ಬಾದಾಮಿ : ಸಿದ್ದರಾಮಯ್ಯ, ಶ್ರೀರಾಮುಲು ನೇರ ಹಣಾಹಣಿ

Recommended Video

      Karnataka election results 2018 : ಬಾದಾಮಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮುನ್ನಡೆ | Oneindia Kannada

      ಬಾಗಲಕೋಟೆ, ಮೇ 15 : ಬಾಗಲಕೋಟೆ ಜಿಲ್ಲೆಯ ಬಾದಾಮಿ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಅವರು ಗೆಲುವು ಸಾಧಿಸಿದ್ದಾರೆ. 67,599 ಮತಗಳನ್ನು ಅವರು ಪಡೆದಿದ್ದಾರೆ. ಬಿಜೆಪಿಯ ಬಿ.ಶ್ರೀರಾಮುಲು ಅವರು 65,903 ಮತಗಳನ್ನು ಪಡೆದಿದ್ದಾರೆ. ಜೆಡಿಎಸ್‌ನ ಹನುಮಂತ ಮಾವಿನ ಮರದ್ ಅವರು 24484 ಮತಗಳನ್ನು ಪಡೆದಿದ್ದಾರೆ.

      ಸಮಯ 10.20 : ಸಿದ್ದರಾಮಯ್ಯ 12562, ಶ್ರೀರಾಮುಲು 12393, ಹನುಂತ ಬೇವಿನ ಮರದ್ 9801

      ಸಮಯ 9.34 : ಬಾದಾಮಿಯಲ್ಲಿ ಸಿದ್ದರಾಮಯ್ಯ 4612, ಶ್ರೀರಾಮುಲು ಅವರು 3335 ಮತ್ತು ಜೆಡಿಎಸ್‌ನ ಹನುಮಂತ ಮಾವಿನ ಮರದ ಅವರು 413 ಮತಗಳನ್ನು ಪಡೆದಿದ್ದಾರೆ.

      ಸಮಯ 9.11 : ಬಾದಾಮಿ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 1575 ಮತಗಳ ಮುನ್ನಡೆ ಪಡೆದಿದ್ದಾರೆ.

      ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎರಡು ಕ್ಷೇತ್ರಗಳಲ್ಲಿ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಅವರಿಗೆ ಹಿನ್ನಡೆಯಾಗಿದೆ. ಆದರೆ, ಬಾದಾಮಿ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದಾರೆ.

      ಬಾಗಲಕೋಟೆ ಜಿಲ್ಲೆಯ ಬಾದಾಮಿಯಲ್ಲಿ ಸಿದ್ದರಾಮಯ್ಯ ಅವರಿಗೆ 383 ಮತಗಳ ಮುನ್ನಡೆ ಸಿಕ್ಕಿದೆ. ಇಲ್ಲಿ ಬಿಜೆಪಿಯ ಶ್ರೀರಾಮುಲು ಅವರು ಸಿದ್ದರಾಮಯ್ಯ ಅವರ ಎದುರಾಳಿಯಾಗಿದ್ದಾರೆ.

      Karnataka elections results 2018 : Siddaramaiah leading in Badami

      ಮೊದಲ ಸುತ್ತಿನ ಮತ ಎಣಿಕೆಗೂ ಮುನ್ನ ಸಿದ್ದರಾಮಯ್ಯ ಅವರು ಮುನ್ನಡೆ ಸಾಧಿಸಿದ್ದರು. ಆದರೆ, ಎರಡನೇ ಸುತ್ತಿನ ಮತ ಎಣಿಕೆ ಆರಂಭವಾದ ತಕ್ಷಣ ಶ್ರೀರಾಮುಲು ಅವರು ಮುನ್ನಡೆ ಸಾಧಿಸಿದ್ದಾರೆ.

      ಬಿ.ಶ್ರೀರಾಮುಲು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸ್ಪರ್ಧೆಯ ಕಾರಣ ಬಾದಾಮಿ ಕ್ಷೇತ್ರದ ಚುನಾವಣೆ ಕುತೂಹಲಕ್ಕೆ ಕಾರಣವಾಗಿದೆ. ಸಿದ್ದರಾಮಯ್ಯ ಅವರಿಗೆ ಚಾಮುಂಡೇಶ್ವರಿಯಲ್ಲಿ ಭಾರೀ ಹಿನ್ನಡೆ ಉಂಟಾಗಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+