BREAKING: ವೀರ ಯೋಧನ ಹಠಾತ್ ನಿಧನ ತುಂಬಾಲಾರದ ನಷ್ಟ; ನಿರಾಣಿ
ಬಾಗಲಕೋಟೆ, ಸೆ. 10: ಜಮ್ಮು ಕಾಶ್ಮೀರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಹಾವು ಕಚ್ಚಿ ಸಾವನ್ನಪ್ಪಿದ ಹಲಕುರ್ಕಿ ಗ್ರಾಮದ ಯೋಧ ಚಿದಾನಂದ ಚನ್ನಬಸಪ್ಪ ಶಿರಸ್ತೇದಾರ (25) ಅವರ ನಿಧನಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರು ಕಂಬನಿ ಮಿಡಿದಿದ್ದಾರೆ.
ಬಾಗಲಕೋಟೆ ಪ್ರವಾಸದಲ್ಲಿದ್ದ ಅವರು, ವಿಷಯ ತಿಳಿಯುತ್ತಿದ್ದಂತೆ ತಮ್ಮ ಅಧಿಕೃತ ಕಾರ್ಯಗಳನ್ನು ಮುಂದೂಡಿ ಮೃತ ಯೋಧನ ಸ್ವಗ್ರಾಮ ಬೀಳಗಿ ತಾಲೂಕಿನ ಹಾಲಕುರ್ಕಿ ಗ್ರಾಮಕ್ಕೆ ತೆರಳಿದ್ದರು. ಯೋಧನ ತಂದೆ ಚನ್ನಬಸಪ್ಪ, ತಾಯ ರತ್ನಮ್ಮ ಸಹೋದರ ಬಸವರಾಜ ಅವರನ್ನು ಭೇಟಿಯಾಗಿ ಸಚಿವ ಮುರುಗೇಶ್ ನಿರಾಣಿ ಸಾಂತ್ವನ ಹೇಳಿದರು.

ದೇಶ ಸೇವೆಯಲ್ಲಿ ತೊಡಗಿಕೊಂಡಿದ್ದ ವೀರ ಯೋಧನ ಹಠಾತ್ ನಿಧನ ನಿಜಕ್ಕೂ ತುಂಬಾಲಾರದ ನಷ್ಟ ಎಂದು ನಷ್ಟ ಎಂದು ಕಂಬನಿ ಮಿಡಿದರು. ಕುಟುಂಬಕ್ಕೆ ಆಸರೆಯಾಗಿದ್ದ ಯೋಧನನ್ನು ಕಳೆದು ಕೊಂಡಿರುವುದನ್ನು ಪದಗಳಲ್ಲಿ ಹೇಳಲು ಸಾಧ್ಯವಿಲ್ಲ. ನಿಮ್ಮ ದುಃಖದಲ್ಲಿ ನಾನು ಒಬ್ಬನಾಗಿದ್ದೆನೆಂದು ಕುಟುಂಬಸ್ಥರಿಗೆ ಸಚಿವ ಮುರುಗೇಶ ನಿರಾಣಿ ಹೇಳಿದರು.

ಗ್ರಾಮಸ್ಥರ ಒತ್ತಾಸೆಯಂತೆ ಇದೇ ಗ್ರಾಮದಲ್ಲಿ ಯೋಧನ ಪುತ್ಥಳಿ ನಿರ್ಮಾಣ ಮಾಡಲು ತಾವೇ ವಿಶೇಷ ಆಸಕ್ತಿವಹಿಸಲಾಗುವುದು. ಈ ಸಂಬಂಧ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಚರ್ಚೆಸಿ ಆದಷ್ಟು ಶೀಘ್ರ ಪ್ರತಿಮೆಯನ್ನು ನಿರ್ಮಾಣ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಆಶ್ವಾಸನೆ ನೀಡಿದರು.
ಜಮ್ಮು ಕಾಶ್ಮೀರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಹಾವು ಕಚ್ಚಿ ಸಾವನ್ನಪ್ಪಿದ ಯೋಧ ಚಿದಾನಂದ ಚನ್ನಬಸಪ್ಪ ಶಿರಸ್ತೇದಾರ ಅವರ ಸ್ವಗ್ರಾಮ ಬೀಳಗಿ ತಾಲ್ಲೂಕಿನ ಹಾಲಕುರ್ಕಿ ಗ್ರಾಮದಲ್ಲಿ ನಡೆದ ಅಂತ್ಯಸಂಸ್ಕಾರದಲ್ಲಿ ಬೃಹತ್ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಭಾಗಿಯಾಗಿದ್ದರು.@NiraniMurugesh #Soldier #Funeral pic.twitter.com/fZgQGu6KSN
— oneindiakannada (@OneindiaKannada) September 10, 2021
ಯೋಧನ ಕುಟುಂಬಕ್ಕೆ ಕೇಂದ್ರದಿಂದ ಬರಬೇಕಾದ ಅಗತ್ಯ ನೆರವನ್ನು ಬಿಡುಗಡೆ ಮಾಡಿಕೊಡಿಸುವುದಾಗಿಯೂ ಹೇಳಿದರು. ಭಾರತೀಯ ಸೇನೆಯ ಮರಾಠಾ ರೆಜಿಮೆಂಟ್‌ನಲ್ಲಿ ಸೈನಿಕನಾಗಿ ಜಮ್ಮು ಕಾಶ್ಮೀರದಲ್ಲಿ ಕರ್ತವ್ಯ ನಿರ್ವಾಹಿಸುತ್ತಿದ್ದ ಚಿದಾನಂದ ಚನ್ನಬಸಪ್ಪ ಶಿರಸ್ತೇದಾರ ಅವರಿಗೆ ಹಾವು ಕಚ್ಚಿ ಸಾವನ್ನಪ್ಪಿದ್ದರು. ಸ್ವಗ್ರಾಮದಲ್ಲಿ ಸಕಲ ಸರಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರವನ್ನು ನೆರವೇರಿಸಲಾಯಿತು. ಇಡೀ ಗ್ರಾಮವೇ ಶೋಕ ಸಾಗರದಲ್ಲಿ ಮುಳುಗಿತ್ತು.
ಗಣೇಶ ಚತುರ್ಥಿ ನಿಮಿತ್ತ ಸಚಿವ ಮುರುಗೇಶ ನಿರಾಣಿ ದಂಪತಿ ವಿಶೇಷ ಪೂಜೆ:
ಶುಕ್ರವಾರ ಬೆಳಗ್ಗೆ ಬಿಳಗಿ ಬಿಜೆಪಿ ಕಾರ್ಯಾಲಯದಲ್ಲಿ ಗಣೇಶ ಚತುರ್ಥಿಯ ನಿಮಿತ್ಯವಾಗಿ ಗಣೇಶನ ಮೂರ್ತಿಯನ್ನು ಪ್ರತಿಷ್ಠಾಪಿಸಲಾಯಿತು. ಗಣೇಶನ ಪೂಜೆಯಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ್ ಆರ್ ನಿರಾಣಿ ದಂಪತಿಗಳು ವಿಶೇಷ ಪೂಜೆ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ನಾಡಿನ ಜನರು ಹಾಗೂ ತಮ್ಮ ಸ್ವಕ್ಷೇತ್ರದ ಜನತೆಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ಆರ್ ನಿರಾಣಿ ಗಣೇಶ ಚತುರ್ಥಿಯ ಶುಭ ಸಂದೇಶ ತಿಳಿಸಿದ್ದಾರೆ.
ಗೌರಿ-ಗಣೇಶ ಹಬ್ಬದ ಶುಭ ಸಂದರ್ಭದಲ್ಲಿ ಎಲ್ಲರಿಗೂ ಹಾರ್ದಿಕ ಶುಭಾಶಯಗಳು. ವಿಘ್ನ ನಿವಾರಕ ವಿನಾಯಕನು ಎಲ್ಲಾ ಅಡೆತಡೆಗಳನ್ನು ನಿವಾರಿಸಿ ಪ್ರತಿಯೊಬ್ಬರಿಗೂ ಸುಖ,ಆರೋಗ್ಯಕರ ಹಾಗೂ ನೆಮ್ಮದಿ ಜೀವನವನ್ನು ನಡೆಸಲು ಆರ್ಶೀವಾದಿಸಲಿ ಎಂದು ಪ್ರಾರ್ಥಿಸುವೆ. ಕಳೆದ ಎರಡು ವರ್ಷಗಳಲ್ಲಿ ಕೊರೊನಾ ವೈರಸ್‌ನಿಂದ ಬಹಳಷ್ಟು ಹಾನಿ ಅನುಭವಿಸಿದ್ದೇವೆ, ಜೀವಗಳನ್ನು ಕಳೆದುಕೊಂಡಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ.
Recommended Video
ಬರುವಂತಹ ವರ್ಷದಲ್ಲಿ ಗೌರಿ ಮತ್ತು ಗಣೇಶ ಈ ಸಂಕಷ್ಟದಿಂದ ಎಲ್ಲರನ್ನು ಪಾರು ಮಾಡಿ, ಎಲ್ಲರಿಗೂ ಒಳ್ಳೇಯ ಆಯುಷ್ಯ, ಆರೋಗ್ಯ, ಸಿರಿ ಸಂಪತ್ತನ್ನು ಕೊಡುವ ಮುಖಾಂತರ ಬರುವಂತಹ ಕಷ್ಟಗಳನ್ನು ದೂರ ಮಾಡಲಿ ಎಂದು ಈ ಸಮದರ್ಭದಲ್ಲಿ ಹಾರೈಸುತ್ತಿದ್ದೇನೆ. ರಾಜ್ಯದ ಆರೂವರೆ ಕೋಟಿ ಜನರು ಈ ಕೋವಿಡ್ ನಿಯಮಗಳನ್ನು ಚಾಚೂ ತಪ್ಪದೆ ಪಾಲಿಸಬೇಕು. ಜೊತೆಗೆ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಇದೇ ಸಂದರ್ಭದಲ್ಲಿ ಕೇಳಿಕೊಳ್ಳುತ್ತೇನೆ ಎಂದು ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications