ರಾಹುಲ್ ಪ್ರಧಾನಿ ಆದರೆ ಗಂಗಾಮಥಸ್ಥರು ST ಗೆ ಸೇರ್ಪಡೆ: ಸಿದ್ದರಾಮಯ್ಯ
ಬಾಗಲಕೋಟೆ, ಫೆಬ್ರವರಿ 21: ಗಂಗಾಮತಸ್ಥ ಅಂಬಿಗರನ್ನು STಗೆ ಸೇರ್ಪಡೆ ಮಾಡಬೇಕು ಎಂದು ಎರೆಡು ಬಾರಿ ಕೇಂದ್ರಕ್ಕೆ ಶಿಫಾರಸ್ಸು ಮಾಡಲಾಗಿತ್ತು, ಆದರೆ ಬಿಜೆಪಿ ಸರ್ಕಾರ ಒಪ್ಪಿಗೆ ನೀಡಲಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.
ಬಾಗಲಕೋಟೆಯ ಬಾದಾಮಿಯಲ್ಲಿ ಗಂಗಾಮತಸ್ಥ ಅಂಬಿಗರ ಬೃಹತ್ ಸಭೆ ಉದ್ದೇಶಿಸಿ ಮಾತನಾಡಿದ ಅವರು, ರಾಹುಲ್ ಗಾಂಧಿ ಪ್ರಧಾನಿ ಆದರೆ ಗಂಗಾಮತಸ್ಥ ಅಂಬಿಗರನ್ನು ಎಸ್‌ಟಿಗೆ ಸೇರಿಸುವ ಪ್ರಯತ್ನ ಮಾಡೋಣ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಕೇಂದ್ರದಲ್ಲಿ ನಮ್ಮ ಸರ್ಕಾರ ಇದ್ದಿದ್ದರೆ ನಿಮ್ಮ ಬೇಡಿಕೆಯನ್ನು ಈಗಾಗಲೇ ಈಡೇರಿಸಿಬಿಡುತ್ತಿದ್ದೆ, ಆದರೆ ಈಗಿನ ಕೇಂದ್ರ ಸರ್ಕಾರದಲ್ಲಿ ಅದು ಸಾಧ್ಯವಿಲ್ಲ ಎಂದರು.

ಈ ಹಿಂದೆ ಸಿದ್ದರಾಮಯ್ಯ ಅವರು ಲಿಂಗಾಯತ ಜಾತಿಗೆ ಪ್ರತ್ಯೇಕ ಧರ್ಮದ ಸ್ಥಾನ-ಮಾನ ನೀಡುವಂತೆ ಕೇಂದ್ರಕ್ಕೆ ಶಿಫಾರಸ್ಸು ಮಾಡಿದ್ದರು. ಆದರೆ ಅದಕ್ಕೆ ಕೇಂದ್ರ ಒಪ್ಪಿಗೆ ನೀಡಿರಲಿಲ್ಲ.
ಸಿದ್ದರಾಮಯ್ಯ ಅವರು ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯ ಪ್ರಚಾರದ ನೇತೃತ್ವ ವಹಿಸಿದ್ದಾರೆ. ಅಲ್ಲದೆ, ಜೆಡಿಎಸ್-ಕಾಂಗ್ರೆಸ್ ಮಧ್ಯ ಸೀಟು ಹಂಚಿಕೆಯಲ್ಲಿಯೂ ಸಹ ಪ್ರಮುಖ ಪಾತ್ರವನ್ನು ಅವರು ವಹಿಸಲಿದ್ದಾರೆ.












Click it and Unblock the Notifications