ಬಾಗಲಕೋಟೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಹಾ ಮಳೆಗೆ ತುಂಬಿದ ಕೃಷ್ಣೆ: ಹಿಪ್ಪರಗಿ ಜಲಾಶಯಕ್ಕೆ ಹರಿದು ಬಂದ ನೀರು

By ಬಾಗಲಕೋಟೆ ಪ್ರತಿನಿಧಿ
|
Google Oneindia Kannada News

ಬಾಗಲಕೋಟೆ, ಜೂನ್ 18: ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶಗಳಲ್ಲಿ ಮಳೆಯಾಗುತ್ತಿರುವುದರಿಂದ ಕೊಯ್ನಾ ಜಲಾಶಯ ಹಾಗೂ ರಾಜಾಪುರ ಜಲಾಶಯಗಳಿಂದ ಕೃಷ್ಣಾ ನದಿಗೆ ನೀರು ಹರಿದು ಬರುತ್ತಿದೆ. ಹೀಗಾಗಿ ಹಿಪ್ಪರಗಿ ಜಲಾಶಯದಲ್ಲೂ ನೀರು ಹೆಚ್ಚಾಗಿದೆ.

ಕೃಷ್ಣಾ ಜಲಾನಯನ ಪ್ರದೇಶಗಳಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಹಿಪ್ಪರಗಿ ಜಲಾಶಯಕ್ಕೆ ಇಂದು ಒಟ್ಟು 44,000 ಕ್ಯೂಸೆಕ್ ನೀರು ಹರಿದು ಬಂದಿದೆ. ಜಲಾಶಯದಿಂದ 44,000 ಕ್ಯೂಸೆಕ್ ಪ್ರಮಾಣದ ನೀರನ್ನು ಹರಿಬಿಡಲಾಗಿದೆ. ಜಲಾಶಯದ ನೀರಿನ ಮಟ್ಟ 521.60 ಮೀಟರ್ ಮುಟ್ಟಿದೆ ಎಂದು ರಬಕವಿ-ಬನಹಟ್ಟಿ ತಹಶೀಲ್ದಾರ್ ಪ್ರಶಾಂತ ಚನಗೊಂಡ ತಿಳಿಸಿದ್ದಾರೆ.

 ತುಂಗಾ ಜಲಾಶಯ ಭರ್ತಿಗೆ 1 ಅಡಿ ಬಾಕಿ; 2000 ಕ್ಯೂಸೆಕ್ ನೀರು ನದಿಗೆ ತುಂಗಾ ಜಲಾಶಯ ಭರ್ತಿಗೆ 1 ಅಡಿ ಬಾಕಿ; 2000 ಕ್ಯೂಸೆಕ್ ನೀರು ನದಿಗೆ

Hipparagi Reservoir Water Level Increased Due To Rain In Maharashtra

ವಿಜಯಪುರ, ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲೆಯ ಜನ ಮತ್ತು ಜಾನುವಾರುಗಳಿಗೆ ಹಿಪ್ಪರಗಿ ಜಲಾಶಯ ನೀರಿನ ಮೂಲವಾಗಿದೆ. ಇಂದು ಜಲಾಶಯಕ್ಕೆ ಅಪಾರ ಪ್ರಮಾಣದ ನೀರು ಹರಿದು ಬಂದಿರುವುದರಿಂದ ಜಲಾಶಯವು ತುಂಬಿಕೊಂಡಿದ್ದು, ನೋಡುಗರನ್ನು ಸೆಳೆಯುತ್ತಿದೆ. ಕೃಷ್ಣಾ ನದಿ ತುಂಬಿ ಹರಿಯುತ್ತಿರುವುದದು ಅಕ್ಕ ಪಕ್ಕದ ಗ್ರಾಮಗಳ ರೈತರಲ್ಲಿ ಮಂದಹಾಸ ಮೂಡಿದೆ.

English summary
Hipparagi reservoir water level increased due to heavy rain in maharashtra. 44,000 cusecs of water released from reservoir today,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X