ಬಾಗಲಕೋಟೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಂಪುಟ ವಿಸ್ತರಣೆ : ಬಾಗಲಕೋಟೆ ಜಿಲ್ಲೆಗೆ ಸಚಿವ ಸ್ಥಾನವಿಲ್ಲ?

|
Google Oneindia Kannada News

Recommended Video

H D Kumaraswamy Cabinet Expansion : ಸಂಪುಟ ವಿಸ್ತರಣೆಯಲ್ಲಿ ಬಾಗಲಕೋಟೆಗೆ ಸಚಿವ ಸ್ಥಾನ ಇಲ್ಲ

ಬಾಗಲಕೋಟೆ, ಡಿಸೆಂಬರ್ 05 : ಸಚಿವ ಸಂಪುಟ ವಿಸ್ತರಣೆ ಸಮಯದಲ್ಲಿ ಬಾಗಲಕೋಟೆ ಜಿಲ್ಲೆಗೆ ಸಚಿವ ಸ್ಥಾನ ನೀಡುವಂತೆ ಬೇಡಿಕೆ ಮುಂದಿಡಲಾಗಿತ್ತು. ಆದರೆ, ಜಿಲ್ಲೆಗೆ ಈ ಬಾರಿ ಸಚಿವ ಸ್ಥಾನ ಸಿಗುವುದಿಲ್ಲ ಎಂಬ ಅನುಮಾನ ಹುಟ್ಟಿಕೊಂಡಿದೆ. ಇದಕ್ಕೆ ಕಾರಣ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆ.

ಈ ಬಾರಿಯ ವಿಧಾನಸಭೆ ಚುನಾವಣೆ ಮುಗಿದ ಬಳಿಕ ಬಾಗಲಕೋಟೆ ಜಿಲ್ಲೆ ವಿಶೇಷ ಆಕರ್ಷಣೆಯಾಗಿದೆ. ಅದಕ್ಕೆ ಕಾರಣ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲೆಯ ಬಾದಾಮಿ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದಾರೆ.

ಬಾಗಲಕೋಟೆಗೊಂದು ಸಚಿವ ಸ್ಥಾನ ಕೊಡಿಬಾಗಲಕೋಟೆಗೊಂದು ಸಚಿವ ಸ್ಥಾನ ಕೊಡಿ

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲು ಕಂಡ ಸಿದ್ದರಾಮಯ್ಯ ಕೈ ಹಿಡಿದಿದ್ದು ಬಾದಾಮಿ. ಆದ್ದರಿಂದ, ಜಿಲ್ಲೆಗೊಂದು ಸಚಿವ ಸ್ಥಾನ ನೀಡಬೇಕು ಎಂಬ ಬೇಡಿಕೆಯನ್ನು ಜಿಲ್ಲಾ ಕಾಂಗ್ರೆಸ್ ನಾಯಕರು ಮುಂದಿಟ್ಟಿದ್ದರು. ಆದರೆ, ಬೇಡಿಕೆ ಈಡೇರುವುದು ಅನುಮಾನ.

ಚಾಮುಂಡೇಶ್ವರಿ ಸೋಲು ನೆನಪಿಸಿಕೊಂಡು ಬೇಸರಗೊಂಡ ಸಿದ್ದರಾಮಯ್ಯಚಾಮುಂಡೇಶ್ವರಿ ಸೋಲು ನೆನಪಿಸಿಕೊಂಡು ಬೇಸರಗೊಂಡ ಸಿದ್ದರಾಮಯ್ಯ

ಸೋಮವಾರ ಬಾದಾಮಿಗೆ ಸಿದ್ದರಾಮಯ್ಯ ಭೇಟಿ ನೀಡಿದ್ದರು. ಅಲ್ಲಿ ಕಾಂಗ್ರೆಸ್ ನಾಯಕರ ಜೊತೆ ಮಾತುಕತೆ ನಡೆಸುವಾಗ ಅವರು ಹೇಳಿದ ಮಾತು ಜಿಲ್ಲಾ ಕಾಂಗ್ರೆಸ್‌ ನಾಯಕರ ಅಸಮಾಧಾನಕ್ಕೆ ಕಾರಣವಾಗಿದೆ. ಜಿಲ್ಲೆಗೆ ಸಚಿವ ಸ್ಥಾನ ಸಿಗುವುದಿಲ್ಲ ಎಂಬುದನ್ನು ಖಾತ್ರಿ ಪಡಿಸಿದೆ.

ಸದ್ಯಕ್ಕೆ ಸಚಿವ ಸಂಪುಟ ವಿಸ್ತರಣೆ ಆಗೋಲ್ಲ : 5 ಕಾರಣಗಳುಸದ್ಯಕ್ಕೆ ಸಚಿವ ಸಂಪುಟ ವಿಸ್ತರಣೆ ಆಗೋಲ್ಲ : 5 ಕಾರಣಗಳು

ಸಿದ್ದರಾಮಯ್ಯ ಹೇಳಿದ್ದೇನು?

ಸಿದ್ದರಾಮಯ್ಯ ಹೇಳಿದ್ದೇನು?

ಬಾದಾಮಿಯಲ್ಲಿ ಮಾತನಾಡುವಾಗ ಸಿದ್ದರಾಮಯ್ಯ ಅವರು, 'ಈ ಬಾರಿಯು ಜಿಲ್ಲೆಗೆ ಸಚಿವ ಸ್ಥಾನ ಸಿಗುವುದಿಲ್ಲ. ನಾನು ಆಗೋಲ್ಲ, ಆನಂದ್ ನ್ಯಾಮಗೌಡ ಮೊದಲ ಬಾರಿಗೆ ಆಯ್ಕೆಯಾಗಿದ್ದಾರೆ' ಎಂದು ಹೇಳಿದ್ದಾರೆ.

ಯಾರು ಆಕಾಂಕ್ಷಿಗಳು

ಯಾರು ಆಕಾಂಕ್ಷಿಗಳು

ವಿಧಾನ ಪರಿಷತ್ ಸದಸ್ಯ ಎಸ್.ಆರ್.ಪಾಟೀಲ್, ಜಮಖಂಡಿ ಕ್ಷೇತ್ರದ ಶಾಸಕ ಆನಂದ್ ನ್ಯಾಮಗೌಡ ಅವರು ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದರು. ಆನಂದ್ ನ್ಯಾಮಗೌಡ ಅವರು ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಆದರೆ, ಅವರ ಬೆಂಬಲಿಗರು ಸಿದ್ದು ನ್ಯಾಮಗೌಡ ಅವರಿಗೆ ಸಚಿವ ಸ್ಥಾನ ಸಿಕ್ಕಿರಲಿಲ್ಲ. ಜಮಖಂಡಿ ಉಪ ಚುನಾವಣೆಯಲ್ಲಿ ಗೆದ್ದ ಆನಂದ್ ನ್ಯಾಮಗೌಡ ಅವರಿಗೆ ಸಚಿವ ಸ್ಥಾನ ನೀಡಿ ಎಂಬ ಬೇಡಿಕೆಯನ್ನು ಮುಂದಿಟ್ಟಿದ್ದರು.

ಹೈಕಮಾಂಡ್ ಭರವಸೆ ನೀಡಿತ್ತೇ?

ಹೈಕಮಾಂಡ್ ಭರವಸೆ ನೀಡಿತ್ತೇ?

ಜಮಖಂಡಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಯಗಳಿಸಿದರೆ ಜಿಲ್ಲೆಗೆ ಸಚಿವ ಸ್ಥಾನವನ್ನು ನೀಡುವ ಭರವಸೆಯನ್ನು ಕಾಂಗ್ರೆಸ್‌ ಹೈಕಮಾಂಡ್ ನೀಡಿತ್ತೇ?. ಇದಕ್ಕಾಗಿ ಪಕ್ಷದ ಎಲ್ಲಾ ನಾಯಕರು ಒಟ್ಟಾಗಿ ಚುನಾವಣೆಯಲ್ಲಿ ಕೆಲಸ ಮಾಡಿದ್ದರು. ಕಾಂಗ್ರೆಸ್ ಅಭ್ಯರ್ಥಿ ಆನಂದ್ ನ್ಯಾಮಗೌಡ ಅವರು ಗೆಲುವು ಸಾಧಿಸಿದ್ದರು. ಆದರೆ, ಈಗ ಸಚಿವ ಸ್ಥಾನ ಸಿಗುವುದು ಕಷ್ಟವಾಗಿದೆ.

ಸಿದ್ದರಾಮಯ್ಯ ಗೆಲ್ಲಿಸಿದ್ದೇವೆ

ಸಿದ್ದರಾಮಯ್ಯ ಗೆಲ್ಲಿಸಿದ್ದೇವೆ

ಜಿಲ್ಲಾ ಕಾಂಗ್ರೆಸ್ ಮುಖಂಡರು ಸಚಿವ ಸ್ಥಾನಕ್ಕಾಗಿ ಬೇಡಿಕೆ ಇಟ್ಟಿದ್ದರು, ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರನ್ನು ಬಾದಾಮಿ ಕ್ಷೇತ್ರದಲ್ಲಿ ಗೆಲ್ಲಿಸಿದ್ದೇವೆ. ಅದಕ್ಕಾಗಿ ಸಚಿವ ಸ್ಥಾನ ನೀಡಬೇಕು ಎಂದು ಬೇಡಿಕೆ ಮುಂದಿಟ್ಟಿದ್ದರು. ಸಚಿವ ಸಂಪುಟ ವಿಸ್ತರಣೆ ವೇಳೆ ಜಿಲ್ಲೆಗೆ ಸಚಿವ ಸ್ಥಾನ ಸಿಗುವ ನಿರೀಕ್ಷೆ ಎಲ್ಲರದ್ದಾಗಿತ್ತು.

ಇಂದು ಮಹತ್ವದ ಸಭೆ

ಇಂದು ಮಹತ್ವದ ಸಭೆ

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಸಂಪುಟದಲ್ಲಿ 8 ಸಚಿವ ಸ್ಥಾನಗಳು ಖಾಲಿ ಇವೆ. ಇವುಗಳಲ್ಲಿ 6 ಕಾಂಗ್ರೆಸ್‌ಗೆ, 2 ಜೆಡಿಎಸ್ ಪಕ್ಷಕ್ಕೆ ಸಿಗಲಿವೆ. ಆದರೆ, ಸಂಪುಟ ವಿಸ್ತರಣೆ ಯಾವಾಗ ನಡೆಯಲಿದೆ? ಎಂಬುದು ಸದ್ಯದ ಪ್ರಶ್ನೆ.

ಇಂದು ಸಮನ್ವಯ ಸಮಿತಿ ಸಭೆ ನಡೆಯಲಿದ್ದು, ಸಭೆಯಲ್ಲಿ ಸಂಪುಟ ವಿಸ್ತರಣೆ ದಿನಾಂಕವನ್ನು ಅಂತಿಮಗೊಳಿಸುವ ಸಾಧ್ಯತೆ ಇದೆ.

English summary
According to Former Chief Minister and MLA of Badami Siddaramaiah Bagalkot district will not get minister post in Cabinet Expansion. District Congress leaders demand for minister post.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X