• search
  • Live TV
ಬಾಗಲಕೋಟೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬೀಳಗಿ ಮಾಜಿ ಶಾಸಕ ಬಾಬುರೆಡ್ಡಿ ತುಂಗಳ ನಿಧನ

|

ಬಾಗಲಕೋಟೆ, ನವೆಂಬರ್ 9: ಬೀಳಗಿ ಕ್ಷೇತ್ರದ ಮಾಜಿ ಶಾಸಕ ಬಾಬು ರೆಡ್ಡಿ ತುಂಗಳ ಶುಕ್ರವಾರ ಬೆಳಗ್ಗೆ ನಿಧನರಾಗಿದ್ದಾರೆ.

ಬಾಬುರೆಡ್ಡಿ ಅವರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು,. ಅವರಿಗೆ 85 ವರ್ಷ ವಯಸ್ಸಾಗಿತ್ತು, ಶುಕ್ರವಾರ ಬೆಳಗಿನ ಜಾವ ಜಮಖಂಡಿಯ ಶಾರದಾ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಜಮಖಂಡಿ ತಾಲೂಕಿನ ಸ್ವಗ್ರಾಮ ಬಿದರಿಯಲ್ಲಿ ಮಧ್ಯಾಹ್ನ 3 ಗಂಟೆಗೆ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ತಿಳಿದುಬಂದಿದೆ.

ಬಾಬು ರೆಡ್ಡಿ ತುಂಗಳ ಅವರು 1985ರಲ್ಲಿ ಬೀಳಗಿ ಕ್ಷೇತ್ರದ ಶಾಸಕರಾಗಿದ್ದರು, ಕುರುಕ್ಷೇತ್ರ ವಾರಪತ್ರಿಕೆ ಸಂಪಾದಕರೂ ಆಗಿದ್ದ ಬಾಬುರೆಡ್ಡಿ ತುಂಗಳ ಅತ್ಯುತ್ತಮ ವಾಗ್ಮಿಯಾಗಿದ್ದರು. ದಿವಂಗತ ಶಾಸಕ ಸಿದ್ದು ನ್ಯಾಮಗೌಡರ ನೇತೃತ್ವದಲ್ಲಿ ನಿರ್ಮಾಣವಾದ ಬ್ಯಾರೇಜ್‌ನ ನಿರ್ಮಾಣದ ಹೊಣೆ ಹೊತ್ತಿದ್ದ ಕೃಷ್ಣಾ ತೀರದ ರೈತ ಸಂಘದ ಮೊದಲ ಅಧ್ಯಕ್ಷರಾಗಿದ್ದರು. ಅವರು ಕೆಲ ದಿನಗಳಿಂದ ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು.

English summary
Ex MLA Babureddy died after suffering health issues. He was MLA from Bilagi constituency.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X