• search
  • Live TV
ಬಾಗಲಕೋಟೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮೋದಿ ಸರಕಾರದ ವಿರುದ್ದ ಸಿದ್ದರಾಮಯ್ಯ ಎತ್ತಿದ ಗಂಭೀರ ಪ್ರಶ್ನೆಗೆ ಉತ್ತರಬೇಕಿದೆ

|

ಬಾಗಲಕೋಟೆ, ಅ 22: "ಮಹಾರಾಷ್ಟ್ರ ಚುನಾವಣೆ ಮುಗಿದಿದೆ, ಸಾವರ್ಕರ್ ವಿಚಾರ ಬಿಟ್ಟು, ನೆರೆಪರಿಹಾರದ ಬಗ್ಗೆ ಚರ್ಚಿಸೋಣ" ಎಂದಿದ್ದ ಸಿದ್ದರಾಮಯ್ಯ,, ಮೋದಿ ಸರಕಾರದ ವಿರುದ್ದ ಮತ್ತದೇ ಪ್ರಶ್ನೆಯನ್ನು ಎತ್ತಿದ್ದಾರೆ.

ತಾವು ಪ್ರತಿನಿಧಿಸುವ ಬಾದಾಮಿ ಕ್ಷೇತ್ರದಲ್ಲಿ ವಿವಿಧ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಿ, ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಕೈಗೊಂಡಿರುವ ಪರಿಹಾರ ಕಾರ್ಯಗಳ ಪ್ರಗತಿ ಪರಿಶೀಲಿಸಿದ ನಂತರ, ಇವಿಎಂ ವಿಚಾರವನ್ನು ಸಿದ್ದರಾಮಯ್ಯ ಎತ್ತಿದ್ದಾರೆ.

ಹೇಳಿಕೆಯಿಂದ ಹಿಂದೆ ಸರಿಯೋ ಮಾತೇ ಇಲ್ಲ ಎಂದ ಸಿದ್ದರಾಮಯ್ಯ

"ಅಭಿವೃದ್ದಿ ಮಾಡದಿದ್ದರೂ ಮತದಾರ ಯಾಕೆ ಬಿಜೆಪಿಗೆ ಮತ ಹಾಕುತ್ತಿದ್ದಾನೆ" ಎನ್ನುವ ಪ್ರಶ್ನೆಯನ್ನು ಸಿದ್ದರಾಮಯ್ಯ ಎತ್ತಿದ್ದಾರೆ. ಈ ಬಗ್ಗೆ, ಸಿದ್ದರಾಮಯ್ಯ ಮಾಡಿರುವ ಸಾಲುಸಾಲು ಟ್ವೀಟ್ ಹೀಗಿದೆ.

"ಮಹಾರಾಷ್ಟ್ರ ಚುನಾವಣಾ ಪ್ರಚಾರಕ್ಕೆಂದು ಹೋದಾಗ ಅಲ್ಲಿನ ಸರ್ಕಾರ ಐದು ವರ್ಷ ಏನು ಅಭಿವೃದ್ಧಿ ಮಾಡಿದೆ ಎಂಬ ಬಗ್ಗೆ ಅನುಮಾನ ಮೂಡಿತು. ಹೈದರಾಬಾದ್- ಪೂನಾ ಹೆದ್ದಾರಿಯಲ್ಲಿ ವಾಹನ ಸಂಚರಿಸಲು ಪರದಾಡಬೇಕಿದೆ. ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರ ತವರು ರಾಜ್ಯದ ಸ್ಥಿತಿಯೇ ಹೀಗೆ. ಆದರೂ ಜನ ಬಿಜೆಪಿಗೆ ಮತ ನೀಡುತ್ತಾರೆಯೇ?".

"ಬಿಜೆಪಿಯವರು ಇವಿಎಂ ದುರುಪಯೋಗ ಮಾಡಿಕೊಂಡು ಚುನಾವಣೆಯಲ್ಲಿ ಗೆಲ್ಲುತ್ತಿರುವ ಸಾಧ್ಯತೆಗಳೂ ಇರಬಹುದು. ಅಭಿವೃದ್ಧಿ ಕಾರ್ಯಗಳನ್ನೇ ಮಾಡದಿದ್ದರೂ ಹೇಗೆ ಚುನಾವಣೆ ಗೆಲ್ಲಲು ಸಾಧ್ಯ?" "ಅಧಿಕಾರ ಹಿಡಿಯಲು ಚುನಾವಣಾ ಆಯೋಗ ಸೇರಿದಂತೆ ಎಲ್ಲ ಸ್ವಾಯತ್ತ ಸಂಸ್ಥೆಗಳನ್ನು ಬಿಜೆಪಿ ದುರ್ಬಳಕೆ ಮಾಡಿಕೊಳ್ಳತ್ತಿದೆ. ಚುನಾವಣೆ ಘೋಷಣೆಯಾದ ದಿನದಿಂದ ನೀತಿಸಂಹಿತೆ ಜಾರಿಯಾಗಬೇಕು".

ಸಿದ್ದರಾಮಯ್ಯಗೆ ಔದಾರ್ಯತೆಯ ಪರಮಾವಧಿ ತೋರಿದ ಸಿಎಂ ಬಿಎಸ್ವೈ

"ಆದರೆ ರಾಜ್ಯದಲ್ಲಿ 70 ದಿನ ಮುಂಚಿತವಾಗಿ ಚುನಾವಣೆಯ ದಿನವನ್ನು ಘೋಷಿಸಿದರೂ ಇನ್ನೂ ನೀತಿಸಂಹಿತೆ ಜಾರಿಯಾಗಿಲ್ಲ. ಇವೆಲ್ಲ ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೇಲೆ ಪ್ರಭಾವ ಬೀರುತ್ತಿರುವುದಕ್ಕೆ ಸ್ಪಷ್ಟ ನಿದರ್ಶನಗಳು".

"ಇವಿಎಂ ಯಂತ್ರಗಳು ನಂಬಿಕಾರ್ಹವಲ್ಲ ಎಂಬ ಕಾರಣದಿಂದ ಅಮೆರಿಕಾ, ಜಪಾನ್, ಜರ್ಮನಿಯಂತಹ ಮುಂದುವರೆದ ರಾಷ್ಟ್ರಗಳೇ ಸಾಂಪ್ರದಾಯಿಕ ಮತದಾನದ ಶೈಲಿಯಾದ ಮತಚೀಟಿ ಬಳಕೆಯನ್ನು ಮರು ಅಳವಡಿಕೆ ಮಾಡಿಕೊಂಡಿರುವಾಗ ಭಾರತ ಏಕೆ ಮಾಡಿಕೊಳ್ಳಬಾರದು?

"ಇಷ್ಟೊಂದು ಜನ ಇವಿಎಂ ವಿಶ್ವಾಸಾರ್ಹತೆ ಬಗ್ಗೆ ಪ್ರಶ್ನಿಸಿದರೂ ಅದರ ಮೇಲೆ ಬಿಜೆಪಿಗರ ಅತಿಯಾದ ಪ್ರೀತಿಗೆ ಕಾರಣವೇನು?" ಎಂದು ಸಿದ್ದರಾಮಯ್ಯ, ಇವಿಎಂ, ಚುನಾವಣಾ ಆಯೋಗ ಮತ್ತು ಮೋದಿ ಸರಕಾರದ ಮೇಲೆ ಸಂಶಯ ವ್ಯಕ್ತ ಪಡಿಸಿದ್ದಾರೆ.

English summary
Karnataka Opposition Leader Siddaramaiah Raised Convern Over Election Through EVM.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X