ಜನಮೆಚ್ಚಿದ ಜಮಖಂಡಿ ಶಾಸಕ ಸಿದ್ದು ನ್ಯಾಮಗೌಡರಿಗೆ ಭಾವುಕ ಶ್ರದ್ಧಾಂಜಲಿ
Recommended Video

ಜಮಖಂಡಿ, ಮೇ 28: ಬಾಗಲಕೋಟೆ ಜಿಲ್ಲೆಯ ಜಮಖಂಡಿ ಕ್ಷೇತ್ರದ ಜನಾನುರಾಗಿ ಕಾಂಗ್ರೆಸ್ ಶಾಸಕ ಮತ್ತು ಈ ಭಾಗದ ರೈತರಿಂದ 'ಬ್ಯಾರೇಜ್ ಹೀರೋ' ಎಂದೇ ಕರೆಯಲ್ಪಡುವ ಸಿದ್ದು ನ್ಯಾಮಗೌಡ ಇನ್ನಿಲ್ಲ ಎಂಬ ಸುದ್ದಿಯನ್ನು ಇಲ್ಲಿನ ಜನರಿಗೆ ಜೀರ್ಣಿಸಿಕೊಳ್ಳುವುದು ಕೊಂಚ ಕಷ್ಟವೇ.
ಜಿಲ್ಲೆಯ ಚಿಕ್ಕ ಪಡಸಲಗಿ ಗ್ರಾಮದ ಬಳಿ ಬ್ಯಾರೇಜ್ ನಿರ್ಮಾಣ ಮಾಡಿರುವುದು ಇವರಿಗೆ ಈ ಹೆಸರನ್ನು ತಂದುಕೊಟ್ಟಿತ್ತು.
ಜನಮೆಚ್ಚಿದ ಶಾಸಕರಾಗಿ ತಮ್ಮ ಕ್ಷೇತ್ರದಲ್ಲಿ ಜಯಸಾಧಿಸಿದ್ದ ಸಿದ್ದು ನ್ಯಾಮಗೌಡ ಅವರು ದೆಹಲಿಯಿಂದ ಗೋವಾಕ್ಕೆ ಬಂದು ಅಲ್ಲಿಂದ ಕಾರಿನಲ್ಲಿ ತಮ್ಮ ಹುಟ್ಟೂರಿಗೆ ಮರಳುತ್ತಿದ್ದ ಸಂದರ್ಭದಲ್ಲಿ ದುರಂತವೊಂದು ಸಂಭವಿಸಿದೆ.
ಇಂದು ಬೆಳಗ್ಗಿನ ಜಾವ 4:30 ರ ಸಮಯದಲ್ಲಿ ಸಿದ್ದು ಅವರಿದ್ದ ಕಾರು ಭೀಕರ ಅಪಘಾತಕ್ಕೀಡಾದ ಕಾರಣ ಅವರು ಮೃತರಾಗಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತರಾಗಿದ್ದಾರೆ.
1991ರಲ್ಲಿ ಅವರು ಮಾಜಿ ಮುಖ್ಯಮಂತ್ರಿ ದಿ. ರಾಮಕೃಷ್ಣ ಹೆಗಡೆ ಅವರನ್ನು ಸೋಲಿಸಿ ಲೋಕಸಭೆಗೆ ಆಯ್ಕೆಯಾಗುವ ಮೂಲಕ ಗಮನ ಸೆಳೆದಿದ್ದರು. ಒಂದು ಬಾರಿ ಸಂಸದರಾಗಿದ್ದ ಅವರು, 2013 ಮತ್ತು 2018ರಲ್ಲಿ ಶಾಸಕರಾಗಿದ್ದರು.
ಈ ಬಾರಿಯ ಚುನಾವಣೆಯಲ್ಲಿ 49,245 ಮತಗಳನ್ನು ಗಳಿಸಿ ಬಿಜೆಪಿ ಅಭ್ಯರ್ಥಿ ಕುಲಕರ್ಣಿ ಶ್ರೀಕಾಂತ್ ಸುಬ್ಬರಾವ್ ಅವರನ್ನು 2795 ಮತಗಳಿಂದ ಸೋಲಿಸಿದ್ದರು.
ಸಿದ್ದು ನ್ಯಾಮಗೌಡ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಸೇರಿದಂತೆ ಹಲವು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

ಸಿದ್ದರಾಮಯ್ಯ ಶ್ರದ್ಧಾಂಜಲಿ
ನಮ್ಮ ಪಕ್ಷದ ಶಾಸಕ ಸಿದ್ದುನ್ಯಾಮಗೌಡ ಅವರ ಅಕಾಲಿಕ ಸಾವು ನನ್ನನ್ನು ಆಘಾತಕ್ಕೀಡು ಮಾಡಿದೆ. 'ಬ್ಯಾರೇಜ್ ಸಿದ್ದು' ಎಂದೇ ಜನಪ್ರಿಯರಾಗಿದ್ದ ಸಿದ್ದು ನ್ಯಾಮಗೌಡ ಅವರು ಶಾಸಕ ಸಂಸದ, ಮತ್ತು ಕೇಂದ್ರ ಸಚಿವರಾಗಿ ಜನ ಸದಾ ನೆನಪು ಮಾಡಿಕೊಳ್ಳುವಂತಹ ಕೆಲಸ ಮಾಡಿದ್ದಾರೆ. ಸ್ನೇಹಿತ ಸಿದ್ದು ನ್ಯಾಮಗೌಡರಿಗೆ ನನ್ನ ದುಃಖತಪ್ತ ಶ್ರದ್ಧಾಂಜಲಿ ಎಂದು ಸಿದ್ದರಾಮಯ್ಯ ಭಾವುಕತರಾಗಿ ಟ್ವೀಟ್ ಮಾಡಿದ್ದಾರೆ.

ಕಂಬನಿ ಮಿಡಿದ ಬಿ ಎಸ್ ಯಡಿಯೂರಪ್ಪ
"ಜಮಖಂಡಿ ಕ್ಷೇತ್ರದ ಶಾಸಕರೂ, ಮಾಜಿ ಕೇಂದ್ರ ಸಚಿವರೂ ಆಗಿದ್ದ ಶ್ರೀ ಸಿದ್ದು ನ್ಯಾಮಗೌಡ ಅವರು ರಸ್ತೆ ಅಪಘಾತದಲ್ಲಿ ವಿಧಿವಶರಾದ ಸುದ್ದಿ ಕೇಳಿ ತೀವ್ರ ಆಘಾತವಾಗಿದೆ. ಇವರ ನಿಧನಕ್ಕೆ ನನ್ನ ಅತೀವ ಸಂತಾಪಗಳನ್ನು ವ್ಯಕ್ತಪಡಿಸುತ್ತಿದ್ದೇನೆ. ದೇವರು ಅವರ ಆತ್ಮಕ್ಕೆ ಚಿರಶಾಂತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.
ಶ್ರೀಯುತರ ಕುಟುಂಬದವರಿಗೆ, ಬಂಧುವರ್ಗದವರಿಗೆ ಮತ್ತು ಅಪಾರ ಅಭಿಮಾನಿಗಳಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ.
ಸಂಸದರೂ ಆಗಿದ್ದ ಶ್ರೀ ಸಿದ್ದು ನ್ಯಾಮಗೌಡ ಅವರು ಕೇಂದ್ರದಲ್ಲಿ ಕಲ್ಲಿದ್ದಲು ಖಾತೆ ರಾಜ್ಯಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ಜಮಖಂಡಿ ಕ್ಷೇತ್ರದಿಂದ 2 ಬಾರಿ ಕಾಂಗ್ರೆಸ್ ಪಕ್ಷದ ಶಾಸಕರಾಗಿ ಆಯ್ಕೆಯಾಗಿದ್ದರು.
ಇತ್ತೀಚಿನ ಚುನಾವಣೆಯಲ್ಲಿ ಗೆಲುವು ಕಂಡಿದ್ದ ಶ್ರೀ ಸಿದ್ದು ನ್ಯಾಮಗೌಡರು, ಹೀಗೆ ಅಪಘಾತದಲ್ಲಿ ಹಠಾತ್ ಸಾವನ್ನಪ್ಪಿರುವುದು ಅತ್ಯಂತ ನೋವನ್ನುಂಟು ಮಾಡಿದೆ. ಶ್ರೀಯುತರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತಾ, ಅವರಿಗೆ ನನ್ನ ಗೌರವಪೂರ್ಣ ಶ್ರದ್ಧಾಂಜಲಿಗಳನ್ನು ಸಲ್ಲಿಸುತ್ತಿದ್ದೇನೆ." ಎಂದು ಮಾಜಿ ಮುಖ್ಯಮಮತ್ರಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ.
|
ಉಪಮುಖ್ಯಮಂತ್ರಿಗಳಿಂದ ಅಕ್ಷರ ನಮನ
ರಸ್ತೆ ಅಪಘಾತದಲ್ಲಿ ನಿಧನರಾದ ಸಿದ್ದು ಜಮಖಂಡಿ ಅವರ ಸಾವು ಅತ್ಯಂತ ನೋವು ತಂದಿದೆ. ಅವರು ಕಾಂಗ್ರೆಸ್ಸಿನ ಒಬ್ಬ ಅತ್ಯುತ್ತಮ ಕೆಲಸಗಾರ. ಅವರ ಅಗಲಿಕೆ ಒಂದು ನಿರ್ವಾತ ಸೃಷ್ಟಿಸಲಿದೆ. ಅವರ ಕುಟುಂಬ ಮತ್ತು ಸ್ನೇಹ ಬಳಗಕ್ಕೆ ನನ್ನ ಸಂತಾಪಗಳು ಎಂದು ಉಪಮುಖ್ಯಮಂತ್ರಿ ಡಾ ಜಿ ಪರಮೇಶ್ವರ್ ಟ್ವೀಟ್ ಮಾಡಿದ್ದಾರೆ.
|
ದಿನೇಶ್ ಗುಂಡೂರಾವ್ ಸಂತಾಪ
ನಮ್ಮ ಹಿರಿಯ ನಾಯಕ ಮತ್ತು ಶಾಸಕರಾಗಿದ್ದ ಜಮಖಂಡಿಯ ಸಿದ್ದು ನ್ಯಾಮಗೌಡ ಅವರ ಅಕಾಲಿಕ ಮರಣ ತೀವ್ರ ಆಘಾತ ತಂದಿದೆ. ಅವರೊಬ್ಬ ಹುಟ್ಟು ಹೋರಾಟಗಾರ, ಪ್ರಾಮಾಣಿಕ ಕೆಲಸಗಾರ. ರೈತರ ವಿಷಯಕ್ಕೆ ಸಂಬಮಧಿಸಿದಂತೆ ಅವರಿಗಿದ್ದ ಕಾಳಜಿ, ಕಾರ್ಯತತ್ಪರತೆ ಅಸಾಮಾನ್ಯ. ಅವರಿಗೆ ನನ್ನ ಸಂತಾಪಗಳು ಎಂದು ಕಾಂಗ್ರೆಸ್ ಮುಖಂಡ ದಿನೇಶ್ ಗುಂಡೂರಾವ್ ಟ್ವೀಟ್ ಮಾಡಿದ್ದಾರೆ.
|
ಅವರ ಆತ್ಮಕ್ಕೆ ಶಾಂತಿ ಸಿಗಲಿ
ಕಾಂಗ್ರೆಸ್ಸಿನ ಹಿರಿಯ ನಾಯಕ ಮತ್ತು ಶಾಸಕರಾಗಿ ಆಯ್ಕೆಯಾಗಿದ್ದ ಸಿದ್ದು ನ್ಯಾಮಗೌಡ ಅವರ ನಿಧನದಿಂದ ಬಹಳ ಆಘಾತವಾಗಿದೆ. ಅವರ ಕುಟುಂಬಕ್ಕೆ ನನ್ನ ತೀವ್ರ ಸಂತಾಪಗಳು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದಿದ್ದಾರೆ ಕಾಂಗ್ರೆಸ್ ನಾಯಕ ಕೆ ಜೆ ಜಾರ್ಜ್.
|
ಜಗದೀಶ್ ಶೆಟ್ಟರ್ ಸಂತಾಪ
ನನ್ನ ಆತ್ಮೀಯ ಗೆಳೆಯರೂ, ಹಿರಿಯ ಕಾಂಗ್ರೆಸ್ ಶಾಸಕರೂ ಆಗಿದ್ದ ಸಿದ್ದು ನ್ಯಾಮಗೌಡ ಅವರ ಅಕಾಲಿಕ ನಿಧನದಿಂದ ನನಗೆ ಸಾಕಷ್ಟು ನೋವಾಗಿದೆ. ಅವರ ಅದ್ಭುತ ಮತ್ತು ವಿನಯ ತುಂಬಿದ ಆತ್ಮ ನಮ್ಮ ಹೃದಯಗಳಲ್ಲಿ ಎಂದಿಗೂ ಭದ್ರವಾಗಿರುತ್ತದೆ. ಅವರಿಗೆ ನನ್ನ ಸಂತಾಪಗಳು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಟ್ವೀಟ್ ಮಾಡಿದ್ದಾರೆ.

ದೇಶಪಾಂಡೆ ಶ್ರದ್ಧಾಂಜಲಿ
"ನನ್ನ ಆಪ್ತ ಸ್ನೇಹಿತರಲ್ಲಿ ಒಬ್ಬರಾದ ಮಾನ್ಯ ಶ್ರೀ ಸಿದ್ದು ನ್ಯಾಮಗೌಡರವರ ಅಕಾಲಿಕ ನಿಧನ ತೀವ್ರ ದುಃಖಕರ ಹಾಗೂ ದುರದೃಷ್ಟಕರ ಸಂಗತಿ. ಶಾಸಕರಾಗಿ, ಸಂಸದರಾಗಿ, ಕೇಂದ್ರ ಸಚಿವರಾಗಿ ಭಳಷ್ಟು ಜನಪರ ಕೆಲಸಗಳನ್ನು ಮಾಡಿದ ಶ್ರೀಯುತರು ತಮ್ಮ ಉತ್ತಮ ನಡವಳಿಕೆ, ಒಳ್ಳೆಯ ಸಂಸ್ಕಾರ ಹಾಗೂ ಸರಳ ಸಜ್ಜನಿಕೆಯ ವ್ಯಕ್ತೊತ್ವದಿಂದಾಗಿ ಅಪಾರ ಅಭಿಮಾನಿ ಹಾಗೂ ಸ್ನೇಹಿತ ಬಳಗವನ್ನು ಹೊಂದಿ ಜನಪ್ರಿಯರಾಗಿದ್ದರು. ಇವರಿಗೆ ಅಧ್ಯಾತ್ಮದಲ್ಲಿಯೂ ಸಹ ವಿಶೇಷ ಒಲವಿತ್ತು. ಸಹಕಾರ ಕ್ಷೇತ್ರದಲ್ಲಿ ಸಾಕಷ್ಟು ಹೆಸರು ಮಾಡಿದ್ದ ಸಿದ್ದು ನ್ಯಾಮಗೌಡರದು ಯಾವಾಗಲೂ ರೈತಪರ ಕಾಳಜಿ. ಇವರ ನಿಧನದಿಂದಾದ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ಇವರ ಕುಟುಂಬ ವರ್ಗ ಹಾಗೂ ಅಪಾರ ಅಭಿಮಾನಿ ಹಾಗೂ ಸ್ನೇಹಿತ ಬಳಗಕ್ಕೆ ನೀಡಲಿ ಎಂದು ನಾನು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ."
-
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral












Click it and Unblock the Notifications