ರಸ್ತೆ ಅಪಘಾತದಲ್ಲಿ ಜಮಖಂಡಿ ಕ್ಷೇತ್ರದ ಶಾಸಕ ಸಿದ್ದು ನ್ಯಾಮಗೌಡ ಮರಣ
Recommended Video

ಬೆಂಗಳೂರು, ಮೇ 28: ಜಮಖಂಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಸಿದ್ದು ನ್ಯಾಮಗೌಡ (70)ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಬಾಗಲಕೋಟೆಯ ತುಳಸಿಗೇರಿಯಲ್ಲಿ ನಡೆದ ಅಪಘಾತದಲ್ಲಿ ಸಿದ್ದು ನ್ಯಾಮಗೌಡ ಅವರು ಮೃತಪಟ್ಟಿದ್ದಾರೆ.
ದೆಹಲಿಗೆ ತೆರಳಿದ್ದ ಅವರು ಅಲ್ಲಿಂದ ಗೋವಾಕ್ಕೆ ಬಂದು, ಕಾರ್‌ನಲ್ಲಿ ಊರಿಗೆ ಮರಳುತ್ತಿದ್ದಾಗ ನಡೆದ ಕಾರು ಅಪಘಾತದಲ್ಲಿ ಸಿದ್ದು ನ್ಯಾಮಗೌಡ ಅವರ ಎದೆಗೆ ತೀವ್ರ ಗಾಯವಾಗಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು.

ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದ ಅವರು, ಕಾಂಗ್ರೆಸ್ ಉನ್ನತ ನಾಯಕರೊಂದಿಗೆ ನಂಟು ಹೊಂದಿದ್ದರು.
ಅಪಘಾತದಲ್ಲಿ ಕಾರಿನ ಮುಂಭಾಗದ ಜಖಂಗೊಂಡಿದೆ. ಟೈರ್ ಸ್ಫೋಟಗೊಂಡು ಕಾರ್ ಡಿವೈಡರ್‌ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಕಾರ್‌ನಲ್ಲಿದ್ದ ಉಳಿದವರು ಪಾರಾಗಿದ್ದಾರೆ.1991-96ರ ಅವಧಿಯಲ್ಲಿ ಬಾಗಲಕೋಟೆ ಕ್ಷೇತ್ರದ ಸಂಸದರಾಗಿದ್ದ ಸಿದ್ದು ನ್ಯಾಮಗೌಡ ಅವರು, ಕೇಂದ್ರದಲ್ಲಿ ಕಲ್ಲಿದ್ದಲು ಖಾತೆ ರಾಜ್ಯ ಸಚಿವರಾಗಿದ್ದರು.
1991ರಲ್ಲಿ ಅವರು ರಾಮಕೃಷ್ಣ ಹೆಗಡೆ ಅವರನ್ನು ಸೋಲಿಸಿ ಲೋಕಸಭೆಗೆ ಆಯ್ಕೆಯಾಗುವ ಮೂಲಕ ಗಮನ ಸೆಳೆದಿದ್ದರು. ಒಂದು ಬಾರಿ ಸಂಸದರಾಗಿದ್ದ ಅವರು, 2013 ಮತ್ತು 2018ರಲ್ಲಿ ಶಾಸಕರಾಗಿದ್ದರು. ವಿಧಾನ ಪರಿಷತ್‌ಗೆ ಕೂಡ ಆಯ್ಕೆಯಾಗಿದ್ದರು.
ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದ ಅವರು, ಕಾಂಗ್ರೆಸ್ ಉನ್ನತ ನಾಯಕರೊಂದಿಗೆ ನಂಟು ಹೊಂದಿದ್ದರು. ಅವರಿಗೆ ಪತ್ನಿ ಹಾಗೂ ನಾಲ್ವರು ಮಕ್ಕಳಿದ್ದಾರೆ. 1949ರ ಆಗಸ್ಟ್ 5ರಂದು ಜಮಖಂಡಿಯಲ್ಲಿ ಜನಿಸಿದ್ದರು. ಈ ಬಾರಿಯ ಚುನಾವಣೆಯಲ್ಲಿ ಅವರು 49,245 ಮತಗಳನ್ನು ಗಳಿಸಿ ಬಿಜೆಪಿ ಅಭ್ಯರ್ಥಿ ಕುಲಕರ್ಣಿ ಶ್ರೀಕಾಂತ್ ಸುಬ್ಬರಾವ್ ಅವರನ್ನು 2795 ಮತಗಳಿಂದ ಸೋಲಿಸಿದ್ದರು.
ಬಾಗಲಕೋಟೆಯಲ್ಲಿ ಕರೆ ನೀಡಿದ್ದ ಬಂದ್ ಅನ್ನು ಸಿದ್ದು ನ್ಯಾಮಗೌಡ ಅವರ ನಿಧನದ ಪ್ರಯುಕ್ತ ಹಿಂದಕ್ಕೆ ಪಡೆದುಕೊಂಡಿರುವುದಾಗಿ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸಿದ್ದು ಸವದಿ ತಿಳಿಸಿದ್ದಾರೆ.











Click it and Unblock the Notifications