ಬಾಗಲಕೋಟೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಾದಾಮಿಯಲ್ಲಿ ಸಿದ್ದರಾಮಯ್ಯ ವಿರುದ್ಧ ಜೆಡಿಎಸ್ ನಿಂದ ಹನುಮಂತಪ್ಪ!

|
Google Oneindia Kannada News

Recommended Video

ಸಿದ್ದರಾಮಯ್ಯ ಎದುರು ಬಾದಾಮಿ ಕ್ಷೇತ್ರದಲ್ಲಿ ಎಚ್ ಡಿ ಕುಮಾರಸ್ವಾಮಿ ಕಡೆಯ ಅಭ್ಯರ್ಥಿ | Oneindia Kannada

ಬಾಗಲಕೋಟೆ, ಏಪ್ರಿಲ್ 20: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪರ್ಧಿಸಲಿರುವ ಬಾದಾಮಿ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ನಿಂದ ಹನುಮಂತಪ್ಪ ಮಾವಿನ ಮರದ್ ಶನಿವಾರ ನಾಮಪತ್ರ ಸಲ್ಲಿಸಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಏಪ್ರಿಲ್ 23ರಂದು ನಾಮಪತ್ರ ಸಲ್ಲಿಸಲಿದ್ದು ಈ ಕ್ಷೇತ್ರ ಭಾರಿ ಕುತೂಹಲ ಕೆರಳಿಸಿದೆ.

ಕುಡಿಯೋಕೆ ನೀರು ಕೊಡದ ಕಾಂಗ್ರೆಸ್ಸಿಗೆ ಧಿಕ್ಕಾರ: ಎಚ್ಡಿಕೆಕುಡಿಯೋಕೆ ನೀರು ಕೊಡದ ಕಾಂಗ್ರೆಸ್ಸಿಗೆ ಧಿಕ್ಕಾರ: ಎಚ್ಡಿಕೆ

ಜೆಡಿಎಸ್ ಅಭ್ಯರ್ಥಿ ಹನುಮಂತಪ್ಪ ಸ್ಪರ್ಧಿಸಲಿರುವ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ ವೇಳೆ ಉಪಸ್ಥಿತರಿರಲಿದ್ದಾರೆ.ಶನಿವಾರ ಬೆಳಗ್ಗೆ ಹೆಲಿಕಾಪ್ಟರ್ ಮೂಲಕ ತೆರಳಲಿದ್ದಾರೆ. ಈಗಾಗಲೇ ಬಿಜೆಪಿಯಿಂದ ಬಿಜೆಪಿ ತನ್ನ ಅಭ್ಯರ್ಥಿ ಘೋಷಿಸಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಹಲವು ಬಾರಿ ಹಿಂದೇಟು ಹಾಕಿ ಅಂತಿಮವಾಗಿ ಅಲ್ಲಿಂದಲೇ ಸ್ಪರ್ಧಿಸಲು ಮುಂದಾಗಿದ್ದಾರೆ.

Kumaraswamy will take part in JDS candidate nomination tomorrow

ಜೆಡಿಎಸ್ ಈಗಾಗಲೇ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜಿ.ಟಿ.ದೇವೇಗೌಡ ಅವರನ್ನು ಕಣಕ್ಕಿಳಿಸಿ ಪ್ರಬಲ ಪೈಪೋಟಿ ಒಡ್ಡಿದೆ. ಇದೀಗ ಬದಾಮಿ ಕ್ಷೇತ್ರದಲ್ಲೂ ಪಕ್ಷದ ಅಭ್ಯರ್ಥಿಯ ನಾಮಪತ್ರ ಸಲ್ಲಿಕೆ ವೇಳೆ ಕುಮಾರಸ್ವಾಮಿ ಸ್ವತಃ ಹಾಜರಿರಲು ಮುಂದಾಗಿದ್ದಾರೆ.

ಕರ್ನಾಟಕ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಈಗಾಗಲೇ ಆರಂಭವಾಗಿದ್ದು, ಏಪ್ರಿಲ್ 23 ರವರೆಗೆ ಅವಕಾಶವಿರಲಿದೆ. ವಿಧಾನಸಭಾ ಚುನಾವಣೆ ಮೇ 12ರಂದು ನಡೆಯಲಿದ್ದು ಮೇ 15ಕ್ಕೆ ಫಲಿತಾಂಶ ಹೊರಬೀಳಲಿದೆ.

English summary
JDS state president HD Kumaraswamy will take part in nomination of the party candidate Hanumantappa Mavinmarad on April 20 in Badami.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X