Terdal Constituency: ತೇರದಾಳ ನೇಕಾರರ ಬೆಂಬಲ ಯಾರಿಗೆ?
ಈ ಬಾರಿ ತೇರದಾಳ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಎರಡು ರಾಷ್ಟ್ರೀಯ ಪಕ್ಷಗಳ ನಡುವೆ ನೇರ ಪೈಪೋಟಿ ಇದೆ. ಕಾಂಗ್ರೆಸ್ ಬಿಜೆಪಿ ಸೆಣಸಲಿವೆ. ಇದಕ್ಕೆ ಸಂಬಂಧಿಸಿದ ವರದಿ, ವಿಶ್ಲೇಷಣೆ ಓದಿ.
ಉತ್ತರ ಕರ್ನಾಟಕದ ಬಾಗಲಕೋಟೆ ಜಿಲ್ಲೆಯ ಏಳು ವಿಧಾನಸಭಾ ಮತಕ್ಷೇತ್ರಗಳ ಪೈಕಿ ತೇರದಾಳ ವಿಧಾನಸಭಾ ಮತಕ್ಷೇತ್ರ ಕೂಡ ಒಂದು. ಮುಂದಿನ ವಿಧಾನಸಭಾ ಚುನಾವಣಾ ಸಮರಕ್ಕೆ ಸಜ್ಜಾಗಿರುವ ತೇರದಾಳದಲ್ಲಿ ಸದ್ಯ ಬಿಜೆಪಿ ಪಕ್ಷ ಆಡಳಿತದಲ್ಲಿದೆ. 2018ರ ಕಳೆದ ಚುನಾವಣೆಯಲ್ಲಿ ಇಲ್ಲಿ ಭಾರತೀಯ ಜನತಾ ಪಾರ್ಟಿ ಪಕ್ಷದ ಸಿದ್ದು ಸವದಿ ಇಲ್ಲಿ ಜಯ ಗಳಿಸಿದ್ದರು. ಕಾಂಗ್ರೆಸ್‌ನ ಉಮಾಶ್ರೀ 20889 ಮತಗಳ ಅಂತರದಿಂದ ಸೋಲನ್ನು ಅನುಭವಿಸಿದ್ದರು. ತೇರದಾಳ ಕ್ಷೇತ್ರದ ಚುನಾವಣಾ ಇತಿಹಾಸ, ಈಗಿನ ಬೆಳವಣಿಗೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ.
ತೇರದಾಳ ವಿಧಾನಸಭಾ ಮತಕ್ಷೇತ್ರದಲ್ಲಿ ಇಲ್ಲಿಯವರೆಗೆಗೆ ಮೂರು ಚುನಾವಣೆ ನಡೆದಿದೆ. ಇದರಲ್ಲಿ ಎರಡು ಬಾರಿ ಬಿಜೆಪಿಯಿಂದ ಶಾಸಕರಾಗಿ ಸಿದ್ದು ಸವದಿ ಗೆದ್ದು ಬಂದಿದ್ದರೆ, ಒಂದು ಬಾರಿ ಉಮಾಶ್ರೀ ಶಾಸಕಿಯಾಗಿ ಸಚಿವೆ ಆಗಿದ್ದರು. ಸದ್ಯ ಈ ಕ್ಷೇತ್ರದ ಹಾಲಿ ಶಾಸಕ ಬಿಜೆಪಿಯ ಸಿದ್ದು ಸವದಿ ಆಗಿದ್ದು, ಈ ಹಿಂದೆ ಈ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಮಾಜಿ ಸಚಿವೆ ಉಮಾಶ್ರೀ ಸ್ಪರ್ದಿಸಿ ಒಮ್ಮೆ ಗೆಲುವು ಕಂಡು ಕಳೆದ ಬಾರಿ ಸಿದ್ದು ಸವದಿ ವಿರುದ್ಧ ಸೋಲನ್ನು ಅನುಭವಿಸಿದ್ದಾರೆ. ಆದರೆ ಈಗ ಹಾಲಿ ಶಾಸಕ ಸಿದ್ದು ಸವದಿ ಮತ್ತು ಮಾಜಿ ಶಾಸಕಿ ಉಮಾಶ್ರೀ ಅವರಿಗೆ ಈ ಬಾರಿಯ ಟಿಕೆಟ್ ದಕ್ಕೂದು ಅಷ್ಟು ಸುಲಭದ ಮಾತಲ್ಲ. ಯಾಕಂದರೆ ಬಿಜೆಪಿ ಮತ್ತು ಕಾಂಗ್ರೆಸ್‌ನಲ್ಲಿ ಮುಖಂಡರುಗಳಿಂದ ಟಿಕೆಟ್‌ಗಾಗಿ ಇನ್ನಿಲ್ಲದ ಪೈಪೋಟಿ ಶುರುವಾಗಿದೆ.

ನೇಕಾರ ಸಮುದಾಯದ ಮತಗಳು ನಿರ್ಣಾಯಕ
ತೇರದಾಳದಲ್ಲಿ ಜನಸಂಖ್ಯೆ ಸುಮಾರು 33,803 ಇದೆ. ರಾಜ್ಯದಲ್ಲಿ ಅತಿಹೆಚ್ಚು ನೇಕಾರರು ಇರುವ ವಿಧಾನಸಭಾ ಮತಕ್ಷೇತ್ರಗಳಲ್ಲಿ ತೇರದಾಳ ಕ್ಷೇತ್ರ ಕೂಡ ಒಂದು. ಹೀಗಾಗಿ ಕ್ಷೇತ್ರದಲ್ಲಿ ನೇಕಾರ ಸಮುದಾಯದ ಮತಗಳು ನಿರ್ಣಾಯಕ. ನೇಕಾರ ಸುಮುದಾಯದ ಬೆಂಬಲವಿದ್ದರೆ ಆ ಪಕ್ಷ ಜಯ ಸಾಧಿಸುತ್ತದೆ ಎನ್ನುವ ನಂಬಿಕೆ ಇದೆ.
ರಾಜಕೀಯವಾಗಿ ಇಲ್ಲಿ ಮೇಲಿಂದ ಮೇಲೆ ನೇಕಾರರಿಗೆ ಮನ್ನಣೆ ನಿಡಿ ಅನ್ನೋ ಕೂಗು ಕೇಳುತ್ತಲೇ ಇತ್ತು, ಇವುಗಳ ಮಧ್ಯೆ ಕಾಂಗ್ರೆಸ್ ನೇಕಾರರಿಗೆ ಮಣೆ ಹಾಕಿ ಒಮ್ಮೆ ಗೆಲುವು ಕಂಡು ಇನ್ನೊಮ್ಮೆ ಸೋಲು ಕಂಡಿದ್ದು ಆಯ್ತು, ಆದ್ರೆ ಬಿಜೆಪಿಯಲ್ಲಿ ಮಾತ್ರ ಪ್ರತಿಬಾರಿ ನೇಕಾರರಿಗೆ ಸ್ಪರ್ಧೆಗೆ ಅವಕಾಶ ಕೊಡಿ ಎಂಬ ಕೂಗು ಇದ್ದರೂ ಇದೂವರೆಗೂ ಬಿಜೆಪಿ ಮನ್ನಣೆ ನೀಡಿಲ್ಲ. ಇವುಗಳ ಮಧ್ಯೆ ಹಾಲಿ ಮತ್ತು ಮಾಜಿ ಶಾಸಕರಿಗೆ ಈ ಬಾರಿ ಟಿಕೆಟ್‌ಗೆ ಇನ್ನಿಲ್ಲದ ಪೈಪೋಟಿಯೊಂದು ಶುರುವಾಗಿದೆ.

2018ರ ಚುನಾವಣೆ ಫಲಿತಾಂಶ
2008ರಲ್ಲಿ ಬಿಜೆಪಿಯ ಸಿದ್ದು ಸವದಿ 62,595 ಮತಗಳನ್ನು ಪಡೆದು ಕಾಂಗ್ರೆಸ್ ಅಭ್ಯರ್ಥಿ ಉಮಾಶ್ರೀ ವಿರುದ್ಧ ಜಯ ಸಾಧಿಸಿದ್ದರು. ಉಮಾಶ್ರೀ 50,351 ಮತಗಳನ್ನು ಪಡೆದು ಸೋಲನ್ನು ಅನುಭವಿಸಿದ್ದರು. 2013 ರ ಚುನಾವಣೆಯಲ್ಲಿ ಬಿಜೆಪಿಯಿಂದ ಸಿದ್ದು ಸವದಿ ಕಣಕ್ಕಿಳಿದಿದ್ದರು. ಉಮಾಶ್ರೀ 70,189 ಮತಗಳನ್ನು ಪಡೆದರೆ ಸಿದ್ದು ಸವದಿ 67,590 ಮತಗಳನ್ನು ಗಳಿಸಿ ಸೋಲನ್ನು ಅನುಭವಿಸಿದ್ದರು. ಬಿಜೆಪಿ-ಕೆಜೆಪಿ ಗೊಂದಲ ಕಾರಣದಿಂದಾಗಿ ಸಿದ್ದು ಸವದಿ ಅವರಿಗೆ ಸೋಲಾಗಿತ್ತು. ಬಿಜೆಪಿ ತೊರೆದು ಕೆಜೆಪಿ ಸೇರಿದ್ದ ಮುಖಂಡರಿಂದಾಗಿ ಬಿಜೆಪಿಗೆ ಅಭ್ಯರ್ಥಿಗೆ ಹಿನ್ನಡೆ ಉಂಟಾಗಿತ್ತು.
2018ರ ಕಳೆದ ಚುನಾವಣೆಯಲ್ಲಿ ಇಲ್ಲಿ ಭಾರತೀಯ ಜನತಾ ಪಾರ್ಟಿ ಪಕ್ಷದ ಸಿದ್ದು ಸವದಿ ಜಯ ಗಳಿಸಿದ್ದರು. ಕಾಂಗ್ರೆಸ್‌ನ ಉಮಾಶ್ರೀ 20889 ಮತಗಳ ಅಂತರದಿಂದ ಸೋಲನ್ನು ಅನುಭವಿಸಿದ್ದರು. ಸಿದ್ದು ಸವದಿ 87,213 ಮತಗಳನ್ನು ಪಡೆದು ಜಯ ಸಾಧಿಸಿದ್ದರು.

ಈ ಬಾರಿ ಟಿಕೆಟ್ ಯಾರಿಗೆ?
ಈ ಬಾರಿಯ ಚುನಾವಣೆಯಲ್ಲಿ ಟಿಕೆಟ್ ಆಕಾಂಕ್ಷಿಗಳ ಪಟ್ಟಿ ದೊಡ್ಡದಿದೆ. ಈ ಹಿಂದೆ ಬಿಜೆಪಿ ಬಿಟ್ಟು ಕೆಜೆಪಿ ಸೇರಿದ್ದ ಬಸವರಾಜ ಬಾಳಿಕಾಯಿ ಮತ್ತೆ ಬಿಜೆಪಿ ಸೇರಿದ್ದಾರೆ, ಅವರು ಆಕಾಂಕ್ಷಿ. ಆದರೆ, ಸಿದ್ದು ಸವದಿ ಅವರಿಗೆ ಟಿಕೆಟ್ ಖಚಿತ ಎಂಬ ಸುದ್ದಿ ಇತ್ತು. ಆದರೆ ಈಗ ಸಿದ್ದು ಸವದಿಗೂ ಟಿಕೆಟ್ ಸಿಗುವುದು ಅನುಮಾನವಿದೆ.
ಬಾಗಲಕೋಟೆಯ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಯಡಿಯೂರಪ್ಪ, 'ತೇರಾದಾಳ ಕ್ಷೇತ್ರಕ್ಕೆ ಶಾಸಕ ಸಿದ್ದು ಸವದಿಯೇ ಅಭ್ಯರ್ಥಿ ಎಂದು ಬಾಯಿತಪ್ಪಿ ಹೇಳಿದ್ದೇನೆ. ಅಭ್ಯರ್ಥಿ ಆಯ್ಕೆಯನ್ನು ಪಕ್ಷದ ಚುನಾವಣಾ ಸಮಿತಿ ಅಂತಿಮಗೊಳಿಸುತ್ತದೆ' ಎಂದಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಪಕ್ಷ ಅಧಿಕಾರಕ್ಕೆ ಬರುವುದು ನಿಶ್ಚಿತ, ಮುಂದಿನ ಮುಖ್ಯಮಂತ್ರಿ ಆಯ್ಕೆ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನಕ್ಕೆ ಎಲ್ಲರೂ ಬದ್ಧ ಎಂದಿದ್ದಾರೆ. ಹೀಗಾಗಿ ತೇರದಾಳ ಕ್ಷೇತ್ರದಿಂದ ಬಿಜೆಪಿ ಟಿಕೆ ಟ್ ಯಾರಿಗೆ ಅನ್ನೋ ಗೊಂದಲವಿದೆ.
ಜೆಡಿಎಸ್ ಪಕ್ಷದಿಂದ ಈ ಭಾಗದ ಶಿಕ್ಷಣ ಪ್ರೇಮಿ, ಸ್ಥಳೀಯರಾದ ಬಸವರಾಜ ಕೆ ಕೊಣ್ಣೂರು ಅವರಿಗೆ ಟಿಕೆಟ್ ಸಿಗುವ ಸಾಧ್ಯತೆ ಇದೆ. ಈ ಬಾರಿಯ ಚುನಾವಣೆಯಲ್ಲಿ ವಲಸಿಗರಿಗಿಂತ ಸ್ಥಳೀಯರಿಗೆ ಹೆಚ್ಚು ಆದ್ಯತೆ ನೀಡಬೇಕು ಎನ್ನುವ ಕೂಗು ಎದ್ದಿದೆ. ತಮ್ಮ ಕೈಗೆ ಸಿಗುವ ಅಭ್ಯರ್ಥಿಯನ್ನು ಗೆಲ್ಲಿಸಬೇಕೆಂಬ ಅಲೆ ಎದ್ದಿರುವುದು ಜೆಡಿಎಸ್ ಪಾಲಿಗೆ ವರವಾಗುವ ಸಾಧ್ಯತೆ ಇದೆ.

ಟಿಕೆಟ್‌ಗಾಗಿ 'ಕೈ' ಕಾದಾಟ
ಬಿಜೆಪಿಯಲ್ಲಿ ಈ ಬಾರಿ ಟಿಕೆಟ್‌ಗಾಗಿ ಕಿತ್ತಾಟ ಶುರುವಾಗಿದೆ. ಬಿಜೆಪಿಯ ನೇಕಾರ ಪ್ರಕೋಷ್ಠದ ರಾಜ್ಯ ಸಂಚಾಲಕನಾಗಿ ಕಾರ್ಯ ನಿರ್ವಹಿಸಿರುವ ಮನೋಹರ ಶಿರೋಳ ಹಾಲಿ ಶಾಸಕ ಸಿದ್ದ ಸವದಿ ಅವರಿಗೆ ಟಿಕೆಟ್ ಫೈಟ್ ನೀಡುತ್ತಿದ್ದು, ಈ ಬಾರಿ ಬಿಜೆಪಿ ಪಕ್ಷ ನೇಕಾರರಿಗೆ ಮನ್ನಣೆ ನೀಡಿ ಟಿಕೆಟ್ ನೀಡಲಿದೆ ಎಂಬ ವಿಶ್ವಾಸದಲ್ಲಿದ್ದಾರೆ. ಇನ್ನು ಇವುಗಳ ಮಧ್ಯೆ ಮೂರನೇ ವ್ಯಕ್ತಿ ಪಿಕೆಪಿಎಸ್ ಮಾಜಿ ನಿರ್ದೇಶಕ ಭೀಮಶಿ ಮುಗದುಮ್ ಸಹ ಬಿಜೆಪಿ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.
ಈ ಹಿಂದೆ ಕಾಂಗ್ರೆಸ್ ಉಮಾಶ್ರೀ ಅವರಿಗೆ ಟಿಕೆಟ್ ನೀಡಿತ್ತು. ಆದರೆ ಈ ಬಾರಿ ಮತಕ್ಷೇತ್ರದಲ್ಲಿ ಸ್ಥಳೀಯರಿಗೆ ಆದ್ಯತೆ ನೀಡಿ ಎಂಬ ಕೂಗು ಬಲವಾಗಿ ಕೇಳಿ ಬರುತ್ತಿದೆ. ಜೊತೆಗೆ ಉಮಾಶ್ರೀ ಅವರು ಬೆಂಗಳೂರಿನಲ್ಲಿ ಇರುತ್ತಾರೆ. ಸ್ಥಳೀಯವಾಗಿ ಕಾರ್ಯಕರ್ತರಿಗೆ ಸಿಗೋದಿಲ್ಲ ಎಂಬ ಆರೋಪಗಳು ಇವೆ. ಹೀಗಾಗಿ ಉಮಾಶ್ರೀ ಬಗ್ಗೆ ಕಾರ್ಯಕರ್ತರಲ್ಲಿ ಅಸಮಧಾನ ಇದ್ದು ಸ್ಥಳೀಯರಿಗೇ ಟಿಕೆಟ್ ನೀಡಬೇಕು ಎನ್ನುವ ಬೇಡಿಕೆ ಇದೆ.
ಕಾಂಗ್ರೆಸ್‌ನಲ್ಲಿ ಪ್ರಬಲ ಅಭ್ಯರ್ಥಿಯಾದ ಸಿದ್ದು ಕೊಣ್ಣೂರು ಟಿಕೆಟ್‌ಗಾಗಿ ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಈ ಬಾರಿ ಅವರಿಗೆ ಹೈಕಮಾಂಡ್ ಟಿಕೆಟ್ ನೀಡವು ಸಾಧ್ಯತೆ ಇದೆ. ಇವರೊಂದಿಗೆ ಡಾ.ಎಂ.ಎಸ್ ದಡ್ಡೇನವರ, ಡಾ.ಪದ್ಮಜೀತ್ ನಾಡಗೌಡ, ಡಾ.ಎ.ಆರ್.ಬೆಳಗಲಿ ಸೇರಿದಂತೆ ಹಲವರು ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ. ಆದರೆ ಈ ಬಾರಿ ಯಾರಿಗೆ ಟಿಕೆಟ್ ನೀಡಿದ್ರೂ ಸ್ಥಳೀಯರಿಗೆ ನೀಡಿ ಎಂಬ ಸಂದೇಶವನ್ನು ತೇರದಾಳ ಮತಕ್ಷೇತ್ರದ ನಾಯಕರು ಹೈಕಮಾಂಡ್ ಮುಂದಿಟ್ಟಿದ್ದಾರೆ.
ಒಟ್ಟಿನಲ್ಲಿ ತೇರದಾಳ ಮತಕ್ಷೇತ್ರದಲ್ಲಿ ಈ ಬಾರಿ ಟಿಕೆಟ್ ಹಂಚಿಕೆ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳಲ್ಲಿ ಮಾತ್ರ ದೊಡ್ಡ ಸವಾಲಾಗಿದೆ. ಹೀಗಾಗಿ ಹೈಕಮಾಟಂಡ್ ಯಾರಿಗೆ ಟಿಕೆಟ್ ನೀಡುತ್ತೆ ಅನ್ನೋದನ್ನ ಕಾದು ನೊಡಬೇಕಿದೆ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications