ಜಿಲ್ಲಾ ಉಸ್ತುವಾರಿಗಳ ನೇಮಕ : ಶನಿವಾರ ಮಹತ್ವದ ಸಭೆ

ಬಾಗಲಕೋಟೆ, ಜುಲೈ 20 : ಸಚಿವ ಸಂಪುಟ ವಿಸ್ತರಣೆ, ನಿಗಮ-ಮಂಡಳಿಗಳ ನೇಮಕ, ಜಿಲ್ಲಾ ಉಸ್ತುವಾರಿ ಸಚಿವರು ನೇಮಕದ ಬಗ್ಗೆ ಶನಿವಾರ ಕರ್ನಾಟಕ ಕಾಂಗ್ರೆಸ್ ತೀರ್ಮಾನ ಕೈಗೊಳ್ಳಲಿದೆ. ಸಮನ್ವಯ ಸಮಿತಿ ಸಭೆಯೂ ಶನಿವಾರ ನಡೆಯಲಿದೆ.

ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರು ಜಮಖಂಡಿಯಲ್ಲಿ ಈ ಕುರಿತು ಶುಕ್ರವಾರ ಮಾತನಾಡಿದರು. 'ಶನಿವಾರ ಬೆಂಗಳೂರಿನಲ್ಲಿ ಕೆ.ಸಿ.ವೇಣುಗೋಪಾಲ್ ಅಧ್ಯಕ್ಷತೆಯಲ್ಲಿ ಪಕ್ಷದ ನಾಯಕರ ಸಭೆ ನಡೆಯಲಿದೆ. ಸಭೆಯಲ್ಲಿ ಈ ಕುರಿತು ತೀರ್ಮಾನಿಸಲಾಗುತ್ತದೆ' ಎಂದರು.

'ಸಂಪುಟ ವಿಸ್ತರಣೆ, ನಿಗಮ-ಮಂಡಳಿ ನೇಮಕದ ಬಗ್ಗೆಯೂ ಚರ್ಚೆ ನಡೆಯಲಿದೆ. ಶನಿವಾರ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಸಭೆಯೂ ನಡೆಯಲಿದೆ' ಎಂದು ಈಶ್ವರ ಖಂಡ್ರೆ ತಿಳಿಸಿದರು.

'ಸಮ್ಮಿಶ್ರ ಸರ್ಕಾರದ ಮೈತ್ರಿ ಧರ್ಮವನ್ನು ನಾನು ಅನುಸರಿಸುತ್ತೇವೆ. ಲೋಕಸಭೆ ಚುನಾವಣೆಯಲ್ಲಿಯೂ ಕಾಂಗ್ರೆಸ್‌-ಜೆಡಿಎಸ್ ಮೈತ್ರಿ ಮುಂದುವರೆಯಲಿದೆ. ಸೀಟುಗಳ ಹಂಚಿಕೆ ಬಗ್ಗೆ ಹಿರಿಯ ನಾಯಕರು ತೀರ್ಮಾನವನ್ನು ಕೈಗೊಳ್ಳಲಿದ್ದಾರೆ' ಎಂದರು.

'ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯ ಮಾಡುವ ಬೇಡಿಕೆ ಇಡುವುದಿಲ್ಲ. ಉತ್ತರ ಕರ್ನಾಟಕ ಭಾಗಕ್ಕೆ ಯಾವುದೇ ತಾರತಮ್ಯವನ್ನು ಮಾಡಿಲ್ಲ. ಸರ್ಕಾರ ಈ ಭಾಗದ ಅಭಿವೃದ್ಧಿಗೆ ಬದ್ಧವಾಗಿದೆ' ಎಂದು ಈಶ್ವರ ಖಂಡ್ರೆ ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+