• search
  • Live TV
ಬಾಗಲಕೋಟೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಾಗಲಕೋಟೆಯಲ್ಲಿ ಮಳೆ ಹಾನಿಗೊಳಗಾದವರಿಗೆ ಶೀಘ್ರವೇ ಪರಿಹಾರ; ಸಚಿವ ಸಿ.ಸಿ.ಪಾಟೀಲ್‌

By ಬಾಗಲಕೋಟೆ ಪ್ರತಿನಿಧಿ
|
Google Oneindia Kannada News

ಬಾಗಲಕೋಟೆ, ಸೆಪ್ಟೆಂಬರ್‌ 18: ಜಿಲ್ಲೆಯಲ್ಲಿ ಮಳೆ ಮತ್ತು ಪ್ರವಾಹದಿಂದ ಉಂಟಾದ ಹಾನಿಗೆ ಅರ್ಹ ಫಲಾನುಭವಿಗಳಿಗೆ ಶೀಘ್ರವಾಗಿ ಪರಿಹಾರ ಒದಗಿಸುವ ಕಾರ್ಯ ಆಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮನೆ ಹಾನಿ ಸಮೀಕ್ಷೆಗೆ ಇಂಜಿನಿಯರ್‌ಗಳ ಕೊರತೆ ಇದ್ದರೆ, ಬೇರೆ ಇಲಾಖೆಗಳ ಇಂಜಿನೀಯರ್‌ಗಳನ್ನು ನಿಯೋಜಿಸಿಕೊಳ್ಳಿ. ತಕ್ಷಣ ಪರಿಹಾರ ವಿತರಿಸುವ ಕಾರ್ಯ ಆಗಬೇಕು. ನಿರಂತರ ಮಳೆ ಮತ್ತು ಪ್ರವಾಹ ಸನೀವೇಶ ನೋಡಿಕೊಂಡು ಜನ ಸಂಬಂಧಿಕರ ಮನೆಗೆ ಹೋಗಿರಬಹುದು. ಮನೆಯಲ್ಲಿ ಯಾರು ವಾಸವಿಲ್ಲ ಅಂತ ತಿಳಿದು ಸಮೀಕ್ಷೆಯನ್ನು ಕೈಬಿಡಬಾರದು. ಬಡವರ ಮನೆಗಳೇ ಹೆಚ್ಚಿನ ಸಂಖ್ಯೆಯಲ್ಲಿ ಮಳೆಗೆ ಹಾನಿ ಆಗಿವೆ. ಅವುಗಳನ್ನೆಲ್ಲ ಗಮನದಲ್ಲಿ ಇಟ್ಟುಕೊಳ್ಳಬೇಕು ಎಂದು ಸೂಚನೆ ನೀಡಿದರು.

ಭಾರಿ ಮಳೆಯಿಂದ 322 ಕೋಟಿ ರೂಪಾಯಿ ಹಾನಿ; ಕಂಗಾಲಾದ ಬಾಗಲಕೋಟೆ ಜಿಲ್ಲೆಯ ರೈತಭಾರಿ ಮಳೆಯಿಂದ 322 ಕೋಟಿ ರೂಪಾಯಿ ಹಾನಿ; ಕಂಗಾಲಾದ ಬಾಗಲಕೋಟೆ ಜಿಲ್ಲೆಯ ರೈತ

"ಬದಾಮಿ ತಾಲೂಕಿಗೆ ಸಂಬಂಧಿಸಿದಂತೆ 2 ಕೋಟಿಗಿಂತ ಹೆಚ್ಚಿನ ಅನುದಾನ ಈಗಾಗಲೇ ಬಿಡುಗಡೆ ಆಗಿದೆ. ಎ ಮತ್ತು ಬಿ-1, ಬಿ-2 ವರ್ಗದ ಮನೆಗಳಿಗೆ ಮೊದಲನೇ ಹಂತದ ಅನುದಾನವನ್ನು ತಕ್ಷಣ ವಿತರಿಸಬೇಕು. ಸಿ ಕೆಟಗರಿಯಲ್ಲಿರುವ ಮನೆಗಳಿಗೆ ಒಂದೇ ಬಾರಿಗೆ 50 ಸಾವಿರದಂತೆ ಬಿಡುಗಡೆ ಮಾಡಬೇಕು. ಅದೇ ರೀತಿ ಇತರೆ ತಾಲೂಕುಗಳಲ್ಲಿ ಆಗಿರುವ ಮನೆ ಹಾನಿಗೆ ಪರಿಹಾರ ವಿತರಣೆ ಆಗಬೇಕು.

"ಇದರ ಜೊತೆಗೆ ಬೆಳೆ ಹಾನಿ ಸಮೀಕ್ಷೆ ಮಾಡುವುದು ಕೂಡ ಅಷ್ಟೇ ಅವಶ್ಯವಿದೆ. ಭೂಮಿಯಲ್ಲಿ ನೀರಿನ ತೇವಾಂಶ ಕಡಿಮೆ ಆದ ತಕ್ಷಣ ಕೃಷಿ ಅಧಿಕಾರಿಗಳಿಂದ ಮುಂದಿನ 10-12 ದಿನಗಳಲ್ಲಿ ಸಮೀಕ್ಷೆ ನಡೆಸಿ ಪರಿಹಾರ ಒದಗಿಸುವ ಕೆಲಸ ಆಗಬೇಕು ಎಂದರು.

ಬಾಗಲಕೋಟೆ ಜಿಲ್ಲೆಯಲ್ಲಿ ಮಳೆ ಆರ್ಭಟ; ಗಗನಕ್ಕೇರಿದ ತರಕಾರಿ ಬೆಲೆಬಾಗಲಕೋಟೆ ಜಿಲ್ಲೆಯಲ್ಲಿ ಮಳೆ ಆರ್ಭಟ; ಗಗನಕ್ಕೇರಿದ ತರಕಾರಿ ಬೆಲೆ

ಸೆ.1ರಿಂದ ಇಲ್ಲಿಯವರೆಗೂ ಹಾನಿ ಪ್ರಮಾಣ

ಸೆ.1ರಿಂದ ಇಲ್ಲಿಯವರೆಗೂ ಹಾನಿ ಪ್ರಮಾಣ

ಜಿಲ್ಲಾಧಿಕಾರಿ ಪಿ.ಸುನೀಲ್‍ ಕುಮಾರ್‌ ಸಭೆಗೆ ಮಾಹಿತಿ ನೀಡಿದ್ದು, ಪ್ರಾಥಮಿಕ ವರದಿ ಪ್ರಕಾರ ಸೆಪ್ಟೆಂಬರ್‌ 1ರಿಂದ 16 ರವರೆಗೆ ಜಿಲ್ಲೆಯಲ್ಲಿ ಎ ಕೆಟಗರಿಯ 489 ಮನೆ ಹಾಗೂ ಬಿ ಮತ್ತು ಸಿ ಕೆಟಗರಿಯ 860 ಮನೆಗಳು ಅತಿವೃಷ್ಠಿಯಿಂದ ಹಾನಿಗೊಳಗಾಗಿವೆ. 326 ಹಳ್ಳಿಗಳ 18,929 ಹೇಕ್ಟೇರ್ ಪ್ರದೇಶ ಕೃಷಿ ಮತ್ತು 3,823 ಹೆಕ್ಟೇರ್ ಪ್ರದೇಶ ತೋಟಗಾರಿಕೆ ಬೆಳೆಗಳು ನಾಶವಾಗಿವೆ. 223 ಮನೆಗಳಿಗೆ ನೀರು ನುಗ್ಗಿದ್ದು, 22 ಲಕ್ಷ ಪರಿಹಾರ ಬಿಡುಗಡೆ ಆಗಿರುತ್ತದೆ. 4 ಜೀವ ಹಾನಿ ಆಗಿದ್ದು, ಈಗಾಗಲೇ ಪರಿಹಾರ ಧನ ವಿತರಿಸಲಾಗಿದೆ ಎಂದರು. ಸಭೆಗೆ ಮುನ್ನ ಮಳೆ ಮತ್ತು ಪ್ರವಾಹದಿಂದ ಜಿಲ್ಲೆಯಲ್ಲಿ ಉಂಟಾದ ಹಾನಿ ಕುರಿತಾದ ವಿಡಿಯೋ ಚಿತ್ರವನ್ನು ಸಚಿವರು ವೀಕ್ಷಿಸಿದರು.

ಸಭೆಯಲ್ಲಿ ಶಾಸಕ ವಿರಣ್ಣ ಚರಂತಿಮಠ, ವಿಧಾನ ಪರಿಷತ್ ಸದಸ್ಯ ಪಿ.ಹೆಚ್.ಪೂಜಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಯಪ್ರಕಾಶ್‌ ಹಕ್ಕರಕಿ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಮಳೆಹಾನಿ ವೀಕ್ಷಿಸಿದ ಸಚಿವ ಸಿ.ಸಿ.ಪಾಟೀಲ್‌

ಮಳೆಹಾನಿ ವೀಕ್ಷಿಸಿದ ಸಚಿವ ಸಿ.ಸಿ.ಪಾಟೀಲ್‌

ಬಾದಾಮಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಮಳೆ ಹಾಗೂ ಪ್ರವಾಹದಿಂದ ಉಂಟಾದ ಹಾನಿ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಾದಾಮಿ ತಾಲೂಕಿನ ಅಗಸನಕೊಪ್ಪಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅಂದಾಜು 50 ಹೆಕ್ಟೇರ್ ಪ್ರದೇಶ ಹಾನಿ ಆಗಿದ್ದು, ಇದರಿಂದ ಹೆಸರು, ಸೂರ್ಯಕ್ರಾಂತಿ, ಮೆಕ್ಕೆಜೋಳ, ಈರುಳ್ಳಿ ಬೆಳೆ ಹಾಳಾಗಿರುವದನ್ನು ಪರಿಶೀಲನೆ ನಡೆಸಿದರು. ಈಗಾಗಲೇ ಹೆಸರು ಬೆಳೆದ ರೈತ ಭರಮಪ್ಪ ನಾಗನ್ನವರಿಗೆ ಪರಿಹಾರ ಹಣ ಬ್ಯಾಂಕ್ ಖಾತೆಗೆ ಜಮಾ ಆಗಿರುವ ಬಗ್ಗೆ ತಿಳಿಸಿದರು. ಉಳಿದ ಬೆಳೆ ಹಾನಿಗೆ ಶೀಘ್ರದಲ್ಲಿಯೇ ಪರಿಹಾರ ಒದಗಿಸುವ ಕಾರ್ಯ ಮಾಡಲಾಗುವುದು ಎಂದು ಸಚಿವರು ತಿಳಿಸಿದರು.

ಸಿ ವರ್ಗದ ಮನೆಗಳಿಗೆ ಶೀಘ್ರವೇ ಪರಿಹಾರ

ಸಿ ವರ್ಗದ ಮನೆಗಳಿಗೆ ಶೀಘ್ರವೇ ಪರಿಹಾರ

ಕೆರೂರಿನ ವಿಜಯಲಕ್ಷ್ಮೀ ಕೆರೂರ ರೈತರ ಸರ್ವೇ ನಂಬರ್‌ 73ರಲ್ಲಿರುವ ಜಮೀನಿಗೆ ಭೇಟಿ ನೀಡಿ, ಹಾಳಾಗಿರುವ ಮೆಣಸಿಣಕಾಯಿ ಬೆಳೆಯನ್ನು ವೀಕ್ಷಿಸಿದರು. ನಂತರ ಚೊಳಚಗುಡ್ಡ, ಹೆಬ್ಬಾಳ ಗ್ರಾಮಗಳಿಗೆ ಭೇಟಿ ನೀಡಿ ಅಲ್ಲಿ ಉಂಟಾದ ಮನೆ, ಬೆಳೆ ಹಾನಿಗಳನ್ನು ಪರಿಶೀಲಿಸಿದರು. ಸಿ ವರ್ಗದ ಮನೆಗಳಿಗೆ ಶೀಘ್ರದಲ್ಲಿಯೇ ಪರಿಹಾರ ಒದಗಿಸುವಂತೆ ತಹಶೀಲ್ದಾರರಿಗೆ ಸೂಚಿಸಿದರು. ಉಳಿದ ಕೆಟಗರಿ ಮನೆಗಳಿಗೆ ಮೊದಲ ಕಂತಿನ ಹಣ ಜಮೆಗೆ ಕ್ರಮವಹಿಸಲು ಸೂಚಿಸಿದರು.

ಪರಿಹಾರದ ಬಗ್ಗೆ ಸಿಸಿ ಪಾಟೀಲ್‌ ಹೇಳಿದ್ದೇನು?

ಪರಿಹಾರದ ಬಗ್ಗೆ ಸಿಸಿ ಪಾಟೀಲ್‌ ಹೇಳಿದ್ದೇನು?

ಜಿಲ್ಲೆಯಲ್ಲಿ ಉಂಟಾದ ಹಾನಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ 20 ಕೋಟಿ ರೂಪಾಯಿಗಳ ಅನುದಾನ ಬಿಡುಗಡೆ ಮಾಡಲಾಗಿದೆ. ಹಾನಿಗೊಳಗಾದ ಮನೆಗಳಿಗೆ ತಕ್ಷಣ ಪರಿಹಾರಕ್ಕೆ ಕ್ರಮಕೈಗೊಳ್ಳುವಂತೆ ಜಿಲ್ಲೆಯ ಎಲ್ಲಾ ತಹಶೀಲ್ದಾರರಿಗೆ ಸೂಚನೆ ನೀಡಲಾಗಿದೆ. ಜಮೀನಿನಲ್ಲಿ ನೀರು ಕಡಿಮೆಯಾದ ತಕ್ಷಣ 10-12 ದಿನಗಳಲ್ಲಿ ಸಮೀಕ್ಷೆ ಕಾರ್ಯ ಪೂರ್ಣಗೊಳಿಸಲು ಸೂಚಿಸಲಾಗಿದೆ ಎಂದರು. ಮಳೆ ಹಾಗೂ ಪ್ರವಾಹದಿಂದ ಉಂಟಾದ ಬಾದಾಮಿ ತಾಲೂಕಿನ ಮಾಹಿತಿಯನ್ನು ಪಡೆದುಕೊಂಡರು. 26 ಗ್ರಾಮಗಳು ಪ್ರವಾಹಕ್ಕೆ ತುತ್ತಾಗಿವೆ. 2 ಜಾನುವಾರುಗಳ ಜೀವ ಹಾನಿಯಾಗಿದೆ. ಪ್ರವಾಹದಿಂದ ನೀರು ನುಗ್ಗಿದ ಪರಿಣಾಮ 63 ಮನೆಗಳಲ್ಲಿರುವ ಗೃಹೋಪಯೋಗಿ ಮತ್ತು ಬಟ್ಟೆ ಬರೆ ಹಾನಿಗೆ ಒಟ್ಟು 6.30 ಲಕ್ಷ ರೂಪಾಯಿಗಳನ್ನು ಪಾವತಿಸಲಾಗಿದೆ.

ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ, ಜಿಲ್ಲಾ ಜಂಟಿ ಕೃಷಿ ನಿರ್ದೇಶಕಿ ಚೇತನಾ ಪಾಟೀಲ, ತೋಟಗಾರಿಕೆ ಉಪನಿರ್ದೇಶಕ ರಾಹುಲ್‍ಕುಮಾರ್‌ ಬಾವಿದಡ್ಡಿ, ತಹಶೀಲ್ದಾರ್‌ ಜೆ.ಬಿ.ಮಜ್ಜಗಿ, ತಾಲೂಕು ಪಂಚಾಯರ್‌ ಕಾರ್ಯನಿರ್ವಾಹಕ ಅಧಿಕಾರಿ ಮಲ್ಲಿಕಾರ್ಜುನ ಕಲಾದಗಿ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

English summary
Minister CC Patil has instructed officials to provide quick relief for rain damages caused in Bagalkot district. Know more,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X