ಬಾಗಲಕೋಟೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಜಮಖಂಡಿ ಉಪ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಕಾರಣ ಬಹಿರಂಗ!

|
Google Oneindia Kannada News

Recommended Video

Jamakhandi By-elections results 2018 : ಜಮಖಂಡಿಯಲ್ಲಿ ಬಿಜೆಪಿ ಸೋಲಿಗೆ ಕಾರಣ ಬಹಿರಂಗ | Oneindia Kannada

ಬಾಗಲಕೋಟೆ, ನವೆಂಬರ್ 09 : ಜಮಖಂಡಿ ಕ್ಷೇತ್ರದ ಉಪ ಚುನವಣೆಯಲ್ಲಿ ಕಾಂಗ್ರೆಸ್‌ನ ಆನಂದ್ ನ್ಯಾಮಗೌಡ ಅವರು ಜಯಗಳಿಸಿದ್ದಾರೆ. ಬಿಜೆಪಿ ಕ್ಷೇತ್ರದಲ್ಲಿ ಜಯಗಳಿಸಬಹುದು ಎಂಬ ಲೆಕ್ಕಾಚಾರವನ್ನು ಕಾಂಗ್ರೆಸ್‌ ತಂತ್ರ ವಿಫಲಗೊಳಿಸಿದೆ.

ಜಮಖಂಡಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಆನಂದ್ ನ್ಯಾಮಗೌಡ ಅವರು 97017 ಮತಗಳನ್ನು ಪಡೆದು 39,480 ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಬಿಜೆಪಿಯ ಶ್ರೀಕಾಂತ್ ಕುಲಕರ್ಣಿ ಅವರು 57,537 ಮತಗಳನ್ನು ಪಡೆದು ಸೋಲು ಕಂಡಿದ್ದಾರೆ.

ಜಮಖಂಡಿ ಕ್ಷೇತ್ರದ ಶಾಸಕ ಆನಂದ್ ನ್ಯಾಮಗೌಡ ಪರಿಚಯಜಮಖಂಡಿ ಕ್ಷೇತ್ರದ ಶಾಸಕ ಆನಂದ್ ನ್ಯಾಮಗೌಡ ಪರಿಚಯ

ಸಿದ್ದು ನ್ಯಾಮಗೌಡ ಅವರ ನಿಧನದಿಂದಾಗಿ ಜಮಖಂಡಿ ಕ್ಷೇತ್ರಕ್ಕೆ ಉಪ ಚುನಾವಣೆ ಎದುರಾಗಿತ್ತು. ತಂದೆಯ ಸಾವಿನ ಅನುಕಂಪ ಮತ್ತು ಜನರ ಜೊತೆ ಸಿದ್ದು ನ್ಯಾಮಗೌಡ ಅವರು ಹೊಂದಿದ್ದ ಸಂಬಂಧ ಆನಂದ್ ನ್ಯಾಮಗೌಡ ಅವರ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದೆ.

ಜಮಖಂಡಿಯಲ್ಲಿ ಬಿಜೆಪಿ ಸೋಲಲು ಐದು ಪ್ರಮುಖ ಕಾರಣಗಳುಜಮಖಂಡಿಯಲ್ಲಿ ಬಿಜೆಪಿ ಸೋಲಲು ಐದು ಪ್ರಮುಖ ಕಾರಣಗಳು

ಬಿಜೆಪಿಯ ಶ್ರೀಕಾಂತ್ ಕುಲಕರ್ಣಿ ಅವರು ಕಳೆದ ಚುನಾವಣೆಯಲ್ಲಿ ಸೋತಿದ್ದರು. ಆದರೆ, ಆ ಅನುಕಂಪ ಉಪ ಚುನಾವಣೆಯಲ್ಲಿ ಕೆಲಸ ಮಾಡಲಿಲ್ಲ. ಕ್ಷೇತ್ರದಲ್ಲಿ ಸುಮಾರು 80 ಸಾವಿರದಷ್ಟಿರುವ ಲಿಂಗಾಯತರು ಸಹ ಬಿಜೆಪಿ ಬೆಂಬಲಕ್ಕೆ ನಿಲ್ಲಲಿಲ್ಲ...

ಜಮಖಂಡಿಯಲ್ಲಿ ಕಾಂಗ್ರೆಸ್‌ಗೆ ಜಯಭೇರಿ: ಅಪ್ಪನನ್ನು ಮೀರಿಸಿದ ಮಗಜಮಖಂಡಿಯಲ್ಲಿ ಕಾಂಗ್ರೆಸ್‌ಗೆ ಜಯಭೇರಿ: ಅಪ್ಪನನ್ನು ಮೀರಿಸಿದ ಮಗ

ಆನಂದ್ ಗೆಲುವಿಗೆ ಕಾರಣವೇನು?

ಆನಂದ್ ಗೆಲುವಿಗೆ ಕಾರಣವೇನು?

ಸಿದ್ದು ನ್ಯಾಮಗೌಡ ಅವರ ನಿಧನದಿಂದಾಗಿ ಜಮಖಂಡಿ ಕ್ಷೇತ್ರಕ್ಕೆ ಉಪ ಚುನಾವಣೆ ಎದುರಾಗಿತ್ತು. ತಂದೆಯ ಸಾವಿನ ಅನುಕಂಪದ ಅಲೆ ಆನಂದ್ ನ್ಯಾಮಗೌಡ ಅವರ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದೆ. ಜನರ ಜೊತೆ ಸಿದ್ದು ನ್ಯಾಮಗೌಡ ಅವರು ಉತ್ತಮ ಬಾಂಧವ್ಯ ಹೊಂದಿದ್ದರು ಇದರು ಸಹ ಆನಂದ್ ನ್ಯಾಮಗೌಡ ಅವರು ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗುವಂತೆ ಮಾಡಿದೆ.

ಕಾಂಗ್ರೆಸ್‌ ಪ್ರಚಾರ

ಕಾಂಗ್ರೆಸ್‌ ಪ್ರಚಾರ

ಅನುಕಂಪದ ಅಲೆ ಜೊತೆಗೆ ಕಾಂಗ್ರೆಸ್ ಪಕ್ಷ ಕ್ಷೇತ್ರದಲ್ಲಿ ಬಿರುಸಿನಿಂದ ಪ್ರಚಾರ ನಡೆಸಿದೆ. ಅದರಲ್ಲೂ ಪಕ್ಕದ ಬಾದಾಮಿ ಕ್ಷೇತ್ರದ ಶಾಸಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಂದು ವಾರಗಳ ಕಾಲ ಜಮಖಂಡಿ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಕೈಗೊಂಡಿದ್ದರು. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರು ಕ್ಷೇತ್ರದ ಉಸ್ತುವಾರಿಯಾಗಿದ್ದರು. ಮಾಜಿ ಸಚಿವ ಎಸ್.ಆರ್.ಪಾಟೀಲ್, ಎಂ.ಬಿ.ಪಾಟೀಲ್, ಈಶ್ವರ ಖಂಡ್ರೆ ಅವರು ಕ್ಷೇತ್ರದಲ್ಲಿ ಪ್ರಚಾರ ನಡೆಸಿದ್ದರು.

ಬಂಡಾಯ ಶಮನ

ಬಂಡಾಯ ಶಮನ

ಕಾಂಗ್ರೆಸ್ ಜಮಖಂಡಿ ಕ್ಷೇತ್ರವನ್ನು ಉಳಿಸಿಕೊಳ್ಳಬೇಕು ಎಂದು ಪಣ ತೊಟ್ಟಿತ್ತು. ಆದ್ದರಿಂದ, ಕ್ಷೇತ್ರದಲ್ಲಿ ಬಂಡಾಯ ಉಂಟಾಗದಂತೆ ಎಚ್ಚರಿಕೆ ವಹಿಸಿತ್ತು. 2018ರ ಮೇ ತಿಂಗಳಿನಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ವಂಚಿತ ದಳವಾಯಿ ಅವರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದು 19753 ಮತಗಳನ್ನು ಪಡೆದಿದ್ದರು. ಈ ಬಾರಿ ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಆನಂದ್ ನ್ಯಾಮಗೌಡ ಅವರನ್ನು ಗೆಲ್ಲಿಸಲಾಗಿದೆ.

ಜನರನ್ನು ತಲುಪಲು ವಿಫಲ

ಜನರನ್ನು ತಲುಪಲು ವಿಫಲ

ಕಾಂಗ್ರೆಸ್ ಪಕ್ಷಕ್ಕೆ ಹೋಲಿಕೆ ಮಾಡಿದರೆ ಬಿಜೆಪಿಯ ಪ್ರಚಾರ ಅಷ್ಟು ಪ್ರಭಾವಿಯಾಗಿರಲಿಲ್ಲ. ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕ್ಷೇತ್ರದಲ್ಲಿ ಪ್ರಚಾರಕ್ಕಾಗಿ ಕಡಿಮೆ ದಿನಗಳನ್ನು ಮೀಸಲಾಗಿಟ್ಟರು. ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟೆರ್ ಮತ್ತು ಮಾಜಿ ಸಚಿವ ಅರವಿಂದ ಲಿಂಬಾವಳಿ ಅವರಿಗೆ ಕ್ಷೇತ್ರದ ಉಸ್ತುವಾರಿ ನೀಡಲಾಗಿತ್ತು. ಆದರೆ, ಅವರು ನಿರೀಕ್ಷಿತ ಮಟ್ಟದಲ್ಲಿ ಪ್ರಚಾರ ನಡೆಸಲಿಲ್ಲ.

English summary
The sympathy factor has gone in favour of Congress candidate Anand Nyamgouda in Jamakhandi by elections 2018. BJP candidate Srikant Kulkarni faced several hurdles and lost election by 39,480 votes.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X