ಬಾಗಲಕೋಟೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಾದಾಮಿಯಲ್ಲಿ ಸ್ಪರ್ಧೆ; ಇಕ್ಕಟ್ಟಿಗೆ ಸಿಲುಕಿದ ಸಿದ್ದರಾಮಯ್ಯ!

|
Google Oneindia Kannada News

ಬಾಗಲಕೋಟೆ, ಡಿಸೆಂಬರ್ 07; ಮುಂದಿನ ಚುನಾವಣೆಯಲ್ಲಿ ಬಾದಾಮಿ ಕ್ಷೇತ್ರದಿಂದಲೇ ಸ್ಪರ್ಧಿಸುತ್ತೇನೆ ಎಂದು ಹೇಳಿದ್ದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಇಕ್ಕಟ್ಟಿಗೆ ಸಿಲುಕಿದ್ದಾರೆ. ಕಾಂಗ್ರೆಸ್ ಪಕ್ಷದ ನಾಯಕರೇ ಸ್ಪರ್ಧೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಚುನಾವಣೆಗೆ ಇನ್ನೂ ವರ್ಷಗಳು ಬಾಕಿ ಇದೆ, ಆದರೆ ಈಗಿನಿಂದಲೇ ಚುನಾವಣೆ ತಯಾರಿ ಆರಂಭಿಸಬೇಕು.

ಸೋಮವಾರ ಮಾಜಿ ಶಾಸಕ ಬಿ. ಬಿ. ಚಿಮ್ಮನಕಟ್ಟಿ ಸಿದ್ದರಾಮಯ್ಯಗೆ ನೇರವಾಗಿ ಈ ಕುರಿತು ಪ್ರಶ್ನಿಸಿದ್ದಾರೆ. ವಿಧಾನ ಪರಿಷತ್ ಚುನಾವಣೆಗೆ ಪ್ರಚಾರ ನಡೆಸಲು ಸಿದ್ದರಾಮಯ್ಯ ತೆರಳಿದ್ದಾಗ ವೇದಿಕೆಯಲ್ಲಿ ಈ ಪ್ರಶ್ನೆ ಎದುರಿಸಿದ್ದಾರೆ. ಇದರಿಂದಾಗಿ ಸಿದ್ದರಾಮಯ್ಯ ಮುಂದಿನ ಕ್ಷೇತ್ರ ಯಾವುದು? ಎಂಬ ಪ್ರಶ್ನೆ ಹುಟ್ಟಿಕೊಂಡಿದೆ.

ಬಾದಾಮಿ : 3 ದಿನ ವಾಸ್ತವ್ಯ ಹೂಡಲಿದ್ದಾರೆ ಸಿದ್ದರಾಮಯ್ಯಬಾದಾಮಿ : 3 ದಿನ ವಾಸ್ತವ್ಯ ಹೂಡಲಿದ್ದಾರೆ ಸಿದ್ದರಾಮಯ್ಯ

"ಸ್ವ ಕ್ಷೇತ್ರದಲ್ಲಿ ಗೆಲ್ಲುವ ಯೋಗ್ಯತೆ ಇಲ್ಲವೆಂದರೆ ಇಲ್ಲಿ ಯಾಕ ನಿಲ್ಲಬೇಕು?. ನಮಗೆ ಯಾಕ ಗಂಟ ಬಿದ್ರಿ ನೀವು?" ಎಂದು ವೇದಿಕೆಯಲ್ಲಿಯೇ ಸಿದ್ದರಾಮಯ್ಯರನ್ನು ಪ್ರಶ್ನಿಸಿದರು. ಈ ಸಂದರ್ಭದಲ್ಲಿ ಹಲವು ಕಾಂಗ್ರೆಸ್ ಮುಖಂಡರು ವೇದಿಯಕೆಯಲ್ಲಿದ್ದರು.

ಬಿಜೆಪಿ- ಜೆಡಿಎಸ್ ಒಳ ಒಪ್ಪಂದ: ಸಿದ್ದರಾಮಯ್ಯಬಿಜೆಪಿ- ಜೆಡಿಎಸ್ ಒಳ ಒಪ್ಪಂದ: ಸಿದ್ದರಾಮಯ್ಯ

2018ರ ವಿಧಾನಸಭೆ ಚುನಾವಣೆಯಲ್ಲಿ ಸಿದ್ದರಾಮಯ್ಯ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರ ಮತ್ತು ಬಾಗಲಕೋಟೆಯ ಬಾದಾಮಿ ಕ್ಷೇತ್ರದಿಂದ ಕಣಕ್ಕಿಳಿದಿದ್ದರು. ಚಾಮುಂಡೇಶ್ವರಿಯಲ್ಲಿ ಸೋತು ಬಾದಾಮಿಯಲ್ಲಿ ಗೆಲುವು ಕಂಡಿದ್ದರು. ಬಾದಾಮಿಯಲ್ಲಿಯೂ ಪ್ರಬಲ ಪೈಪೋಟಿ ಎದುರಾಗಿತ್ತು. ಬಿಜೆಪಿಯಿಂದ ಕಣಕ್ಕಿಳಿದಿದ್ದ ಬಿ. ಶ್ರೀರಾಮುಲು 65,903 ಮತಗಳನನ್ನು ಪಡೆದು ಸಿದ್ದರಾಮಯ್ಯಗೆ ಪ್ರಬಲ ಪೈಪೋಟಿ ನೀಡಿದ್ದರು.

ಸಿದ್ದರಾಮಯ್ಯ ತಿದ್ದಿಕೊಳ್ಳದಿದ್ದರೆ ಬಾದಾಮಿ ಜ‌ನ ಬುದ್ಧಿ ಕಲಿಸ್ತಾರೆ: ಅಶೋಕ ಸಿದ್ದರಾಮಯ್ಯ ತಿದ್ದಿಕೊಳ್ಳದಿದ್ದರೆ ಬಾದಾಮಿ ಜ‌ನ ಬುದ್ಧಿ ಕಲಿಸ್ತಾರೆ: ಅಶೋಕ

ಬಾದಾಮಿ ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದರು

ಬಾದಾಮಿ ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದರು

2018ರ ವಿಧಾನಸಭೆ ಚುನಾವಣೆಯಲ್ಲಿ ಬಾದಾಮಿ ಕ್ಷೇತ್ರವನ್ನು ಬಿ. ಬಿ. ಚಿಮ್ಮನಕಟ್ಟಿ ಸಿದ್ದರಾಮಯ್ಯಗೆ ಬಿಟ್ಟುಕೊಟ್ಟಿದ್ದರು. ಸಿದ್ದರಾಮಯ್ಯ ಚುನಾವಣೆಯಲ್ಲಿ ಗೆದ್ದಿದ್ದರು, ಸೋಮವಾರ ಬೆಳಗ್ಗೆ ಸಿದ್ದರಾಮಯ್ಯ ಮತ್ತೆ ಬಾದಾಮಿಯಿಂದಲೇ ಕಣಕ್ಕಿಳಿಯುತ್ತೇನೆ ಎಂದು ಹೇಳಿಕೆ ನೀಡಿದ್ದರು. ಆದರೆ ವೇದಿಕೆಯಲ್ಲಿ ಬಿ. ಬಿ. ಚಿಮ್ಮನಕಟ್ಟಿ ಕೇಳಿದ ಪ್ರಶ್ನೆಯಿಂದಾಗಿ ಸಿದ್ದರಾಮಯ್ಯ ಇಕ್ಕಟ್ಟಿಗೆ ಸಿಕಲುಕಿದ್ದಾರೆ.

ಇಲ್ಲಿಗೆ ಬಂದರೆ ನಾನೇನು ಮಾಡಬೇಕು?

ಇಲ್ಲಿಗೆ ಬಂದರೆ ನಾನೇನು ಮಾಡಬೇಕು?

ಬಿ. ಬಿ. ಚಿಮ್ಮನಕಟ್ಟಿ ಮಾತನಾಡಿ, "ಮುಂದಿನ ಸಲ ಸಿದ್ದರಾಮಯ್ಯ ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಾರೆ. ಹಿಂದಿನ ಚುನಾವಣೆಯಲ್ಲಿಯೂ ಆ ಕ್ಷೇತ್ರದಲ್ಲಿ ಟಿಕೆಟ್ ಕೊಟ್ಟಿದ್ದರೆ ಸಿದ್ದರಾಮಯ್ಯ ಗೆಲ್ಲುತ್ತಿದ್ದರು. ಅವರು ಅಲ್ಲಿಯೇ ಸ್ಪರ್ಧಿಸಬೇಕು. ಸ್ವ ಕ್ಷೇತ್ರ ಚಾಮುಂಡೇಶ್ವರಿಯಲ್ಲಿಯೂ ಸಿದ್ದರಾಮಯ್ಯ ಗೆಲ್ಲಬೇಕು. ಇಲ್ಲಿಗೆ ಬಂದರೆ ನಾನೇನು ಮಾಡಬೇಕು?" ಎಂದು ಪ್ರಶ್ನಿಸಿದರು.

ನಾನು ಮೊದಲು ಹುಲಿ ಆಗಿದ್ದೆ

ನಾನು ಮೊದಲು ಹುಲಿ ಆಗಿದ್ದೆ

ಬಿ. ಬಿ. ಚಿಮ್ಮನಕಟ್ಟಿ ಭಾಷಣ ಆರಂಭಿಸಿದಾಗ ಕಾಂಗ್ರೆಸ್ ಕಾರ್ಯಕರ್ತರು ಹೌದು ಹುಲಿಯಾ ಎಂದು ಘೋಷಣೆ ಕೂಗಿದರು. ಆಗ ಮಾತನಾಡಿದ ಅವರು, "ನಾನು ಮೊದಲು ಹುಲಿ ಆಗಿದ್ದೆ, ಈಗ ಇಲಿ ಮಾಡ್ಯಾರ, ಬೆಂಬಲಿಗರು ಮನಸ್ಸು ಮಾಡಿದರೆ ಮತ್ತೆ ಹುಲಿ ಅಕ್ಕೀನಿ, ಮಂತ್ರಿ ಅಕ್ಕೀನಿ" ಎಂದು ಸಿದ್ದರಾಮಯ್ಯ ಮುಂದೆಯೇ ಹೇಳಿದರು.

ಸಿದ್ದರಾಮಯ್ಯ ಹೇಳಿದ್ದೇನು?

ಸಿದ್ದರಾಮಯ್ಯ ಹೇಳಿದ್ದೇನು?

ಇನ್ನೂ ಮುಂದಿನ ಚುನಾವಣೆ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ, "ನನಗೆ ಜನರು ಎಲ್ಲಿ ಪ್ರೀತಿಯಿಂದ ಕರೆಯುತ್ತಾರೋ ಅಲ್ಲಿ ಚುನಾವಣೆಗೆ ನಿಲ್ಲುವೆ. ಬಾದಾಮಿಯಲ್ಲಿ ಕರೆಯುತ್ತಾರೆ, ಮುಂದಿನ ಬಾರಿ ಅಲ್ಲಿಯೇ ನಿಲ್ಲುತ್ತೇನೆ" ಎಂದು ಸಿದ್ದರಾಮಯ್ಯ ಹೇಳಿದರು.

ಹಲವು ದಿನಗಳಿಂದ ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಕಣಕ್ಕಿಳಿಯುತ್ತಾರೆ? ಎಂಬ ಚರ್ಚೆಗಳು ನಡೆಯುತ್ತಿವೆ. ಬೆಂಗಳೂರಿನ ಚಾಮರಾಜಪೇಟೆ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ ಎಂಬ ಸುದ್ದಿಗಳು ಸಹ ಹಬ್ಬಿವೆ. ಮೈಸೂರಿನಿಂದಲೇ ಸಿದ್ದರಾಮಯ್ಯ ಕಣಕ್ಕಿಳಿಯುತ್ತಾರೆ ಎಂಬ ವರದಿಗಳು ಇದ್ದು, ಯಾವ ಕ್ಷೇತ್ರದಿಂದ ಸ್ಪರ್ಧೆ ಎಂಬ ಗುಟ್ಟನ್ನು ಅವರು ಬಿಟ್ಟುಕೊಟ್ಟಿಲ್ಲ.

ಸಿದ್ದರಾಮಯ್ಯ ಕ್ಷೇತ್ರ ಯಾವುದು?

ಸಿದ್ದರಾಮಯ್ಯ ಕ್ಷೇತ್ರ ಯಾವುದು?

ವರುಣಾ ಕ್ಷೇತ್ರವನ್ನು ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯಗೆ ಬಿಟ್ಟುಕೊಟ್ಟಿದ್ದರು. ಬಳಿಕ ಚಾಮುಂಡೇಶ್ವರಿ ಕ್ಷೇತ್ರದಿಂದ ಕಣಕ್ಕಿಳಿದಿದ್ದರು. ಅಲ್ಲಿಯೂ ಸೋಲಿನ ಸೂಚನೆ ಸಿಕ್ಕಿದ್ದರಿಂದ ಬಾಗಲಕೋಟೆಯ ಬಾದಾಮಿ ಕ್ಷೇತ್ರದಿಂದಲೂ ಸ್ಪರ್ಧೆ ಮಾಡಿದ್ದರು. ಆದರೆ 2023ರ ಚುನಾವಣೆಯಲ್ಲಿ ಸಿದ್ದರಾಮಯ್ಯ ಕಣಕ್ಕಿಳಿಯುವ ಕ್ಷೇತ್ರದ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ.

Recommended Video

ಮೈದಾನದಲ್ಲಿ ಅಂಪೈರ್ ಗೆ ಗೇಲಿ ಮಾಡಿದ ವಿರಾಟ್ | Oneindia Kannada

English summary
Congress leaders opposed for Siddaramaiah contest from Badami assembly seat for 2023 assembly elections.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X