ಬಾಗಲಕೋಟೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಉಕ್ಕಿಹರಿದ ಘಟಪ್ರಭೆ: ಮುಧೋಳ ತಾಲೂಕಿನ ಮಿರ್ಜಿ ಗ್ರಾಮ ಜಲಾವೃತ

By Lekhaka
|
Google Oneindia Kannada News

ಬಾಗಲಕೋಟೆ, ಆಗಸ್ಟ್ 21: ಮಹಾರಾಷ್ಟ್ರ ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ಉತ್ತರ ಕರ್ನಾಟಕದಲ್ಲಿ ಪ್ರವಾಹ ಭೀತಿ ಹೆಚ್ಚುತ್ತಲೇ ಇದ್ದು, ಘಟಪ್ರಭಾ ನದಿಯ ಅಬ್ಬರಕ್ಕೆ ಬಾಗಲಕೋಟೆ ಜಿಲ್ಲೆಯ ಮತ್ತೊಂದು ಗ್ರಾಮ ಮುಳುಗಡೆಯಾಗಿದೆ.

Recommended Video

Dubai ಫ್ಲೈಟ್ ಹತ್ತಿದ RCB ಪ್ಲೇಯರ್ಸ್ | Oneindia Kannada

ಘಟಪ್ರಭಾ ನದಿಯ ಪ್ರವಾಹಕ್ಕೆ ಭಾರೀ ಅವಾಂತರ ಸೃಷ್ಟಿಯಾಗಿದ್ದು, ಹಲವು ಗ್ರಾಮಗಳ ರಸ್ತೆ ಸಂಪರ್ಕ ಕಡಿತವಾಗಿದ್ದರೆ, ಇನ್ನೂ ಹಲವು ಗ್ರಾಮಗಳು ಮುಳುಗಡೆಯಾಗಿವೆ. ಮುಧೋಳ ತಾಲೂಕಿನ ಹತ್ತಕ್ಕೂ ಹೆಚ್ಚು ಹಳ್ಳಿಗಳು ಜಲಾವೃತವಾಗಿದ್ದು, ಸಾವಿರಾರು ಎಕರೆ ಕಬ್ಬು ಸೇರಿದಂತೆ ವಿವಿಧ ಬೆಳೆಗಳು ನೀರಿನಲ್ಲಿ ನಿಂತು ನಾಶವಾಗಿದೆ.

 ಘಟಪ್ರಭಾ ನದಿ ಪ್ರವಾಹ ಭೀತಿ; ಮನೆಬಿಟ್ಟು ಬೀದಿಯಲ್ಲೇ ಕುಟುಂಬದ ವಾಸ ಘಟಪ್ರಭಾ ನದಿ ಪ್ರವಾಹ ಭೀತಿ; ಮನೆಬಿಟ್ಟು ಬೀದಿಯಲ್ಲೇ ಕುಟುಂಬದ ವಾಸ

ಇದೀಗ ಮುಧೋಳ ತಾಲೂಕಿನ ಮಿರ್ಜಿ ಗ್ರಾಮದಲ್ಲಿ ಘಟಪ್ರಭಾ ನದಿ ಉಕ್ಕಿಹರಿದಿದ್ದು, ಗ್ರಾಮದ 25 ಕ್ಕೂ ಹೆಚ್ಚು ಮನೆಗಳು ಜಲಾವೃತವಾಗಿದೆ. ಜಲಾವೃತವಾದ ಮನೆಗಳ ಕುಟುಂಬಸ್ಥರನ್ನು ತಾಲೂಕು ಆಡಳಿತ ಸುರಕ್ಷಿತ ಸ್ಥಳಗಳಿಗೆ ರವಾನೆ ಮಾಡಿದೆ.

Ghataprabha River Flooded At Least 25 Houses In Mirji Village Near Mudhol

ಮಿರ್ಜಿ ಮತ್ತು ಮಲ್ಲಾಪುರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಈಗಾಗಲೇ ಮುಳುಗಡೆಯಾಗಿದ್ದು, ಇದೀಗ ಭಾರೀ ಪ್ರಮಾಣದಲ್ಲಿ ಮನೆಗಳು ಮುಳುಗಡೆಯಾಗಿವೆ. ಬಹುತೇಕ ಮನೆಗಳ ಬಳಿ 4 ಅಡಿಗಳಷ್ಟು ನೀರು ನಿಂತಿದ್ದು, ಸಂತ್ರಸ್ಥರನ್ನು ಸುರಕ್ಷಿತ ಸ್ಥಳಗಳಿಗೆ ಕಳುಹಿಸಲಾಗಿದೆ.

ಮಳೆ ನಿಂತರೂ, ಮರದ ಹನಿ ನಿಂತಿಲ್ಲ ಎನ್ನುವ ಹಾಗೆ, ಮಳೆ ಕಡಿಮೆಯಾದರೂ ಪ್ರವಾಹ ಮಾತ್ರ ಉತ್ತರ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಕಡಿಮೆಯಾಗುತ್ತಿಲ್ಲ. ಹೀಗಾಗಿ ಜನ ಪರದಾಡುವಂತಾಗಿದೆ.

English summary
Due to heavy rains in Maharashtra, floods in northern Karnataka have increased and another village in the Bagalakote district has been submerged over the river Ghataprabha.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X