ಗಾಯಗೊಂಡ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡಿದ ಎಸ್.ಆರ್.ಪಾಟೀಲ
ಬಾಗಲಕೋಟೆ, ಜೂನ್ 05 : ನಗರದಲ್ಲಿ ಸೋಮವಾರ ಸಂಜೆ ಟಂ ಟಂ-ಬೊಲೆರೋ ನಡುವೆ ನಡೆದ ಅಪಘಾತದಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿಗಳನ್ನು ಭೇಟಿ ಮಾಡಿದ ಕೆಪಿಸಿಸಿ ಕಾರ್ಯಧ್ಯಕ್ಷ ಎಸ್.ಆರ್.ಪಾಟೀಲ ವಿದ್ಯಾರ್ಥಿಗಳು ಶೀಘ್ರವಾಗಿ ಗುಣಮುಖರಾಗಲಿ ಎಂದು ಪ್ರಾರ್ಥಿಸಿದರು.
ಗಾಯಗೊಂಡ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿ ಕುಟುಂಬಸ್ಥರಿಗೆ ಧೈರ್ಯ ತುಂಬಿದರು. ನಗರದ ಕೆರೂಡಿ ಆಸ್ಪತ್ರೆಯಲ್ಲಿ ದಾಖಲಾದ, ಗಾಯಗೊಂಡ ವಿದ್ಯಾರ್ಥಿಗಳ ಆರೋಗ್ಯ ಚಿಕಿತ್ಸೆಗೆ ವೈಯಕ್ತಿಕವಾಗಿ ಎರಡು ಲಕ್ಷ ನೀಡುವುದಾಗಿ ಘೋಷಣೆ ಮಾಡಿದರು.
ಅಪಘಾತದಲ್ಲಿ ಗಾಯಗೊಂಡ ವಿದ್ಯಾರ್ಥಿಗಳ ಸ್ಥಿತಿ ಸ್ವಲ್ಪ ಚಿಂತಾಜನಕವಾಗಿದ್ದು, ಸರ್ಕಾರದಿಂದ ಹೆಚ್ಚಿನ ಚಿಕಿತ್ಸೆಗಾಗಿ ಸಹಾಯ ಮಾಡಲು ಸಿಎಂ ಕುಮಾರಸ್ವಾಮಿ ಭೇಟಿ ಮಾಡಿ ಮನವಿ ಮಾಡುತ್ತೇನೆ ಎಂದು ತಿಳಿಸಿದರು.

ಟಂ ಟಂ ವಾಹನಗಳ ಹಾವಳಿ ಮತ್ತು ರಸ್ತೆ ನಿಯಮ ಉಲ್ಲಂಘಿಸುವವರ ಮೇಲೆ ಕ್ರಮ ಜರುಗಿಸಿ ಅಮಾಯಕರ ಜೀವ ಉಳಿಸಬೇಕು. ಈ ಕುರಿತು ಪೊಲೀಸ್ ಇಲಾಖೆ ಅಧಿಕಾರಿಗಳ ಜತೆ ಮಾತನಾಡುತ್ತೇನೆ ಎಂದು ಭರವಸೆ ನೀಡಿದರು.
ಖಾಸಗಿ ಶಿಕ್ಷಣ ಸಂಸ್ಥೆಯವರು ಸಹ ಮಕ್ಕಳ ಸುರಕ್ಷತೆ ಬಗ್ಗೆ ಹೆಚ್ಚಿನ ಗಮನಹರಿಸಬೇಕು ಎಂದು ಸೂಚಿಸಿದರು.












Click it and Unblock the Notifications