ಪೊಲೀಸ್ ಅಧಿಕಾರಿಗೆ 'ನಿಮ್ಮನ್ನು ಬಿಡುವುದಿಲ್ಲ' ಎಂದು ಬೆದರಿಕೆ ಹಾಕಿದ ಕಾಂಗ್ರೆಸ್ ಶಾಸಕ ಆನಂದ್ ನ್ಯಾಮಗೌಡ

ಇತ್ತೀಚೆಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಡಿಜಿಪಿ ಪ್ರವೀಣ್ ಸೂದ್ ಅವರನ್ನು ನಾಲಾಯಕ್ ಎಂದು ಹೇಳಿ ದೊಡ್ಡ ವಿವಾದವನ್ನು ಎಬ್ಬಿಸಿದ್ದರು.

ಬಾಗಲಕೋಟೆ, ಮಾರ್ಚ್ 17: ಚುನಾವಣೆ ಸಮಯದಲ್ಲಿ ರಾಜಕಾರಣಿಗಳು ಏನು ಮಾಡಿದರೂ ಅದು ದೊಡ್ಡ ವಿಷಯವಾಗಿ ಸಾರ್ವಜನಿಕರ ಗಮನಕ್ಕೆ ಬಂದೆ ಬರುತ್ತದೆ. ಹೋಗಿದ್ದರೂ ಕೆಲವು ನಾಯಕರು ತಮ್ಮ ಸ್ಥಾನವನ್ನು ಮರೆತು ಜನರ ಎದುರೇ ಗದ್ದಲ, ರಂಪಾಟಗಳು ಮಾಡಿ ಸಿಲುಕಿಕೊಳ್ಳುತ್ತಾರೆ. ಬಳಿಕ ಇದನ್ನು ಅವರ ವಿರೋಧ ಪಕ್ಷಗಳು ಚುನಾವಣೆ ಪ್ರಚಾರಕ್ಕೆ ಸರಕಾಗಿ ಬಳಸಿಕೊಳ್ಳುತ್ತವೆ.

ಇತ್ತೀಚೆಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಡಿಜಿಪಿ ಪ್ರವೀಣ್ ಸೂದ್ ಅವರನ್ನು ನಾಲಾಯಕ್ ಎಂದು ಹೇಳಿ ದೊಡ್ಡ ವಿವಾದವನ್ನು ಎಬ್ಬಿಸಿದ್ದರು. ಈಗ ತಮ್ಮ ಅಧ್ಯಕ್ಷರ ಸಾಲಿಗೆ ಸೇರಲು ಜಮಖಂಡಿ ಶಾಸಕ ಆನಂದ್ ನ್ಯಾಮಗೌಡ ತುದಿಗಾಲಲ್ಲಿ ನಿಂತು, ಪೊಲೀಸ್ ಅಧಿಕಾರಿಯೊಬ್ಬರನ್ನು ಸಾರ್ವಜನಿಕವಾಗಿ ನಿಂದಿಸಿ ಬೆದರಿಕೆ ಹಾಕಿದ್ದಾರೆ. ಈ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

Jamkhandi Congress MLA Anand Nyamagouda Warns A Cop In Public

ಬಾಗಲಕೋಟೆ ಜಿಲ್ಲೆಯ ಜಮಖಂಡಿ ಪಟ್ಟಣದ ಕಾಂಗ್ರೆಸ್ ಶಾಸಕ ಆನಂದ್ ಸಿದ್ದು ನ್ಯಾಮಗೌಡ ಅವರು ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಒಬ್ಬರ ಮೇಲೆ ವಾಗ್ದಾಳಿ ನಡೆಸಿದ್ದು, ಪೊಲೀಸರ ಮೇಲೆ ಅಸಭ್ಯ ಭಾಷೆ ಬಳಸಿ ಕಿಡಿಕಾರಿದ್ದಾರೆ. ಈ ವಿಡಿಯೋ ಇಂಟರ್‌ನೆಟ್‌ನಲ್ಲಿ ವೈರಲ್ ಆಗಿದ್ದು, ಆಡಳಿತ ಪಕ್ಷ ಬಿಜೆಪಿ ಕೂಡ ಕಾಂಗ್ರೆಸ್ ಶಾಸಕರ ವರ್ತನೆಗೆ ಆಕ್ರೋಶ ವ್ಯಕ್ತಪಡಿಸಿದೆ.

ಜಮಖಂಡಿಯಲ್ಲಿ ಪಟ್ಟಣದಲ್ಲಿ ನಿರ್ಮಾಣವಾಗಲಿರುವ ವೃತ್ತಕ್ಕೆ ಸಂಬಂಧಿಸಿದಂತೆ ಪಿಎಸ್‌ಐ ಬಸವರಾಜ್ ಕೊಣ್ಣೂರ್ ಮತ್ತು ಕಾಂಗ್ರೆಸ್ ಶಾಸಕ ಆನಂದ್ ಸಿದ್ದು ನ್ಯಾಮಗೌಡ ಅವರ ನಡುವೆ ಮಾತಿನ ಚಕಮಕಿ ನಡೆದಿದೆ ಎಂದು ಮೂಲಗಳು ತಿಳಿಸಿವೆ. ನಿರ್ಮಾಣವಾಗಲಿರುವ ವೃತ್ತದ ಪರಿಶೀಲನೆಗೆ ಬಂದಿದ್ದ ಆನಂದ್ ನ್ಯಾಮಗೌಡಗೆ ಸರ್ಕಲ್ ನಿರ್ಮಾಣದಿಂದ ಆಗುವ ಸಮಸ್ಯೆಗಳ ಬಗ್ಗೆ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ವಿವರಿಸಲು ಹೋದಾಗ ಘಟನೆ ಸಂಭವಿಸಿದೆ.

ಪರಿಶೀಲನೆ ವೇಳೆ ಮಾತನಾಡಿದ ಪಿಎಸ್‌ಐ ಬಸವರಾಜ್ ಕೊಣ್ಣೂರ್, ಈ ವೃತ್ತ ನಿರ್ಮಿಸಿದರೆ ಸಮಸ್ಯೆಯಾಗುತ್ತದೆ ಎಂದು ಶಾಸಕರಿಗೆ ಮನವರಿಕೆ ಮಾಡಿಕೊಡಲು ಪ್ರಯತ್ನಿಸುತ್ತಾರೆ. ಇದು ಕಾಂಗ್ರೆಸ್ ಶಾಸಕರನ್ನು ಕೆರಳಿಸಿದ್ದು, "ಸುಮ್ಮನಿರು. ಇದರ ಬಗ್ಗೆ ನಿನಗೆ ಏನೂ ಗೊತ್ತಿಲ್ಲ. ನಿಮಗೆ ಪ್ರಸ್ತುತ ಸರ್ಕಾರದ ಬೆಂಬಲವಿದೆ ಎಂದು ನನಗೆ ತಿಳಿದಿದೆ. ಆದರೆ ನಾವು ಅಧಿಕಾರಕ್ಕೆ ಬಂದಾಗ ನಾನು ನಿಮ್ಮನ್ನು ಬಿಡುವುದಿಲ್ಲ" ಎಂದು ಆಕ್ರೋಶ ಹೊರಹಾಕಿದ್ದಾರೆ.

Jamkhandi Congress MLA Anand Nyamagouda Warns A Cop In Public

ಶಾಸಕರ ಬೆಂಬಲಿಗರು ಅವರನ್ನು ಸಮಾಧಾನ ಪಡಿಸಲು ಯತ್ನಿಸಿದಾಗಲೂ ಸುಮ್ಮನಿರದ ಆನಂದ್ ಸಿದ್ದು ನ್ಯಾಮಗೌಡ, "ನೀವು ಶಾಸಕರೇ..? ಯಾವುದು ಸರಿ ಮತ್ತು ತಪ್ಪು ಎಂದು ನಿರ್ಧರಿಸಲು ನೀವು ಯಾರು..? ನಿನ್ನ ಕರ್ತವ್ಯವನ್ನು ಮಾತ್ರ ಮಾಡು. ನಿನ್ನ ಮೇಲೆ ಯಾವಾಗಲೂ ನನ್ನ ಕಣ್ಣಿರುತ್ತದೆ" ಎಂದು ಪಿಎಸ್‌ಐ ಬಸವರಾಜ್ ಕೊಣ್ಣೂರ್ ವಿರುದ್ಧ ಕಿಡಿಕಾರಿದ್ದಾರೆ.

ಇನ್ನೂ, ಈ ವಿಡಿಯೋ ಹಂಚಿಕೊಂಡಿರುವ ಬಿಜೆಪಿ, ಕಾಂಗ್ರೆಸ್ ವಿರುದ್ಧ ಕಿಡಿಕಾರಿದೆ. "ನಿನ್ನೆಯಷ್ಟೇ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರಾಮಾಣಿಕ ಪೊಲೀಸ್ ಅಧಿಕಾರಿಗಳ ಮೇಲೆ ರೌಡಿ ಪ್ರವೃತ್ತಿ ತೋರಿದ್ದರು. ಈಗ ಅವರ ಹಾದಿಯಲ್ಲೇ ಜಮಖಂಡಿ ಕಾಂಗ್ರೆಸ್ ಶಾಸಕ ಆನಂದ್ ಸಿದ್ದು ನ್ಯಾಮಗೌಡ ಪೊಲೀಸರ ಮೇಲೆ ಗೂಂಡಾಗಿರಿ ಪ್ರದರ್ಶಿಸಿದ್ದಾರೆ. ಕಾಂಗ್ರೆಸ್ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ರಾಜ್ಯ ರೌಡಿಗಳ ಅಡ್ಡವಾಗಲಿದೆ" ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಈ ಹಿಂದೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಡಿಜಿಪಿ ಪ್ರವೀಣ್ ಸೂದ್ ಅವರ ಬಗ್ಗೆ "ನಮ್ಮ ಡಿಜಿಪಿ ಒಬ್ಬ ನಾಲಾಯಕ್ (ನಿಷ್ಪ್ರಯೋಜಕ) ಮತ್ತು ಅವರು ತಮ್ಮ ಕೆಲಸಕ್ಕೆ ಯೋಗ್ಯರಲ್ಲ" ಎಂದು ಹೇಳಿ ದೊಡ್ಡ ವಿವಾದವನ್ನು ಎಬ್ಬಿಸಿದ್ದರು.

"ಪ್ರವೀಣ್ ಸೂದ್ ಅವರು ಕಳೆದ ಮೂರು ವರ್ಷಗಳಿಂದ ಸೇವೆಯಲ್ಲಿದ್ದಾರೆ. ಇನ್ನೂ ಎಷ್ಟು ದಿನ ಬಿಜೆಪಿಯ ಕಾರ್ಯಕರ್ತರಾಗಿ ಮುಂದುವರಿಯುತ್ತಾರೆ..? ಕಾಂಗ್ರೆಸ್ ನಾಯಕರ ಮೇಲೆ ಸುಮಾರು 25 ಪ್ರಕರಣಗಳನ್ನು ದಾಖಲಿಸಿದ್ದು, ರಾಜ್ಯದಲ್ಲಿ ಬಿಜೆಪಿ ನಾಯಕರ ಮೇಲೆ ಒಂದೇ ಒಂದು ಪ್ರಕರಣವೂ ಇಲ್ಲ. ಅವರ ಕರ್ತವ್ಯ ಮತ್ತು ನಡವಳಿಕೆಯ ಬಗ್ಗೆ ನಾವು ಚುನಾವಣಾ ಆಯೋಗಕ್ಕೂ ಪತ್ರ ಬರೆದಿದ್ದೇವೆ. ಅಧಿಕಾರಕ್ಕೆ ಬಂದ ನಂತರ ಡಿಜಿಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು" ಎಂದು ಡಿಕೆ ಶಿವಕುಮಾರ್ ಹೇಳಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+