• search
 • Live TV
ಬಾಗಲಕೋಟೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕಾರು ಅಪಘಾತ: ಡಿಸಿಎಂ ಲಕ್ಷಣ್ ಸವದಿ ಪುತ್ರ ಚಿದಾನಂದ್ ಹೇಳಿದ್ದೇನು?

|
Google Oneindia Kannada News

ಬಾಗಲಕೋಟೆ, ಜುಲೈ 06: ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಪುತ್ರ ಚಿದಾನಂದ್ ಕಾರು ಅಪಘಾತದ ಕುರಿತು ಮಾಹಿತಿ ನೀಡಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಕೂಡಲಸಂಗಮ ಕ್ರಾಸ್ ಬಳಿಯ ಚಿತ್ರದುರ್ಗ-ಸೊಲ್ಹಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ.

ಕೊಡ್ಲೆಪ್ಪ ಬೋಳಿ ಮೃತ ಬೈಕ್ ಸವಾರ. ಕುಡ್ಲೆಪ್ಪ ಹೊಲದಿಂದ ಮನೆಗೆ ಹಿಂದಿರುಗುವಾಗ ಅಪಘಾತ ಸಂಭವಿಸಿದೆ. ಕಾರ್ ಡಿಕ್ಕಿಯಾಗುತ್ತಿದ್ದಂತೆ ಕೂಡ್ಲೆಪ್ಪ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೂಡ್ಲೆಪ್ಪ ಸಾವನ್ನಪ್ಪಿದ್ದಾರೆ.

ಏಕಾಏಕಿ ಬೈಕ್ ಅಡ್ಡಬಂದಿದ್ದರಿಂದ ಅಪಘಾತ ಸಂಭವಿಸಿದೆ ಎಂದು ಚಿದಾನಂದ್ ಹೇಳಿದ್ದಾರೆ. ಅಂಜನಾದ್ರಿ ಬೆಟ್ಟದಿಂದ ಹಿಂದಿರುಗುವಾಗ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಒಟ್ಟು ಎರಡು ಕಾರುಗಳಲ್ಲಿ ನಾವು 10 ಜನ ಅಂಜನಾದ್ರಿ ಬೆಟ್ಟಕ್ಕೆ ಹೋಗಿದ್ದೆವು.

ನನ್ನ ಕಾರ್ ಸುಮಾರು 30 ಕಿಲೋ ಮೀಟರ್ ದೂರದಲ್ಲಿತ್ತು, ಹಿಂದಿನಿಂದ ಬರುತ್ತಿದ್ದ ನನ್ನ ಕಾರ್ ಅಪಘಾತಕ್ಕೆ ಒಳಗಾಗಿದ್ದು, ಅದರಲ್ಲಿ ಸ್ನೇಹಿತರಿದ್ದರು. ನಮ್ಮ ಚಾಲಕನೇ ಕಾರ್ ಡ್ರೈವ್ ಮಾಡುತ್ತಿದ್ದ.

ಅಪಘಾತವಾದ ಕೂಡಲೇ ಚಾಲಕ ನನಗೆ ಫೋನ್ ಮಾಡಿದರು. ಆಗ ಕೂಡಲೇ ಬೈಕ್ ಸವಾರನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹಾಗೆಯೇ ಸ್ಥಳೀಯ ಪೊಲೀಸ್ ಠಾಣೆಗೆ ಮಾತನಾಡಿದ್ದೇನೆ. ನಮ್ಮ ಸ್ನೇಹಿತರಿಬ್ಬರಿಗೆ ಆಸ್ಪತ್ರೆ ವೆಚ್ಚ ನೀಡುವುದಾಗಿ ಹೇಳಿದ್ದೇನೆ ಎಂದು ಹೇಳಿದರು.

ಯಾರ ಕೊರಳ ಪಟ್ಟಿಯನ್ನು ನಾವು ಹಿಡಿದಿಲ್ಲ. ನನ್ನ ವಿರುದ್ಧ ಕೇಳಿ ಬಂದಿರುವ ಎಲ್ಲ ಆರೋಪಗಳು ಸುಳ್ಳು. ಯಾರಿಗೂ ಆವಾಜ್ ಹಾಕಿಲ್ಲ. ಕುಟುಂಬಸ್ಥರ ನಂಬರ್ ಇರಲಿಲ್ಲ ಹಾಗಾಗಿ ಯಾರನ್ನೂ ಸಂಪರ್ಕಿಸಿಲ್ಲ.

   ಮಳೆಯ ಕಾರಣ ಜಪಾನ್ನಲ್ಲಿ ಭೂ ಕುಸಿತ | Flood Warning | Oneindia Kannada

   ಆದರೆ ಕೂಡಲೇ ಕುಟುಂಬಸ್ಥರನ್ನು ಭೇಟಿಯಾಗುತ್ತೇನೆ. ಡ್ರೈವರ್ ವಿರುದ್ಧ ಎಫ್‍ಐಆರ್ ದಾಖಲಾಗಿದ್ದು, ಸದ್ಯ ಅಥಣಿಯಲ್ಲಿದ್ದಾರೆ. ಪೊಲೀಸರ ಮುಂದೆ ಹಾಜರಾಗ್ತಾರೆ ಎಂದು ಹೇಳಿದ್ದಾರೆ.

   English summary
   DCM Laxman Savadi Son Car Accident: Chidanand Savadi Gave Clarification About The Accident.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X