ಬಜೆಟ್; ಸಿದ್ದರಾಮಯ್ಯ ಕ್ಷೇತ್ರಕ್ಕೆ ಬಂಪರ್ ಕೊಡುಗೆ
ಬಾಗಲಕೋಟೆ, ಮಾರ್ಚ್ 08: ಹಣಕಾಸು ಸಚಿವ, ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ 2021-22ನೇ ಸಾಲಿನ ಬಜೆಟ್ ಮಂಡನೆ ಮಾಡಿದರು. ಬಜೆಟ್‌ನಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತವರು ಕ್ಷೇತ್ರ ಬಾದಾಮಿಗೆ ಹಲವಾರು ಕೊಡುಗೆ ನೀಡಿದ್ದಾರೆ.
ಸೋಮವಾರ ನಡೆದ ಬಜೆಟ್ ಕಲಾಪವನ್ನು ಕಾಂಗ್ರೆಸ್ ಸದಸ್ಯರು ಬಹಿಷ್ಕಾರ ಮಾಡಿದ್ದರು. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ತೋಳಿಗೆ ಕಪ್ಪುಪಟ್ಟಿ ಕಟ್ಟಿಕೊಂಡು ವಿಧಾನಸಭೆ ಕಲಾಪಕ್ಕೆ ಕಾಂಗ್ರೆಸ್ ಸದಸ್ಯರು ಆಗಮಿಸಿದ್ದರು.
ಯಡಿಯೂರಪ್ಪ ಬಜೆಟ್ ಭಾಷಣ ಆರಂಭಿಸುತ್ತಿದ್ದಂತೆ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಕಲಾಪವನ್ನು ಬಹಿಷ್ಕರಿಸಿದರು. ಯಡಿಯೂರಪ್ಪ ಅವರು ಬಜೆಟ್‌ನಲ್ಲಿ ಬಾದಾಮಿ ಕ್ಷೇತ್ರಕ್ಕೆ ಹಲವಾರು ಕೊಡುಗೆಗಳನ್ನು ಘೋಷಣೆ ಮಾಡಿದರು.

ಜವಳಿ ಪಾರ್ಕ್ ಸ್ಥಾಪನೆ; ಸಿದ್ದರಾಮಯ್ಯ ಅವರು ಜವಳಿ ಪಾರ್ಕ್ ಸ್ಥಾಪನೆ ಮಾಡಬೇಕು ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದರು. ಬಜೆಟ್‌ನಲ್ಲಿ ಯಡಿಯೂರಪ್ಪ ಗುಳೇದಗುಡ್ಡದಲ್ಲಿ ಜವಳಿ ಪಾರ್ಕ್ ಸ್ಥಾಪನೆಗೆ ಒಪ್ಪಗೆ ಕೊಟ್ಟಿದ್ದಾರೆ.
ಸಿದ್ದರಾಮಯ್ಯ ತವರು ಕ್ಷೇತ್ರವಾದ ಬಾದಾಮಿಯಲ್ಲಿ ಎಲೆಕ್ಟ್ರಿಕ್ ಬೈಕ್ ಮತ್ತು ಟ್ಯಾಕ್ಸಿ ಯೋಜನೆ ಆರಂಭಿಸುವುದಾಗಿ ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿದೆ. ಇದಕ್ಕಾಗಿ 25 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ.
ಅನುಗ್ರಹ ಯೋಜನೆ; ಸಿದ್ದರಾಮಯ್ಯ ಅವರ ಸರ್ಕಾರದ ಅವಧಿಯಲ್ಲಿ ಜಾರಿಗೊಳಿಸಿದ್ದ 'ಅನುಗ್ರಹ' ಯೋಜನೆಯನ್ನು ಮುಂದುವರೆಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.
ಕೆಲವು ದಿನಗಳ ಹಿಂದೆ ಸಿದ್ದರಾಮಯ್ಯ ಈ ಯೋಜನೆ ಬಗ್ಗೆ ಟ್ವೀಟ್ ಮಾಡಿದ್ದರು. "ಕುರಿ, ಮೇಕೆಗಳು ಆಕಸ್ಮಿಕವಾಗಿ ಸತ್ತರೆ 5 ಸಾವಿರ ರೂ.ಗಳ ಪರಿಹಾರ ನೀಡುವ 'ಅನುಗ್ರಹ' ಯೋಜನೆಯನ್ನು ರಾಜ್ಯ ಬಿಜೆಪಿ ಸರ್ಕಾರ ಮರು ಜಾರಿಗೊಳಿಸಿದ್ದರೆ ವಿಧಾನಸಭೆಯಲ್ಲಿ ಹೋರಾಟ ನಡೆಸಲಾಗುವುದು" ಎಂದು ಎಚ್ಚರಿಕೆ ನೀಡಿದ್ದರು.
"ಒಂದು ಕುರಿಗೆ 10 ರಿಂದ 20 ಸಾವಿರ ರೂ.ಗಳ ಬೆಲೆಯಿದೆ. ಆ ಕುರಿ ಸತ್ತರೆ ಕುರಿಗಾರರ ಬದುಕಿನ ದಾರಿಯೇ ಮುಚ್ಚಿಹೋಗುತ್ತದೆ. ಹಾಗಾಗಿ ಮುಂದೆ ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಪರಿಹಾರದ ಮೊತ್ತವನ್ನು 10 ಸಾವಿರ ರೂ.ಗಳಿಗೆ ಏರಿಕೆ ಮಾಡುತ್ತೇವೆ" ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು.
Recommended Video
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications