ಬಾಗಲಕೋಟೆ; ಗುಂಡು ಹಾರಿಸಿಕೊಂಡು ನಿವೃತ್ತ ಜಡ್ಜ್ ಆತ್ಮಹತ್ಯೆ
ಬಾಗಲಕೋಟೆ, ಮೇ 20; ನಿವೃತ್ತಿ ಪಡೆದಿದ್ದ ನ್ಯಾಯಾಧೀಶರೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ನವನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಚಿತ್ತಾಪುರ ನ್ಯಾಯಾಲಯದಲ್ಲಿ ಜಡ್ಜ್ ಆಗಿದ್ದ ಮಾನಪ್ಪ ತಳವಾರ (53) ಕಡ್ಡಾಯ ನಿವೃತ್ತಿ ಹೊಂದಿದ್ದರು. ಬಾಗಲಕೋಟೆಯ ನವನಗರದ ಸೆಕ್ಟರ್ ನಂ 16ರ ಮನೆಯಲ್ಲಿ ಶುಕ್ರವಾರ ಸಂಜೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೂರು ವರ್ಷಗಳಿಂದ ಮಾನಪ್ಪ ತಳವಾರ ಕಡ್ಡಾಯ ನಿವೃತ್ತಿ ಮೇಲಿದ್ದರು. ಇವರಿಗೆ ಇಬ್ಬರು ಪತ್ನಿಯರು. ಮೊದಲ ಪತ್ನಿ ಬೆಂಗಳೂರಿನಲ್ಲಿ ಜಡ್ಜ್ ಆಗಿದ್ದಾರೆ. ಎರಡನೇ ಪತ್ನಿ ಮಾನಪ್ಪ ತಳವಾರ ಜೊತೆಯೇ ವಾಸವಾಗಿದ್ದರು.

ಮೂಲತಃ ಬಾಗಲಕೋಟೆ ತಾಲೂಕಿನ ಹಿರಿಶೆಲ್ಲಿಕೇರಿ ಗ್ರಾಮದ ಮಾನಪ್ಪ ತಳವಾರ ಸರ್ಕಾರಿ ಸೇವೆಯಲ್ಲಿರುವಾಗಲೇ ಎರಡನೇ ವಿವಾಹವಾದ ಕಾರಣ ಕಡ್ಡಾಯ ನಿವೃತ್ತಿಯನ್ನು ಪಡೆದಿದ್ದರು.
ಮಾನಪ್ಪ ತಳವಾರ ನಿವಾಸಕ್ಕೆ ನವನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಆತ್ಮಹತ್ಯೆ ತಡೆ ಸಹಾಯವಾಣಿ; ನಿಮ್ಹಾನ್ಸ್, ರೋಟರಿ ಸಂಸ್ಥೆ ಹಾಗೂ ಮೆಡಿಕೊ ಪ್ಯಾಸ್ಟೊರಾಲ್ ಅಸೋಸಿಯೇಷನ್ ನೆರವಿನಿಂದ ಬೆಂಗಳೂರಿನಲ್ಲಿ ಆತ್ಮಹತ್ಯೆ ತಡೆಗಟ್ಟಲು, ಮಾನಸಿಕ ಖಿನ್ನತೆಯಿಂದ ಬಳಲುವವರಿಗಾಗಿ SAHAI ಸಹಾಯವಾಣಿ ತೆರೆಯಲಾಗಿದೆ. ಸಹಾಯವಾಣಿ ಸಂಖ್ಯೆ 080 - 25497777











Click it and Unblock the Notifications