Bilgi constituency: ಬೀಳಗಿಯಲ್ಲಿ ಮತ್ತೆ ಅದೃಷ್ಟ ಪರೀಕ್ಷೆಗೆ ಮುಂದಾದ ಮುರುಗೇಶ್ ನಿರಾಣಿ!
ಈ ಬಾರಿ ಬೀಳಗಿ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಎರಡು ರಾಷ್ಟ್ರೀಯ ಪಕ್ಷಗಳ ನಡುವೆ ನೇರ ಪೈಪೋಟಿ ಇದೆ. ಕಾಂಗ್ರೆಸ್ ಬಿಜೆಪಿ ಸೆಣಸಲಿವೆ. ಇದಕ್ಕೆ ಸಂಬಂಧಿಸಿದ ವರದಿ, ವಿಶ್ಲೇಷಣೆ ಓದಿ.
ಬಾಗಲಕೋಟೆ ಜಿಲ್ಲೆಯ ತಾಲೂಕು ಕೇಂದ್ರ ಬೀಳಗಿ. ಹಿಂದೆ ಜಮಖಂಡಿ ತಾಲೂಕಿಗೆ ಬೀಳಗಿ ಸೇರಿತ್ತು. 1959ರಲ್ಲಿ ಬೀಳಗಿ ತಾಲೂಕು ರಚನೆಗೊಂಡಿತು. ಘಟಪ್ರಭಾ ಮತ್ತು ಕೃಷ್ಣಾ ನದಿ ಕ್ಷೇತ್ರದ ವ್ಯಾಪ್ತಿಯಲ್ಲಿ ಹರಿಯುತ್ತವೆ. ಬೀಳಗಿ ತಾಲೂಕಿನ ಹೆಚ್ಚಿನ ಪ್ರದೇಶ ಕರಿ ಎರೆಮಣ್ಣಿನಿಂದ ಕೂಡಿವೆ. ಬಾಗಲಕೋಟೆ ಜಿಲ್ಲೆಯ ಬೀಳಗಿ, ತಾಲೂಕು ಕೇಂದ್ರವಾಗಿದ್ದು ಇಲ್ಲಿ ದೇಸಾಯಿ ಮನೆತನಕ್ಕೆ ಸೇರಿದ ಪುರಾತನ ದೇವಾಲಯಗಳು ಹಾಗೂ ಬಾವಿಗಳಿವೆ. ತಾಲೂಕಿನ ಬಹಳಷ್ಟು ಜನರು ವ್ಯವಸಾಯವನ್ನು ಅವಲಂಬಿಸಿದ್ದಾರೆ. ಕಬ್ಬು ಬೆಳೆಗಾರರೇ ಹೆಚ್ಚು. ಇದಕ್ಕೆ ಪೂರಕ ಎಂಬಂತೆ ಹಲವಾರು ಸಕ್ಕರೆ ಕಾರ್ಖಾನೆಗಳು ಕ್ಷೇತ್ರದಲ್ಲಿವೆ. ಈ ಕ್ಷೇತ್ರದಲ್ಲಿ ಗಾಣಿಗ ಸಮುದಾಯದ ಮತಗಳು ನಿರ್ಣಾಯಕ.
ಮುಂಬರುವ ಚುನಾವಣಾ ಸಮರಕ್ಕೆ ಸಜ್ಜಾಗಿರುವ ಬೀಳಗಿ ಕ್ಷೇತ್ರ ಕರ್ನಾಟಕ ರಾಜ್ಯದ 224 ಕ್ಷೇತ್ರಗಳ ಪೈಕಿ ಒಂದಾಗಿದೆ. 2018ರ ಕಳೆದ ಚುನಾವಣೆಯಲ್ಲಿ ಇಲ್ಲಿ ಭಾರತೀಯ ಜನತಾ ಪಾರ್ಟಿ ಪಕ್ಷದ ಅಭ್ಯರ್ಥಿ ಮುರುಗೇಶ್ ನಿರಾಣಿ ಜಯ ಗಳಿಸಿದ್ದರು. ಕಾಂಗ್ರೆಸ್‌ನ ಜಗದೀಶ್ ತಿಮ್ಮನಗೌಡ ಪಾಟೀಲ 4811 ಮತಗಳ ಅಂತರದಿಂದ ಸೋಲನ್ನು ಅನುಭವಿಸಿದ್ದರು. ಬೀಳಗಿ ಕ್ಷೇತ್ರದ ಚುನಾವಣಾ ಇತಿಹಾಸ, ಈಗಿನ ಬೆಳವಣಿಗೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ.
ಈ ಬಾರಿ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆಯೂ ಹೆಚ್ಚಿದೆ. ಬಿಜೆಪಿಯಿಂದ ಕಳೆದ ಚುನಾವಣೆಯಲ್ಲಿ ಸ್ಪರ್ಧಿಸಿ ಜಯಗಳಿಸಿ ಮುರುಗೇಶ್ ನಿರಾಣಿ ಮತ್ತೆ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. ಮುರುಗೇಶ್ ನಿರಾಣಿ ಲಿಂಗಾಯತ ಮುಖಂಡರು. ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಭರ್ಜರಿ ತಯಾರಿ ನಡೆಸಿದ್ದಾರೆ. ಇವರೊಂದಿಗೆ ಬಿಜೆಪಿಯಲ್ಲಿಯೂ ಹಲವು ಆಕಾಂಕ್ಷಿಗಳಿದ್ದಾರೆ.
ಸಮೃದ್ಧ ನೀರಾವರಿಯೊಂದಿಗೆ ಆಲಮಟ್ಟಿ ಮುಳುಗಡೆ ಸಂತ್ರಸ್ತರ ಸಮಸ್ಯೆಯನ್ನೂ ಹೊತ್ತ ಬೀಳಗಿ ವಿಧಾನಸಭೆ ಕ್ಷೇತ್ರದಲ್ಲೀಗ ಬಿಸಿಲಿನೊಂದಿಗೆ ಚುನಾವಣೆ ಬಿಸಿ ಆವರಿಸಿದೆ. ಬೃಹತ್ ಹಾಗೂ ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ಪ್ರತಿನಿಧಿಸುವ ಪ್ರತಿಷ್ಠಿತ ಕ್ಷೇತ್ರ ಇದಾಗಿದ್ದು ಈ ಕ್ಷೇತ್ರದಲ್ಲಿ ಇತರ ಪಕ್ಷಗಳ ಘಟಾನುಘಟಿಗಳು ಸ್ಪರ್ಧಿಸಲು ಸಜ್ಜಾಗುತ್ತಿದ್ದಾರೆ.

ಬೀಳಗಿಯ ಹಿಂದಿನ ಚುನಾವಣೆ ಫಲಿತಾಂಶ
ಲಿಂಗಾಯಿತ ಪಂಚಮಸಾಲಿ ಸಮಾಜದ ನಿರಾಣಿ 2004, 2008, 2018ರಲ್ಲಿ ಗೆಲುವು ಕಂಡಿದ್ದಾರೆ. ಎರಡು ಬಾರಿ ಬೃಹತ್ ಕೈಗಾರಿಕೆ ಖಾತೆ ನಿರ್ವಹಿಸಿದ್ದಾರೆ. ಮಾಜಿ ವಿಧಾನ ಪರಿಷತ್ ವಿಪಕ್ಷ ನಾಯಕ, ಮಾಜಿ ಸಚಿವ ಎಸ್.ಆರ್.ಪಾಟೀಲರು ಗಾಂಧಿ ನಡಿಗೆ ಕೃಷ್ಣೆಯ ಕಡೆಗೆ ಅಂತ ಪಾದಯಾತ್ರೆ, ಮತ್ತೇ ಕೃಷ್ಣೆ-ಮಹಾದಾಯಿ-ನವಲಿ ಸಂಕಲ್ಪಯಾತ್ರೆಗಾಗಿ ಎಂಬ ಟ್ರ್ಯಾಕ್ಟರ್ ಯಾತ್ರೆ ಹಮ್ಮಿಕೊಂಡಿದ್ದರು. ಎದುರಾಳಿ ಕಾಂಗ್ರೆಸ್‌ನ ಹಿರಿಯ ರಾಜಕಾರಣಿ ಜೆಟಿ ಪಾಟೀಲ್ 1994,1999 ಹಾಗೂ 2013ರಲ್ಲಿ ಜಯ ಗಳಿಸಿದ್ದಾರೆ.
ಒಂದು ಲಕ್ಷ ಎಕರೆ ಪ್ರದೇಶದ ನೀರಾವರಿ ಸೌಲಭ್ಯ, ನೀರಾವರಿ ಯೋಜನೆಗಳ ಅನುಷ್ಠಾನ, ವಿದ್ಯುತ್ ಕೇಂದ್ರಗಳ ಸ್ಥಾಪನೆ ಸೇರಿದಂತೆ ಅಭಿವೃದ್ಧಿ ವಿಷಯಗಳೇ ನಿರಾಣಿಗೆ ಈ ಬಾರಿಯ ಎಲೆಕ್ಷನ್ ಅಜೆಂಡಾ ಆಗಿದೆ. ಸವಿಚರು ಕ್ಷೇತ್ರ ತೊರೆಯುತ್ತಾರೆ ಎಂಬ ವದಂತಿಗೆ 'ನನ್ನ ಸ್ಪರ್ಧೆ ಬೀಳಗಿಯಿಂದ ಮಾತ್ರ' ಎಂದು ನಿರಾಣಿ ಸ್ಪಷ್ಟನೆ ನೀಡಿದ್ದಾರೆ. ಬಿಜೆಪಿಯಲ್ಲಿ ನಿರಾಣಿ ಹೊರತಾಗಿ ಬಸವರಾಜ ಯಂಕಂಚಿ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.

ಕಾಂಗ್ರೆಸ್‌ನಲ್ಲಿ ಟಿಕೆಟ್ ಆಕಾಂಕ್ಷಿಗಳು
ಬೀಳಗಿ ಮಾಜಿ ಶಾಸಕ ಜೆಟಿ ಪಾಟೀಲ್ ಸಹಜವಾಗಿ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಕಳೆದ ಬಾರಿಯ ಸೋಲನ್ನು ಈ ಬಾರಿ ಜಯವಾಗಿ ಪರಿವರ್ತಿಸುವ ಇರಾದೆಯಲ್ಲಿದ್ದಾರೆ. ಆದರೆ, ವಿಧಾನ ಪರಿಷತ್ ಟಿಕೆಟ್ ವಂಚಿತರಾದ ಮಾಜಿ ಸಚಿವ ಎಸ್ಆರ್ ಪಾಟೀಲ್ ಈಗ ವಿಧಾನಸಭೆ ಮೇಲೆ ಕಣ್ಣಿಟ್ಟಿದ್ದಾರೆ. ಬೀಳಗಿ ಹಾಗೂ ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ಕ್ಷೇತ್ರದ ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಿದ್ದಾರೆ. ಇದರಿಂದ ಕಾಂಗ್ರೆಸ್ ಟಿಕೆಟ್ ಹಂಚಿಕೆ ಸ್ವಲ್ಪ ಗೊಂದಲಮಯವಾಗಿದೆ.
ಜೆಟಿ ಹಾಗೂ ಎಸ್ಆರ್ ಲಿಂಗಾಯಿತ ರೆಡ್ಡಿ ಸಮಾಜಕ್ಕೆ ಸೇರಿದವರು. ಎಸ್‌ಆರ್ ದೇವರಹಿಪ್ಪರಗಿಗೆ ತೆರಳಿದರೆ ಬೀಳಗಿಯಲ್ಲಿ ಜೆಟಿ ಪಾಟೀಲರಿಗೆ ಅವಕಾಶ ದೊರೆಯುವ ಸಾಧ್ಯತೆ ಹೆಚ್ಚು. ಇಬ್ಬರು ದಿಗ್ಗಜ ನಾಯಕರೊಂದಿಗೆ ಕಾಂಗ್ರೆಸ್ ಮುಖಂಡ ಬಸವಪ್ರಭು ಸರನಾಡಗೌಡ, ಶಿವಾನಂದ ನಿಂಗನೂರ ಸೇರಿದಂತೆ ಎಂಟು ಆಕಾಂಕ್ಷಿಗಳು ಇದ್ದಾರೆ.

ದಿಗ್ಗಜರ ಸ್ಪರ್ಧೆಗೆ ಸಾಕ್ಷಿ ಆಗಲಿದೆ ಬೀಳಗಿ
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಾಗಲಕೋಟೆಯ ಇಬ್ಬರು ದಿಗ್ಗಜರ ನಡುವಿನ ಜಿದ್ದಾಜಿದ್ದಿನ ಹೋರಾಟಕ್ಕೆ ಬೀಳಗಿ ಕ್ಷೇತ್ರ ಸಾಕ್ಷಿಯಾಗಲಿದೆ. ಶೈಕ್ಷಣಿಕ ಕ್ಷೇತ್ರದಲ್ಲಿ ಸಾಕಷ್ಟು ದೊಡ್ಡ ಹೆಸರು ಮಾಡಿರುವ ಜೊತೆಗೆ ಸಕ್ಕರೆ ಕಾರ್ಖಾನೆ ಹೊಂದಿರುವ ಮಾಜಿ ಸಚಿವ ಎಸ್.ಆರ್ ಪಾಟೀಲ್, ನಿರಂತರ 24 ವರ್ಷ ವಿಧಾನಪರಿಷತ್ ಸದಸ್ಯರಾಗಿ ರಾಜಕೀಯ ಕ್ಷೇತ್ರದಲ್ಲಿ ಹಲವು ಹುದ್ದೆಗಳನ್ನು ಅನುಭವಿಸಿದರು.
ವಿಧಾನಸಪರಿಷತ್ ಸಭಾ ನಾಯಕರಾಗಿ, ಪ್ರತಿಪಕ್ಷ ನಾಯಕರಾಗಿ ಕಾಂಗ್ರೆಸ್ ಸರ್ಕಾರದಲ್ಲಿ ವಿವಿಧ ಇಲಾಖೆಗಳ ಸಚಿವರಾಗಿಯೂ ಅನುಭವ ಹೊಂದಿದ್ದಾರೆ. ಮೇಲ್ಮನೆ ಸದಸ್ಯರಾಗಿ ಸಾಕಷ್ಟು ಅನುಭವ ಹೊಂದಿರುವ 73 ವರ್ಷದ ಎಸ್.ಆರ್ ಪಾಟೀಲ್ ಅವರು ಮುಂದಿನ ಚುನಾವಣೆಯಲ್ಲಿ ತಮ್ಮ ತವರು ಬೀಳಗಿ ಕ್ಷೇತ್ರದಿಂದಲೇ ಕೆಳಮನೆ ಪ್ರವೇಶದ ಅದೃಷ್ಟ ಪರೀಕ್ಷೆಗೆ ಮುಂದಾಗಲಿದ್ದಾರೆ.
ಇವರಿಗೆ ಪ್ರಬಲ ಪ್ರತಿಸ್ಪರ್ಧಿಯನ್ನು ಮತ್ತೋರ್ವ ಕೈಗಾರಿಕೋದ್ಯಮಿ ಹಾಗೂ ಸಕ್ಕರೆ ಉದ್ಯಮದ ಮಾಲೀಕರಾಗಿರುವ ಹಾಗೂ ಹಾಕಿ ಸಚಿವರೂ ಆಗಿರುವ ಮುರುಗೇಶ್ ನಿರಾಣಿ ನೀಡಲಿದ್ದಾರೆ. ಮುಂದಿನ ಅವಧಿಗೂ ಅವರೇ ಬಿಜೆಪಿಯಿಂದ ಅಭ್ಯರ್ಥಿಯಾಗುವುದು ಪಕ್ಕಾ ಎನ್ನಲಾಗುತ್ತಿದೆ. 2008ರಲ್ಲಿ ಶಾಸಕರಾಗಿ ಅಜಯ್ ಕುಮಾರ್ ನಾಯಕ್ ವಿರುದ್ಧ ಗೆಲುವು ಸಾಧಿಸಿದ್ದ ಮುರುಗೇಶ್ ನಿರಾಣಿ ಅವರು 2013ರಲ್ಲಿ ಮತ್ತೆ ಅವರ ವಿರುದ್ಧವೇ ಸೋಲು ಅನುಭವಿಸಿದ್ದರು. ಚುನಾವಣೆ ಇತಿಹಾಸದಲ್ಲೇ ಕಾಂಗ್ರೆಸ್ ಮತ್ತು ಬಿಜೆಪಿ ಬೀಳಗಿಯಲ್ಲಿ ತೀವ್ರ ಪೈಪೋಟಿ ಎದುರಾಗುತ್ತಾ ಬಂದಿದೆ.

ವಾದ ಪ್ರತಿವಾದ ಶುರು
ಚುನಾವಣೆ ಹತ್ತಿರವಾದಂತೆ ಮಾಜಿ ಹಾಗೂ ಹಾಲಿ ಶಾಸಕರ ಮಧ್ಯೆ ವಾದ, ಪ್ರತಿವಾದ ಶುರುವಾಗಿದೆ. ಕ್ಷೇತ್ರದ ಹಲವು ಬೂತ್‌ಗಳಲ್ಲಿ ಅಲ್ಪಸಂಖ್ಯಾತ ಮತದಾರರ ಹೆಸರುಗಳನ್ನು ವೋಟರ್ ಲಿಸ್ಟ್‌ನಿಂದ ಕೈಬಿಡಲಾಗಿದೆ ಎಂಬುದು ಜೆಟಿ ಪಾಟೀಲ್ ಆರೋಪ. ' ಅವರು ಹಿರಿಯ ರಾಜಕಾರಣಿ, ಚುನಾವಣೆ ಆಯೋಗಕ್ಕೆ ದೂರು ನೀಡಲಿ' ಎನ್ನುವುದು ಸಚಿವ ನಿರಾಣಿ ಪ್ರತ್ಯುತ್ತರ. ಬೀಳಗಿ ಕ್ಷೇತ್ರದಲ್ಲಿ ಕುರುಬ ಸಮುದಾಯ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ನಂತರದ ಸ್ಥಾನದಲ್ಲಿ ಎಸ್‌ಸಿ, ಎಸ್‌ಟಿ ಮತದಾರರಿದ್ದಾರೆ. ಗಾಣಿಗ ಸೇರದಂತೆ ನಾನಾ ಸಮಾಜಗಳ ಮತದಾರರು ಕೂಡ ಇದ್ದಾರೆ. ಅದರೆ, ಕುರುಬ ಮತಗಳೇ ನಿರ್ಣಾಯಣವಾಗಿವೆ.
ಈ ಬಾರಿ ಬಿಜೆಪಿಯಿಂದ ಮುರುಗೇಶ್ ನಿರಾಣಿ ಹಾಗೂ ಬಸವರಾಜ ಯಂಕಂಚಿ ಸ್ಪರ್ಧಿಸಲು ಪೈಪೋಟಿ ನಡೆಸುತ್ತಿದ್ದರೆ, ಕಾಂಗ್ರೆಸ್‌ನಿಂದ ಜೆ.ಟಿ ಪಾಟೀಲ್, ಎಸ್.ಆರ್ ಪಾಟೀಲ್, ಬಸವಪ್ರಭು ಸರನಾಡಗೌಡ, ಎಂ.ಎನ್.ಪಾಟೀಲ್, ಬಸವರಾಜ ಖೋತ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ.

ಬೀಳಗಿ ಮತದಾರರ ಸಂಖ್ಯೆ
ಬೀಳಗಿ ಕ್ಷೇತ್ರದಲ್ಲಿ ಪುರುಷ ಮತದಾರರ ಸಂಖ್ಯೆ 107910 ಇದ್ದು ಮಹಿಳಾ ಮತದಾರರ ಸಂಖ್ಯೆ 108615 ಇದೆ. ಒಟ್ಟು ಬೀಳಗಿಯಲ್ಲಿ ಕ್ಷೇತ್ರದಲ್ಲಿ 216553 ಮತದಾರರಿದ್ದಾರೆ. ಬಾದಾಮಿ ತಾಲೂಕಿನ ಹಲಕುರ್ಕಿಯಲ್ಲಿ ವಿಮಾನ ನಿಲ್ದಾಣ ಗ್ಲಾಸ್ ಫ್ಯಾಕ್ಟರಿ ಸ್ತಾಪನೆಗಾಗಿ ಎರಡು ಸಾವಿರ ಎಕರೆ ಭೂಮಿ ಸ್ವಾಧೀನಕ್ಕೆ ರೈತರ ವಿರೋಧ ಎದುರಾಗಿದೆ. ಎಕರೆಗೆ 18 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಸಚಿವರು ಘೋಷಿಸಿದ್ದು, ಕೆಲವರು ಭೂಮಿ ನೀಡಲು ಮುಂದೆ ಬಂದಿದ್ದಾರೆ. ಆದರೆ, ಭೂಸ್ವಾಧೀನ ವಿವಾದ ಇನ್ನೂ ತಣ್ಣಗಾಗಿಲ್ಲ. ಜೊತೆಗೆ ಕಬ್ಬು ಬೆಳೆಗಾರರಿಗೆ ಹೆಚ್ಚುವರಿ ಬಿಲ್ ಪಾವತಿಸಿಲ್ಲ ಎಂದು ಆರೋಪಿಸಿ ಪ್ರತಿಭಟನೆಗಳು ನಡೆದಿವೆ. ಬೀಳಗಿಯಲ್ಲಿ ಬೇಸಿಗೆ ವೇಳೆ ನೀರಿನ ಸಮಸ್ಯೆ ಹೆಚ್ಚಾಗುತ್ತದೆ, ನಿರುದ್ಯೋಗ, ರೈತರ ಬೆಳೆಗೆ ನೀರು, ರಸ್ತೆ ಇನ್ನಿತರ ಬೇಡಿಕೆಗಳನ್ನು ಇಲ್ಲಿನ ಮತದಾರರು ಹೊಂದಿದ್ದಾರೆ.
-
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ












Click it and Unblock the Notifications