದ್ದು, ಈ ಘಟನೆಗೆ ವ್ಯಾಪಕ ಆಕ್ರೋಶ ವ್ಯಕ್ತಗೊಂಡಿತ್ತು.

ಮಹಿಳೆಯರ ಮೇಲೆ ಹಲ್ಲೆ ನಡೆಸಿ ಅನುಚಿತವಾಗಿ ವರ್ತಿಸಿದ ಶಾಸಕರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಪ್ರತಿಭಟನೆ ಕೂಡ ನಡೆದಿತ್ತು. ಇದೀಗ ಹಲ್ಲೆಗೆ ಒಳಗಾಗಿದ್ದ ಮಹಿಳಾ ಸದಸ್ಯರ ಪೈಕಿ ಗಾಯಗೊಂಡಿದ್ದ ಚಾಂದಿನಿ ನಾಯಕ್ ಅವರಿಗೆ ಗರ್ಭಪಾತವಾಗಿರುವ ವಿಷಯ ಬೆಳಕಿಗೆ ಬಂದಿದೆ.

ನ.9ರಂದು ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಿಗದಿಯಾಗಿತ್ತು. ಈ ವೇಳೆ ಆ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದ ಬಿಜೆಪಿಯ ಮೂವರು ಸದಸ್ಯೆಯರು, ತಮಗೆ ಅವಕಾಶ ಸಿಗದೇ ಇದ್ದ ಕಾರಣಕ್ಕೆ ಬಿಜೆಪಿ ಬಿಟ್ಟು ಕಾಂಗ್ರೆಸ್ ಗೆ ಬೆಂಬಲ ವ್ಯಕ್ತಪಡಿಸಲು ಮುಂದಾಗಿದ್ದರು. ಈ ವಿಷಯ ಗಮನಕ್ಕೆ ಬರುತ್ತಿದ್ದಂತೆಯೇ ತೇರದಾಳ ಶಾಸಕ ಸಿದ್ದು ಸವದಿ ಹಾಗೂ ಬೆಂಬಲಿಗರು ಬಿಜೆಪಿಯ ಸದಸ್ಯರಾದ ಗೋದಾವರಿ, ಚಾಂದಿನಿ ನಾಯ್ಕ ಹಾಗೂ ಸವಿತಾ ಹುರಕಡ್ಲಿ ಅವರ ಮೇಲೆ ಹಲ್ಲೆಗೆ ಮುಂದಾಗಿದ್ದರು.

ಈ ಸಂದರ್ಭ ಮಹಿಳಾ ಸದಸ್ಯರನ್ನು ಎಳೆದಾಡಿದ್ದ ವಿಡಿಯೋ ವೈರಲ್ ಆಗಿತ್ತು. ಈ ವರ್ತನೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು. ಈ ಎಳೆದಾಟದಲ್ಲಿ ಸದಸ್ಯೆ ಚಾಂದಿನಿ ನಾಯ್ಕ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಆಗ ಗಾಯಗೊಂಡಿದ್ದ ಚಾಂದಿನಿ ನಾಯಕ್ ಮೂರು ತಿಂಗಳ ಗರ್ಭಿಣಿಯಾಗಿದ್ದು, ಅವರಿಗೆ ಗರ್ಭಪಾತವಾಗಿಗಿರುವುದಾಗಿ ತಿಳಿದುಬಂದಿದೆ.

English summary
BJP member Chandini naik who was injured by an assault at mahalingapura purasabha election by siddu savadi and his followers Suffers Miscarriage,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X