ಬಾಗಲಕೋಟೆ: ಒಲೆ ಹಚ್ಚಿ ಪ್ರತಿಭಟನೆ ನಡೆಸಿದ ಮಹಿಳಾ ಕಾಂಗ್ರೆಸ್
ಬಾಗಲಕೋಟೆ, ಮೇ.27 : ಕೇಂದ್ರ ಸರ್ಕಾರದ ಆಡಳಿತ ವೈಫಲ್ಯ ಖಂಡಿಸಿ ನಗರದಲ್ಲಿ ಇಂದು ಭಾನುವಾರ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ ನಡೆಸಲಾಯಿತು.
ನಗರದ ಬಸವೇಶ್ವರ ವೃತ್ತದಲ್ಲಿ ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮಹಿಳಾ ಘಟಕದವರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ತೈಲ ಹಾಗೂ ಅಡುಗೆ ಅನಿಲದ ಬೆಲೆ ಹೆಚ್ಚಳ ಖಂಡಿಸಿ ಒಲೆ ಹಚ್ಚಿ ಅಡುಗೆ ಮಾಡುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯ ವೇಳೆ ಮಾತನಾಡಿದ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ರಕ್ಷಿತಾ ಈಟಿ ಅವರು ಕೇಂದ್ರ ಸರ್ಕಾರ ಪದೇ ಪದೆ ತೈಲ ಬೆಲೆ ಹಾಗೂ ಅಡುಗೆ ಅನಿಲ ಬೆಲೆ ಹೆಚ್ಚಳ ಮಾಡುತ್ತಿದೆ ಎಂದು ಆರೋಪಿಸಿದರು.

ಹಿಂದೆ ಯುಪಿಎ ಸರ್ಕಾರ ಇದ್ದ ಸಂದರ್ಭದಲ್ಲಿ ಅಡುಗೆ ಅನಿಲ ಕೇವಲ 300 ರೂ.ಇತ್ತು. ಆದರೆ ಈಗ 800 ರೂ. ಹೆಚ್ಚಳವಾಗಿದೆ. ಹೀಗೆ ಪದೇ ಪದೆ ಬೆಲೆ ಹೆಚ್ಚಳ ಮಾಡುತ್ತಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಕೈಗೊಳ್ಳುವುದಾಗಿ ಹೇಳಿದರು.












Click it and Unblock the Notifications