ಬಾಗಲಕೋಟೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

Breaking: ಬಾಗಲಕೋಟೆಯಲ್ಲಿ ಪಿಯು ಕಾಲೇಜಿನ ಮೇಲೆ ಕಲ್ಲುತೂರಾಟ

|
Google Oneindia Kannada News

ಬಾಗಲಕೋಟೆ, ಫೆಬ್ರವರಿ 8: ಕರ್ನಾಟಕದ ಕರಾವಳಿಯಲ್ಲಿ ಹೊತ್ತಿಕೊಂಡ ಹಿಜಾಬ್ V/s ಕೇಸರಿ ಶಾಲು ವಿವಾದ ಕ್ರಮೇಣವಾಗಿ ಇಡೀ ರಾಜ್ಯಕ್ಕೆ ವ್ಯಾಪಿಸುತ್ತಿದೆ. ಬಾಗಲಕೋಟೆ ಜಿಲ್ಲೆ ರಬಕವಿ ಬನಹಟ್ಟಿ ಪಟ್ಟಣದ ಪಿಯು ಕಾಲೇಜಿನ ಮೇಲೆ ಕಲ್ಲುತೂರಾಟ ನಡೆದಿದೆ.

ರಾಜ್ಯದಲ್ಲಿ ಹಿಜಾಬ್ ಪ್ರತಿಭಟನೆ ತೀವ್ರ: ಹೈಕೋರ್ಟ್‌ನಲ್ಲಿ ಇಂದು ವಿಚಾರಣೆರಾಜ್ಯದಲ್ಲಿ ಹಿಜಾಬ್ ಪ್ರತಿಭಟನೆ ತೀವ್ರ: ಹೈಕೋರ್ಟ್‌ನಲ್ಲಿ ಇಂದು ವಿಚಾರಣೆ

Recommended Video

ಧರ್ಮ ಪಾಲಿಸುವುದು ತಪ್ಪಲ್ಲ, ಹಿಜಾಬ್ ಪರ ನಿಂತ ಡಿಕೆ ಶಿವಕುಮಾರ್ | Oneindia Kannada

ನಗರದ ಪದವಿ ಪೂರ್ವ ಕಾಲೇಜಿನ ಎದುರಿನಲ್ಲಿ ಒಂದು ಗುಂಪಿನ ವಿದ್ಯಾರ್ಥಿಗಳು ಹಿಜಾಬ್ ಧರಿಸಿ ಪ್ರತಿಭಟನೆ ನಡೆಸುತ್ತಿದ್ದರೆ, ಇನ್ನೊಂದು ಕಡೆಯಲ್ಲಿ ಕೇಸರಿ ಶಾಲುಗಳನ್ನು ಹಾಕಿಕೊಂಡು ಬಂದು ಘೋಷಣೆಗಳನ್ನು ಕೂಗುತ್ತಿದ್ದಾರೆ.

Hijab Row: A stones throw on a Govt PU college in Bagalkote Dist Rabkavi banahatti

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ಪಟ್ಟಣದಲ್ಲಿರುವ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಗುಂಪು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಮಧ್ಯೆ ಕೆಲವು ಕಿಡಿಗೇಡಿಗಳು ಕಾಲೇಜಿನ ಮೇಲೆ ಕಲ್ಲು ತೂರಾಟ ನಡೆಸಿದ್ದು, ಒಬ್ಬ ವಿದ್ಯಾರ್ಥಿ ಗಾಯಗೊಂಡಿದ್ದಾರೆ.

ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರಿಗೆ ಪೋಷಕರ ಸಾಥ್:
ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ಪದವಿ ಪೂರ್ವ ಕಾಲೇಜಿನ ಬಳಿ ಕೆಲವು ಹಿಜಾಬ್ ಧರಿಸಿದ್ದರೆ, ಇನ್ನೂ ಕೆಲವು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿಕೊಂಡು ಕಾಲೇಜಿನ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವೇಳೆ ಹಿಜಾಬ್ ಧರಿಸಿ ಬಂದಿರುವ ವಿದ್ಯಾರ್ಥಿನಿಯರಿಗೆ ಪೋಷಕರು ಸಾಥ್ ನೀಡಿದ್ದಾರೆ.

ಮಂಗಳವಾರ ಹೈಕೋರ್ಟ್ ವಿಚಾರಣೆ:
ರಾಜ್ಯ ಸರ್ಕಾರ ಸಮವಸ್ತ್ರ ಕಡ್ಡಾಯಗೊಳಿಸಿ ಆದೇಶಿಸಿದ್ದರೂ ರಾಜ್ಯದ ಅನೇಕ ಜಿಲ್ಲೆಗಳ ಕಾಲೇಜುಗಳಲ್ಲಿ ಹಿಜಾಬ್ ಕೇಸರಿ ಶಾಲು ಬಿಸಿ ಇನ್ನೂ ಹೆಚ್ಚಾಗಿದೆ. ಇದರ ನಡುವೆ ಹಿಜಾಬ್ ನಿರ್ಬಂಧಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಮಂಗಳವಾರ ಹೈಕೋರ್ಟ್ ವಿಚಾರಣೆ ನಡೆಸಲಿದೆ.
ರಾಜ್ಯದ ಇತರ ಭಾಗಗಳಲ್ಲಿಯೂ ಪ್ರತಿಭಟನೆಗಳು ಹರಡಿದ್ದು, ಮಂಡ್ಯ ವಿಶ್ವವಿದ್ಯಾನಿಲಯದ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಘೋಷಣೆ ಕೂಗಿದರು. ಕಳೆದ ಒಂದು ವಾರದಿಂದ ಕೆಲವು ವಿದ್ಯಾರ್ಥಿಗಳು ಹಿಜಾಬ್ ಧರಿಸುತ್ತಿದ್ದಾರೆ ಎಂದು ಹೇಳಿರುವ ಅವರು, ಹುಡುಗಿಯರು ಹಿಜಾಬ್ ಅನ್ನು ದೂರವಿಡುವವರೆಗೂ ನಾವು ಪ್ರತಿಭಟನೆ ನಿಲ್ಲಿಸುವುದಿಲ್ಲ ಎಂದು ಹೇಳಿದರು.

English summary
Hijab Row: A stone's throw on a Govt PU college in Bagalkote Dist Rabkavi banahatti.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X