ಬಾಗಲಕೋಟೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

SC/ST ಸಮುದಾಯದವರಿಗೆ 75 ಯುನಿಟ್ ಉಚಿತ ವಿದ್ಯುತ್: ಸಿಎಂ ಬೊಮ್ಮಾಯಿ

|
Google Oneindia Kannada News

ಬಾಗಲಕೋಟೆ, ಏಪ್ರಿಲ್ 23: ರಾಜ್ಯ ವಿಧಾನಸಭೆ ಚುನಾವಣೆ ಒಂದು ವರ್ಷ ಬಾಕಿ ಇರುವಾಗಲೇ ರಾಜಕೀಯದವರು ಪೂರಕ ವಾತಾವರಣವನ್ನು ಸೃಷ್ಟಿಮಾಡುತ್ತಿದ್ದಾರೆ ಎನಿಸುತ್ತಿದೆ. ಅಮ್ ಆದ್ಮಿಯ ಮುಖಂಡ ಮತ್ತು ದೆಹಲಿಯ ಸಿಎಂ ಅರವಿಂದ ಕೇಜ್ರಿವಾಲ್ ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಸಮಾವೇಶದಲ್ಲಿ ಮಾತನಾಡುತ್ತಾ ತಮ್ಮ ರಾಜ್ಯದಲ್ಲಿ ಉಚಿತ ವಿದ್ಯುತ್ ಮತ್ತು ನೀರಿನ ಬಗ್ಗೆೆ ತಿಳಿಸಿದ್ದರು. ಇದೀಗ ಮುಖ್ಯಮಂತ್ರಿ ಬಸವರಾಾಜ ಬೊಮ್ಮಾಯಿ ಎಸಿ ಎಸ್ಟಿ ಸಮುದಾಯಕ್ಕೆ ಉಚಿತ ವಿದ್ಯುತ್ ನೀಡುವ ಯೋಜನೆಯಿದೆ ಎಂದು ಘೋಷಿದ್ದಾರೆ.

ಬಾಗಲಕೋಟೆಯ ವಿವಿಧ ಅಭಿವೃದ್ದಿ ಕಾರ್ಯಕ್ರಮಗಳ ಶಂಕು ಸ್ಥಾಪನೆಗೆ ತೆರಳಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಮಹತ್ವದ ಯೋಜನೆಯಿದೆ ಎಂದು ತಿಳಿಸಿದ್ದಾರೆ. ಎಸ್ ಸಿ ಎಟಿ ಸಮುದಾಯಕ್ಕೆ ತಿಂಗಳಿಗೆ 75 ಯೂನಿಟ್‌ಗಳ ವಿದ್ಯುತ್ ಉಚಿತವಾಗಿ ನೀಡಲು ಯೋಜನೆ ರೂಪಿಸಲಾಗ್ತಿದೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆೆ.

ಈ ಭಾಗದ ರೈತರ ಬಹುದಿನದ ಬೇಡಿಕೆಯಾಗಿರುವ ಸಸಾಲಟ್ಟಿ ಶಿವಲಿಂಗೇಶ್ವರ ಹಾಗೂ ಮಂಟೂರ ಮಹಾಲಕ್ಷ್ಮೀ ನೀರಾವರಿ ಯೋಜನೆ ಶೀಘ್ರ ಪೂರ್ಣಗೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

CM Basavaraj Bommai announced Future plan 75 unit free electricity For SC and ST community

ಮುಧೋಳ ನಗರದ ಆರ್‍ಎಂಜಿ ಕಾಲೇಜು ಆವರಣದಲ್ಲಿ ಶುಕ್ರವಾರ ನಡೆದ ವಿವಿಧ ಯೋಜನೆಗಳ ಶಿಲಾನ್ಯಾಸ ಹಾಗೂ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಅವರು, ಮುಧೋಳದ ಜನರ ನಾಡಿಮಿಡಿತ ಅರಿತಿರುವ ಸಚಿವ ಗೋವಿಂದ ಕಾರಜೋಳ ಅವರು ಈ ಭಾಗದ ಎಲ್ಲ ಬೇಕು ಬೇಡಿಕೆಗಳನ್ನು ಪೂರೈಸುವತ್ತ ಹೆಚ್ಚು ಗಮನ ಹರಿಸಿದ್ದಾರೆ.

ನೆಲ, ಜಲ, ಭಾಷೆ ಅಭಿವೃದ್ಧಿಗಾಗಿ ನಾವು ಯಾವುದೇ ರೀತಿಯ ರಾಜಕಾರಣಕ್ಕೆ ಮುಂದಾಗುವುದಿಲ್ಲ. ಸರ್ವಜನರ ಶ್ರೇಯೋಭಿವೃದ್ಧಿಗೆ ನಮ್ಮ ಸರ್ಕಾರ ನಿರಂತರವಾಗಿ ಶ್ರಮಿಸುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಎಸ್‌ಸಿ , ಎಸ್ಟಿಗಳಿಗೆ 75 ಯುನಿಟ್ ಉಚಿತ ವಿದ್ಯುತ್

ನಮ್ಮ ಸರ್ಕಾರದ ಅವಧಿಯಲ್ಲಿ ಸ್ರ್ತೀಶಕ್ತಿ ಅಭಿವೃದ್ಧಿಗೆ ಆಂಕರ್ ಬ್ಯಾಂಕ್, ಹಾಲು ಉತ್ಪಾದಕರಿಗೆ ನಂದಿನಿ ಕ್ಷೀರ ಬ್ಯಾಂಕ್, ಸಂಧ್ಯಾ ಸುರಕ್ಷಾ ಹಾಗೂ ಅಂಗವಿಕಲರ ಮಾಸಾಶನ ಹೆಚ್ಚಳದಂತಹ ಅನೇಕ ರೀತಿ ಅಭಿವೃದ್ಧಿಯ ಕಾರ್ಯನಿರ್ವಹಿಸುತ್ತಿದ್ದೇವೆ. ಮುಂದಿನ ದಿನಗಳಲ್ಲಿ ರಾಜ್ಯದ ಪರಿಶಿಷ್ಟ ಜಾತಿ/ಪಂಗಡದವರಿಗಾಗಿ 75 ಯೂನಿಟ್ ವಿದ್ಯುತ್ ಉಚಿತ ವಿತರಿಸುವ ಯೋಜನೆ ಹಾಕಿಕೊಂಡಿದ್ದೇವೆ ಎಂದು ತಿಳಿಸಿದರು.

ಕೃಷ್ಣ ಮೇಲ್ದಂಡೆ ಯೋಜನೆಯಿಂದ 13 ಲಕ್ಷ ಹೆಕ್ಟೇರ್ ಗೆ ನೀರು:

ಕೃಷ್ಣಾ ಮೇಲ್ದಂಡೆ ಯೋಜನೆಯ 3ನೇ ಹಂತದ ಯೋಜನೆ ಪೂರ್ಣಗೊಳಿಸಲು ಅಗತ್ಯ ಕ್ರಮ ಕೈಗೊಂಡು 524ಮೀ.ಎತ್ತರಿಸಿ 13 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಒದಗಿಸಲು ನಮ್ಮ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ನೀರಾವರಿ ಸಚಿವ ಗೋವಿಂದ ಕಾರಜೋಳರ ಶ್ಲಾಘನೆ:

ಇದೇ ವೇಳೆ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಮಾತನಾಡಿ, ಈ ಭಾಗದ ಒಟ್ಟು 38 ಕಾಮಗಾರಿ ಹಾಗೂ ಶಿಲಾನ್ಯಾಸಕ್ಕೆ ಆಗಮಿಸಿರುವ ನೆಚ್ಚಿನ ಮುಖ್ಯಮಂತ್ರಿಗಳು ನಮ್ಮ ಬಹುದಿನದ ಸಸಾಲಟ್ಟಿ ಶಿವಲಿಂಗೇಶ್ವರ ಹಾಗೂ ಮಂಟೂರ ಮಹಾಲಕ್ಷ್ಮೀ ಯೋಜನೆಗೆ 500 ಕೋಟಿ ರೂ. ಮಂಜೂರು ಮಾಡಿರುವ ಕಾರ್ಯ ಶ್ಲಾಘನೀಯ. ಈ ನೀರಾವರಿ ಯೋಜನೆಯಿಂದ ರಬಕವಿ-ಬನಹಟ್ಟಿ, ಮುಧೋಳ, ಬೀಳಗಿ ತಾಲೂಕಿನ 106 ಹಳ್ಳಿಗಳ ಬಾಧಿತ ಪ್ರದೇಶಗಳಿಗೆ ನೀರುಣಿಸು ಯೋಜನೆ ಸಾಕಾರವಾಗಲಿದೆ ಎಂದು ಹೇಳಿದರು. ನನ್ನ ಶಾಸಕ ಆಗಿರುವ ಆಡಳಿತದ ಅವಧಿಯಲ್ಲಿ 26 ಬ್ಯಾರೇಜ್ ಹಾಗೂ 11 ಕೆರೆಗಳನ್ನು ಅಭಿವೃದ್ಧಿಪಡಿಸಿದ್ದೇನೆ. 35 ವಸತಿ ಶಾಲಗಳ ಮೂಲಕ ವಿದ್ಯಾರ್ಥಿಗಳ ಓದಿಗೆ ಅನುಕೂಲ ಕಲ್ಪಿಸಿದ್ದೇನೆ ಎಂದು ಹೇಳಿದರು.

Recommended Video

ಇಷ್ಟು ದಿನ ಇಲ್ಲಿದ್ದು ನಾವೇ ಏನು ಮಾಡೋಕ್ ಆಗಿಲ್ಲ ಇನ್ನು AAP ಬಂದು ಏನ್ ಮಾಡುತ್ತೆ | Oneindia Kannada

ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಪಾಟೀಲ, ಬೃಹತ್ ಕೈಗಾರಿಕೆ ಸಚಿವ ಮುರುಗೇಶ ನಿರಾಣಿ, ಸಂಸದ ಪಿ.ಸಿ. ಗದ್ದಿಗೌಡರ, ಶಾಸಕರಾದ ಡಾ. ವೀರಣ್ಣ ಚರಂತಿಮಠ, ಸಿದ್ದು ಸವದಿ, ದೊಡ್ಡನಗೌಡ ಪಾಟೀಲ, ವಿಧಾನಪರಿಷತ್ ಸದಸ್ಯರಾದ ಅರುಣ ಶಹಾಪುರ, ಹನಮಂತ ನಿರಾಣಿ, ಪಿ.ಎಚ್. ಪೂಜಾರ, ಮಾಜಿ ಶಾಸಕರಾದ ಶ್ರೀಕಾಂತ ಕುಲಕರ್ಣಿ, ನಾರಾಯಣಸಾ ಭಾಂಡಗೆ, ವಿಧಾನಪರಿಷತ್ ಮಾಜಿ ಸದಸ್ಯ ಜಿ.ಎಸ್. ನ್ಯಾಮಗೌಡ, ನಗರಸಭೆ ಸದಸ್ಯ ಗುರುಪಾದ ಕುಳಲಿ, ಬಿಜೆಪಿ ಗ್ರಾಮೀಣ ಘಟಕ ಅಧ್ಯಕ್ಷ ಹನಮಂತ ತುಳಸಿಗೇರಿ, ನಗರ ಘಟಕ ಅಧ್ಯಕ್ಷ ಡಾ.ರವಿ ನಂದಗಾವಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ನಾರಾಯಣ ಯಡಹಳ್ಳಿ, ಹಿರಿಯ ಮುಖಂಡ ಕೆ.ಆರ್. ಮಾಚಪ್ಪನವರ, ನಗರ ಯೋಜನಾ ಪ್ರಾಧಿಕಾರ ಘಟಕ ಅಧ್ಯಕ್ಷ ಪ್ರಕಾಶ ವಸ್ತ್ರದ, ಜಿಲ್ಲಾ ಪರಿಷತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಟಿ.ಭೂಬಾಲನ, ಎಸ್ಪಿ ಲೋಕೇಶ ಜಗಲಾಸರ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

English summary
CM Basavaraja Bommai announced his plan to provide 75 units of free electricity to the Scheduled Castes and Tribes during the various development workshops held in Bagalkote..
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X