ಇಂದು ಸಿದ್ದು ನ್ಯಾಮಗೌಡ ಅಂತ್ಯಕ್ರಿಯೆ: ಕಾಂಗ್ರೆಸ್ ಮುಖಂಡರ ಆಗಮನ
ಬಾಗಲಕೋಟೆ, ಮೇ.29 : ಕಾರು ಅಪಘಾತದಲ್ಲಿ ಅಕಾಲಿಕವಾಗಿ ನಿಧನರಾದ ಸಿದ್ದು ನ್ಯಾಮಗೌಡ ಅವರ ಅಂತ್ಯಕ್ರಿಯೆ ಹಿನ್ನೆಲೆಯಲ್ಲಿ ಇಂದು ಜಮಖಂಡಿ ನಗರಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಜಿ. ಪರಮೇಶ್ವರ, ಸಂಸತ್ ವಿಪಕ್ಷನಾಯಕ ಮಲ್ಲಿಕಾರ್ಜುನ ಖರ್ಗೆ ಆಗಮಿಸಿದ್ದಾರೆ.
ಅಂತ್ಯಸಂಸ್ಕಾರ ಇಂದು ಮಂಗಳವಾರ ಮಧ್ಯಾಹ್ನ 1 ಗಂಟೆಗೆ ಜಮಖಂಡಿ ತಾಲೂಕಿನ ನಾಗನೂರು ಗ್ರಾಮದ ಬಳಿ ಇರುವ ಸಿದ್ದು ನ್ಯಾಮಗೌಡ ಒಡೆತನದ ಜಮಖಂಡಿ ಶುಗರ್ಸ್ ಕಾರ್ಖಾನೆ ಆವರಣದಲ್ಲಿ ನಡೆಯಲಿದೆ.
ವೀರಶೈವ ಲಿಂಗಾಯತ ಪದ್ದತಿಯಂತೆ ಅಂತ್ಯಸಂಸ್ಕಾರ ನಡೆಯಲಿದೆ.

ಬಾಗಲಕೋಟೆಯ ತುಳಸಿಗೇರಿಯಲ್ಲಿ ನಡೆದ ಅಪಘಾತದಲ್ಲಿ ಸಿದ್ದು ನ್ಯಾಮಗೌಡ ಅವರು ನಿನ್ನೆ ಬೆಳಗಿನ ಜಾವ ಮೃತಪಟ್ಟಿದ್ದರು. ದೆಹಲಿಗೆ ತೆರಳಿದ್ದ ಅವರು ಅಲ್ಲಿಂದ ಗೋವಾಕ್ಕೆ ಬಂದು, ಕಾರ್‌ನಲ್ಲಿ ಊರಿಗೆ ಮರಳುತ್ತಿದ್ದಾಗ ನಡೆದ ಕಾರು ಅಪಘಾತದಲ್ಲಿ ಸಿದ್ದು ನ್ಯಾಮಗೌಡ ಅವರ ಎದೆಗೆ ತೀವ್ರ ಗಾಯವಾಗಿತ್ತು.
ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು.












Click it and Unblock the Notifications