ಚಿಕ್ಕೋಡಿ, ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ರಣಕಹಳೆ

Recommended Video

      Lok Sabha Elections 2019: ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲು ಚಿಕ್ಕೋಡಿ ಬಾಗಲಕೋಟೆಗೆ ಬರಲಿದ್ದಾರೆ ಮೋದಿ

      ಬಾಗಲಕೋಟೆ, ಏಪ್ರಿಲ್ 18: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕರ್ನಾಟಕದ ಚಿಕ್ಕೋಡಿ ಹಾಗೂ ಬಾಗಲಕೋಟೆಯಲ್ಲಿ ಚುನಾವಣಾ ಪ್ರಚಾರ ಮಾಡಲಿದ್ದು, ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚಿಸಲಿದ್ದಾರೆರ್.

      ದೇಶದ 12 ರಾಜ್ಯಗಳ 95 ಕ್ಷೇತ್ರಗಳಲ್ಲಿಂದು ಎರಡನೇ ಹಂತದ ಮತದಾನ ನಡೆಯುತ್ತಿದೆ. ಕರ್ನಾಟಕದ 14 ಕ್ಷೇತ್ರಗಳು ಇದರಲ್ಲಿ ಸೇರಿವೆ. ಏಪ್ರಿಲ್ 23ರಂದು ಮೂರನೇ ಹಂತದಲ್ಲಿ ಇನ್ನುಳಿದ 14 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಕರ್ನಾಟಕದ ಎರಡನೇ ಹಂತದಲ್ಲಿ ಚಿಕ್ಕೋಡಿ ಹಾಗೂ ಬಾಗಲಕೋಟೆಯಲ್ಲಿ ಚುನಾವಣೆ ನಡೆಯಲಿದೆ. ಏಪ್ರಿಲ್ 11 ರಿಂದ ಮೇ 19ರ ತನಕ ಚುನಾವಣೀ ನಡೆಯಲಿದ್ದು, ಮೇ 23ರಂದು ಫಲಿತಾಂಶ ಹೊರಬರಲಿದೆ.

      ಗುರುವಾರದಂದು ಮಧ್ಯಾಹ್ನದ ವೇಳೆ ಕರ್ನಾಟಕಕ್ಕೆ ಬರಲಿರುವ ಮೋದಿ ಅವರು ಚಿಕ್ಕೋಡಿ ಹಾಗೂ ಬಾಗಲಕೋಟೆ ಕ್ಷೇತ್ರಗಳ ಅಭ್ಯರ್ಥಿ ಪರ ಪ್ರಚಾರ ಮಾಡಲಿದ್ದಾರೆ. ಮಧ್ಯಾಹ್ನ ಎರಡು ಗಂಟೆಗೆ ಬಾಗಲಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿ ಪಿ.ಸಿ.ಗದ್ದಿಗೌಡರ್​ಪರವಾಗಿ ಪ್ರಚಾರ ಭಾಷಣ ಮತ್ತು ಮಧ್ಯಾಹ್ನ 4 ಗಂಟೆಗೆ ಚಿಕ್ಕೋಡಿ ಕ್ಷೇತ್ರದ ಸ್ಪರ್ಧಿ ಅಣ್ಣಾ ಸಾಹೇಬ ಜೊಲ್ಲೆ ಪರವಾಗಿ ಪ್ರಧಾನಿ ಮೋದಿ ಮತ ಯಾಚನೆ ಮಾಡಲಿದ್ದಾರೆ

      Elections 2019 : Narendra Modi to campaign for Bagalkot, Chikkodi candidates

      ಬಾಗಲಕೋಟೆಯಲ್ಲಿ ಏಪ್ರಿಲ್ 23ರಂದು ಮತದಾನ ನಡೆಯಲಿದ್ದು, ಬಿಜೆಪಿಯ ಅಭ್ಯರ್ಥಿ ಪಿಸಿ ಗದ್ದಿಗೌಡರ್ ಹಾಗೂ ವೀಣಾ ಕಾಶಪ್ಪನವರ್ ನಡುವೆ ತುರುಸಿನ ಸ್ಪರ್ಧೆ ನಿರೀಕ್ಷಿಸಲಾಗಿದೆ. ಚಿಕ್ಕೋಡಿಯಲ್ಲಿ ಬಿಜೆಪಿ ಅಭ್ಯರ್ಥಿ ಅಣ್ಣಾ ಸಾಹೇಬ್ ಜೊಲ್ಲೆ ಹಾಗೂ ಕಾಂಗ್ರೆಸ್ಸಿನ ಪ್ರಕಾಶ್ ಹುಕ್ಕೇರಿ ನಡುವೆ ಸ್ಪರ್ಧೆಯಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+