ಕೆಎಸ್‌ಆರ್‌ಟಿಸಿ ಬಸ್‌ ಹತ್ತುವ ವೇಳೆ ನೂಕು ನುಗ್ಗಲು: ನಿರ್ವಾಹಕ ಸಾವು

ಬಾಗಲಕೋಟೆ, ಜನವರಿ 19: ಸಾರಿಗೆ ಬಸ್‌ ಹತ್ತುವ ವೇಳೆ ಸಂಭವಿಸಿದ ನೂಕು ನುಗ್ಗಲಿನಲ್ಲಿ ಆಯತಪ್ಪಿ ಬಿದ್ದು ಬಸ್ ಚಕ್ರದಡಿ ಸಿಲುಕಿ ಚಾಲಕ ಕಂ ನಿರ್ವಾಹಕ ಸಾವನ್ನಪ್ಪಿದ ಘಟನೆ ಬಾಗಲಕೋಟೆಯ ‌ನವನಗರದ ಬಸ್ ನಿಲ್ದಾಣದಲ್ಲಿ ನಡೆದಿದೆ. ಗದ್ಯಪ್ಪ ಗಡ್ಡಿ (50) ಮೃತ ವ್ಯಕ್ತಿ ಚಾಲಕ ಎಂದು ಗುರುತಿಸಲಾಗಿದೆ.

ಮೃತ ಗದ್ಯಪ್ಪ ಗಡ್ಡಿ ಬಾಗಲಕೋಟೆ ‌ಜಿಲ್ಲೆ ಹುನಗುಂದ ತಾಲೂಕಿನ ಕೌಜಗನೂರು ಗ್ರಾಮದ ನಿವಾಸಿಯಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ಕೆಎಸ್‌ಆರ್‌ಟಿಸಿ ಡಿಪೋದಲ್ಲಿ ಕೆಲಸ ಮಾಡುತ್ತಿದ್ದರು. ಇಂದು ಮುಂಜಾನೆ (ಜನವರಿ 19) ಬಾಗಲಕೋಟೆಯಿಂದ ಇಳಕಲ್ ಕಡೆ ಹೊರಟಿದ್ದ ಕೆಎಸ್‌ಆರ್‌ಟಿಸಿ ಬಸ್‌ ಹತ್ತುವ ಸಂದರ್ಭದಲ್ಲಿ ನೂಕುನುಗ್ಗಲು ಉಂಟಾಗಿದೆ.

KSRTC Bus Conductor Died In Bagalkot

ಈ ವೇಳೆ ಜನ ನೂಕು ನುಗ್ಗಲಿಂದ ಗದ್ಯಪ್ಪ ಗಡ್ಡಿ ಆಯತಪ್ಪಿ ಚಕ್ರದಡಿ ಸಿಲುಕಿ ಸಿಲುಕಿ ಸಾವನ್ನಪ್ಪಿದ್ದಾರೆ. ಬಾಗಲಕೋಟೆ ಸಂಚಾರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಮುಂದುವರಿಸಿದ್ದಾರೆ.

ನಿರ್ಮಾಣ ಹಂತದ ಶಾಲಾ ಕಟ್ಟಡ ಕುಸಿತ: ಇಬ್ಬರು ಸಾವು

ಬೆಂಗಳೂರು: ನಿರ್ಮಾಣ ಹಂತದ ಶಾಲಾ ಕಟ್ಟಡ ಕುಸಿದು ಬಿದ್ದು ಇಬ್ಬರು ಮೃತಪಟ್ಟಿರುವ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಬ್ಯಾಡರಹಳ್ಳಿಯಲ್ಲಿ ಸಂಭವಿಸಿದೆ. ಮೃತರನ್ನು ಜಾರ್ಖಂಡ್​​ ಮೂಲದ ಮಿನರ್​ ಬಿಸ್ವಾಸ್​​ ಹಾಗೂ ಶಾಹೀದ್​ ಎಂದು ಗುರುತಿಸಲಾಗಿದೆ.

ಘಟನೆಯಲ್ಲಿ 20 ಜನ ಗಾಯಗೊಂಡಿದ್ದು, ಗಾಯಾಳುಗಳನ್ನು ಆನೇಕಲ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳ ಪೈಕಿ ಆರು ಮಂದಿಯ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಬ್ಯಾಡರಹಳ್ಳಿಯಲ್ಲಿ ಎರಡನೇ ಅಂತಸ್ತಿನ ನಿರ್ಮಾಣದ ವೇಳೆ ಕಟ್ಟಡ ಕುಸಿದಿದ್ದು, ಇನ್ನೂ ಹಲವು ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಆನೇಕಲ್ ಪೊಲೀಸರು ಹಾಗೂ ಅಗ್ನಿಶಾಮಕದಳ ಸಿಬ್ಬಂದಿ ದೌಡಾಯಿಸಿದ್ದು ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+