ಮಾಜಿ ಸಚಿವೆ ಉಮಾಶ್ರೀ ಮನೆ ಕಳವು ಪ್ರಕರಣ: ಇಬ್ಬರು ಆರೋಪಿಗಳ ಬಂಧನ
ಬಾಗಲಕೋಟೆ, ನವೆಂಬರ್ 09: ಮಾಜಿ ಸಚಿವೆ ಉಮಾಶ್ರೀ ಅವರ ಮನೆ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ತೇರದಾಳ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ನಗರದ ರಬಕವಿಯ ವಿದ್ಯಾನಗರದಲ್ಲಿರುವ ಉಮಾಶ್ರೀಯವರ ನಿವಾಸದಲ್ಲಿ ನವೆಂಬರ್ 2 ರಂದು ಕಳ್ಳತನವಾಗಿತ್ತು. ಮಾಜಿ ಸಚಿವೆ ಮನೆಯಲ್ಲಿದ್ದ 2 ಲಕ್ಷ ರೂಪಾಯಿ ನಗದು ಎಗರಿಸಿ ಪರಾರಿಯಾಗಿದ್ದರು. ಈ ಬಗ್ಗೆ ತೇರದಾಳ ಪೊಲೀಸ್ ಠಾಣೆಗೆ ಉಮಾಶ್ರೀ ದೂರು ಕೊಟ್ಟಿದ್ದರು.
ನಟಿ, ಮಾಜಿ ಸಚಿವೆ ಉಮಾಶ್ರೀ ಮನೆ ಕಳ್ಳತನ: ಕಳ್ಳರಿಗೆ ಬಲೆ ಬೀಸಿದ ಪೊಲೀಸರು
ಜಮಖಂಡಿಯ ಯಲ್ಲಪ್ಪ ಗಡ್ಡಿ ಹಾಗೂ ಹಾಗೂ ಮುಧೋಳದ ದುರ್ಗಪ್ಪ ವಾಲ್ಮೀಕಿ ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರಿಂದ 1.94 ಲಕ್ಷ ರೂಪಾಯಿಯನ್ನು ತೇರದಾಳ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇಬ್ಬರಲ್ಲಿ ಓರ್ವ ಬಂಧಿತ ಆರೋಪಿ ಯಲ್ಲಪ್ಪ ಗಡ್ಡಿ ಕುಖ್ಯಾತ ಕಳ್ಳನೆಂದು ಪೊಲೀಸರು ತಿಳಿಸಿದ್ದಾರೆ.
ಮಾಜಿ ಸಚಿವೆ ಉಮಾಶ್ರೀ ಅವರು ಸದ್ಯ ಬೆಂಗಳೂರು ನಗರದಲ್ಲಿ ವಾಸ ಮಾಡುತ್ತಿದ್ದು, ಅವರ ಬಾಗಲಕೋಟೆ ಜಿಲ್ಲೆಯ ರಬಕವಿ ಮನೆಯಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿರುವ ಕಳ್ಳರು ಮನೆ ಬಾಗಿಲು ಮುರಿದು ಕಳ್ಳತನ ಮಾಡಿದ್ದರು..
ಕಳ್ಳತನವಾದ ಸ್ಥಳಕ್ಕೆ ದೌಡಾಯಿಸಿದ ಸಿಪಿಐ ಕರುಣೇಸಿಗೌಡ ಮತ್ತು ಪಿಎಸ್ಐ ವಿಜಯಕುಮಾರ ಕಾಂಬಳೆ ಪರಿಶೀಲನೆ ನಡೆಸಿದ್ದು, ಆರೋಪಿಗಳಿಗಾಗಿ ಬಲೆ ಬೀಸಿದ್ದರು. ಇದೀಗ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ.