ಬಾಗಲಕೋಟೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಾಗಲಕೋಟೆ: ಒಲೆ ಹಚ್ಚಿ ಪ್ರತಿಭಟನೆ ನಡೆಸಿದ ಮಹಿಳಾ ಕಾಂಗ್ರೆಸ್

By ಬಾಗಲಕೋಟೆ ಪ್ರತಿನಿಧಿ
|
Google Oneindia Kannada News

ಬಾಗಲಕೋಟೆ, ಮೇ.27 : ಕೇಂದ್ರ ಸರ್ಕಾರದ ಆಡಳಿತ ವೈಫಲ್ಯ ಖಂಡಿಸಿ ನಗರದಲ್ಲಿ‌ ಇಂದು ಭಾನುವಾರ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ ನಡೆಸಲಾಯಿತು.

ನಗರದ ಬಸವೇಶ್ವರ ವೃತ್ತದಲ್ಲಿ ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮಹಿಳಾ ಘಟಕದವರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ತೈಲ ಹಾಗೂ ಅಡುಗೆ ಅನಿಲದ ಬೆಲೆ ಹೆಚ್ಚಳ ಖಂಡಿಸಿ ಒಲೆ ಹಚ್ಚಿ ಅಡುಗೆ ಮಾಡುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದರು.

ಮೋದಿ ಸರಕಾರದ ವಿರುದ್ಧ ಮಹಿಳಾ ಕಾಂಗ್ರೆಸ್ ಪ್ರತಿಭಟನೆಮೋದಿ ಸರಕಾರದ ವಿರುದ್ಧ ಮಹಿಳಾ ಕಾಂಗ್ರೆಸ್ ಪ್ರತಿಭಟನೆ

ಪ್ರತಿಭಟನೆಯ ವೇಳೆ ಮಾತನಾಡಿದ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ರಕ್ಷಿತಾ ಈಟಿ ಅವರು ಕೇಂದ್ರ ಸರ್ಕಾರ ಪದೇ ಪದೆ ತೈಲ ಬೆಲೆ ಹಾಗೂ ಅಡುಗೆ ಅನಿಲ ಬೆಲೆ ಹೆಚ್ಚಳ ಮಾಡುತ್ತಿದೆ ಎಂದು ಆರೋಪಿಸಿದರು.

Congress protested against failure of the central governments administration

ಹಿಂದೆ ಯುಪಿಎ ಸರ್ಕಾರ ಇದ್ದ ಸಂದರ್ಭದಲ್ಲಿ ಅಡುಗೆ ಅನಿಲ ಕೇವಲ 300 ರೂ.ಇತ್ತು. ಆದರೆ ಈಗ 800 ರೂ. ಹೆಚ್ಚಳವಾಗಿದೆ. ಹೀಗೆ ಪದೇ ಪದೆ ಬೆಲೆ ಹೆಚ್ಚಳ ಮಾಡುತ್ತಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಕೈಗೊಳ್ಳುವುದಾಗಿ ಹೇಳಿದರು.

English summary
Congress activists on Sunday protested against the failure of the central government's administration. He also protested against the increase in oil and gas prices.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X