ಬಾಗಲಕೋಟೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಜೆಟ್; ಸಿದ್ದರಾಮಯ್ಯ ಕ್ಷೇತ್ರಕ್ಕೆ ಬಂಪರ್ ಕೊಡುಗೆ

|
Google Oneindia Kannada News

ಬಾಗಲಕೋಟೆ, ಮಾರ್ಚ್ 08: ಹಣಕಾಸು ಸಚಿವ, ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ 2021-22ನೇ ಸಾಲಿನ ಬಜೆಟ್ ಮಂಡನೆ ಮಾಡಿದರು. ಬಜೆಟ್‌ನಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತವರು ಕ್ಷೇತ್ರ ಬಾದಾಮಿಗೆ ಹಲವಾರು ಕೊಡುಗೆ ನೀಡಿದ್ದಾರೆ.

ಸೋಮವಾರ ನಡೆದ ಬಜೆಟ್ ಕಲಾಪವನ್ನು ಕಾಂಗ್ರೆಸ್ ಸದಸ್ಯರು ಬಹಿಷ್ಕಾರ ಮಾಡಿದ್ದರು. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ತೋಳಿಗೆ ಕಪ್ಪುಪಟ್ಟಿ ಕಟ್ಟಿಕೊಂಡು ವಿಧಾನಸಭೆ ಕಲಾಪಕ್ಕೆ ಕಾಂಗ್ರೆಸ್ ಸದಸ್ಯರು ಆಗಮಿಸಿದ್ದರು.

ಕರ್ನಾಟಕ ಬಜೆಟ್ 2021: ಯಾವ ಕ್ಷೇತ್ರಕ್ಕೆ ಯಾವ ಕೊಡುಗೆ? ಮುಖ್ಯಾಂಶಗಳುಕರ್ನಾಟಕ ಬಜೆಟ್ 2021: ಯಾವ ಕ್ಷೇತ್ರಕ್ಕೆ ಯಾವ ಕೊಡುಗೆ? ಮುಖ್ಯಾಂಶಗಳು

ಯಡಿಯೂರಪ್ಪ ಬಜೆಟ್ ಭಾಷಣ ಆರಂಭಿಸುತ್ತಿದ್ದಂತೆ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಕಲಾಪವನ್ನು ಬಹಿಷ್ಕರಿಸಿದರು. ಯಡಿಯೂರಪ್ಪ ಅವರು ಬಜೆಟ್‌ನಲ್ಲಿ ಬಾದಾಮಿ ಕ್ಷೇತ್ರಕ್ಕೆ ಹಲವಾರು ಕೊಡುಗೆಗಳನ್ನು ಘೋಷಣೆ ಮಾಡಿದರು.

ಬಜೆಟ್; ತವರು ಜಿಲ್ಲೆ ಶಿವಮೊಗ್ಗಕ್ಕೆ ಯಡಿಯೂರಪ್ಪ ಕೊಡುಗೆಗಳು ಬಜೆಟ್; ತವರು ಜಿಲ್ಲೆ ಶಿವಮೊಗ್ಗಕ್ಕೆ ಯಡಿಯೂರಪ್ಪ ಕೊಡುಗೆಗಳು

Karnataka Budget 2021 What For Badami Assembly seat

ಜವಳಿ ಪಾರ್ಕ್‌ ಸ್ಥಾಪನೆ; ಸಿದ್ದರಾಮಯ್ಯ ಅವರು ಜವಳಿ ಪಾರ್ಕ್ ಸ್ಥಾಪನೆ ಮಾಡಬೇಕು ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದರು. ಬಜೆಟ್‌ನಲ್ಲಿ ಯಡಿಯೂರಪ್ಪ ಗುಳೇದಗುಡ್ಡದಲ್ಲಿ ಜವಳಿ ಪಾರ್ಕ್ ಸ್ಥಾಪನೆಗೆ ಒಪ್ಪಗೆ ಕೊಟ್ಟಿದ್ದಾರೆ.

ಸಿದ್ದರಾಮಯ್ಯ ತವರು ಕ್ಷೇತ್ರವಾದ ಬಾದಾಮಿಯಲ್ಲಿ ಎಲೆಕ್ಟ್ರಿಕ್ ಬೈಕ್ ಮತ್ತು ಟ್ಯಾಕ್ಸಿ ಯೋಜನೆ ಆರಂಭಿಸುವುದಾಗಿ ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿದೆ. ಇದಕ್ಕಾಗಿ 25 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ.

ಕರ್ನಾಟಕ ಬಜೆಟ್ 2021: ಆರೋಗ್ಯ ಕ್ಷೇತ್ರಕ್ಕೆ ಯಡಿಯೂರಪ್ಪ ಘೋಷಿಸಿದ ಕೊಡುಗೆಗಳುಕರ್ನಾಟಕ ಬಜೆಟ್ 2021: ಆರೋಗ್ಯ ಕ್ಷೇತ್ರಕ್ಕೆ ಯಡಿಯೂರಪ್ಪ ಘೋಷಿಸಿದ ಕೊಡುಗೆಗಳು

Recommended Video

ರಾಜಾಹುಲಿಯ ಬಜೆಟ್ ಗೆ ಕೌಂಟ್ ಡೌನ್ ಶುರು | Oneindia Kannada

ಅನುಗ್ರಹ ಯೋಜನೆ; ಸಿದ್ದರಾಮಯ್ಯ ಅವರ ಸರ್ಕಾರದ ಅವಧಿಯಲ್ಲಿ ಜಾರಿಗೊಳಿಸಿದ್ದ 'ಅನುಗ್ರಹ' ಯೋಜನೆಯನ್ನು ಮುಂದುವರೆಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.

ಕೆಲವು ದಿನಗಳ ಹಿಂದೆ ಸಿದ್ದರಾಮಯ್ಯ ಈ ಯೋಜನೆ ಬಗ್ಗೆ ಟ್ವೀಟ್ ಮಾಡಿದ್ದರು. "ಕುರಿ, ಮೇಕೆಗಳು ಆಕಸ್ಮಿಕವಾಗಿ ಸತ್ತರೆ 5 ಸಾವಿರ ರೂ.ಗಳ ಪರಿಹಾರ ನೀಡುವ 'ಅನುಗ್ರಹ' ಯೋಜನೆಯನ್ನು ರಾಜ್ಯ ಬಿಜೆಪಿ ಸರ್ಕಾರ ಮರು ಜಾರಿಗೊಳಿಸಿದ್ದರೆ ವಿಧಾನಸಭೆಯಲ್ಲಿ ಹೋರಾಟ ನಡೆಸಲಾಗುವುದು" ಎಂದು ಎಚ್ಚರಿಕೆ ನೀಡಿದ್ದರು.

"ಒಂದು ಕುರಿಗೆ 10 ರಿಂದ 20 ಸಾವಿರ ರೂ.ಗಳ ಬೆಲೆಯಿದೆ. ಆ ಕುರಿ ಸತ್ತರೆ ಕುರಿಗಾರರ ಬದುಕಿನ ದಾರಿಯೇ ಮುಚ್ಚಿಹೋಗುತ್ತದೆ. ಹಾಗಾಗಿ ಮುಂದೆ ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಪರಿಹಾರದ ಮೊತ್ತವನ್ನು 10 ಸಾವಿರ ರೂ.ಗಳಿಗೆ ಏರಿಕೆ ಮಾಡುತ್ತೇವೆ" ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು.

English summary
Karnataka Budget 2021: Chief Minister B. S. Yediyurappa presented Karnataka budget 2021-22. What for Badami assembly seat of Bagalkot district. Opposition leader Siddaramaiah MLA of Badami.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X