ಬಾಗಲಕೋಟೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

'ಪಕ್ಷಕ್ಕೆ ದ್ರೋಹ ಮಾಡಿದವರಿಗೆ ಸಚಿವ ಸ್ಥಾನಮಾನ ಕೊಡಬೇಡಿ'

By ಬಾಗಲಕೋಟೆ ಪ್ರತಿನಿಧಿ
|
Google Oneindia Kannada News

ಬಾಗಲಕೋಟೆ, ಮೇ. 22 : ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಎಸ್.ಆರ್.ಪಾಟೀಲರಿಗೆ ಜೆಡಿಎಸ್ ಮತ್ತು ಕಾಂಗ್ರೆಸ್ ನೇತೃತ್ವದ ಸಮ್ಮಿಶ್ರ ಸರ್ಕಾರದಲ್ಲಿ ಸಚಿವ ಸ್ಥಾನ ನೀಡಿದರೆ ಕಾಂಗ್ರೆಸ್ ಪಕ್ಷಕ್ಕೆ ಸಾಮೂಹಿಕ ರಾಜೀನಾಮೆ ನೀಡುವುದಾಗಿ ಹುನಗುಂದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗಂಗಾಧರ ದೊಡ್ಡಮನಿ ಹೇಳಿದರು.

ಬಾಗಲಕೋಟೆ ನವನಗರದ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಜಿಲ್ಲೆಯ ಐದು ಕ್ಷೇತ್ರದಲ್ಲಿ ಕಾಂಗ್ರೆಸ್ ಸೋಲಲು ಅವರೇ ನೇರ ಹೊಣೆ ಎಂದು ಆರೋಪಿಸಿದರು.

ಕುಮಾರಸ್ವಾಮಿಯ ಸಂಪುಟದಲ್ಲಿ 'ಜೆಡಿಎಸ್ ಭಿನ್ನಮತೀಯ'ರಿಗೆ ಸ್ಥಾನವಿಲ್ಲಕುಮಾರಸ್ವಾಮಿಯ ಸಂಪುಟದಲ್ಲಿ 'ಜೆಡಿಎಸ್ ಭಿನ್ನಮತೀಯ'ರಿಗೆ ಸ್ಥಾನವಿಲ್ಲ

ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್ ಇಂದು ಈ ಹೀನಾಯ ಸ್ಥಿತಿಗೆ ಬರಲು ಅವರೇ ಕಾರಣ. ಹೀಗಾಗಿ ಈಗಿನ ಸಮ್ಮಿಶ್ರ ಸರ್ಕಾರದಲ್ಲಿ ಅವರಿಗೆ ಯಾವುದೇ ಕಾರಣಕ್ಕೂ ಸಚಿವ ಸ್ಥಾನ ನೀಡಬಾರದು ಎಂದು ಆಗ್ರಹಿಸಿದರು.

Should not be given a ministerial post for S.R. Patil

ಒಂದು ವೇಳೆ ಅವರಿಗೆ ಸಚಿವ ಸ್ಥಾನ ನೀಡಿದರೆ ಗ್ರಾಮ, ತಾಲೂಕು, ಪುರಸಭೆ ಹಾಗೂ ಜಿಲ್ಲಾ ಪಂಚಾಯತ್ ಜನಪ್ರತಿನಿಧಿಗಳು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಜತೆಗೆ ಕೆಪಿಸಿಸಿ ಕಚೇರಿ ಮುಂದೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು.

ಹುನಗುಂದ ಮತಕ್ಷೇತ್ರದಲ್ಲಿ ಪ್ರಚಾರ ಮಾಡಲು ಸಾಕಷ್ಟು ಭಾರಿ ಪಾಟೀಲರಿಗೆ ಆಹ್ವಾನ ನೀಡಿದರೂ ಪ್ರಚಾರಕ್ಕೆ ಬರದೇ ಕುಂಟು ನೆಪ‌ ಹೇಳಿಕೊಂಡು ಪ್ರಚಾರಕ್ಕೆ ಬರಲಿಲ್ಲ.

ಪಕ್ಷಕ್ಕೆ ದ್ರೋಹ ಮಾಡಿದವರಿಗೆ ಯಾವುದೇ ಕಾರಣಕ್ಕೂ ಸಚಿವ ಸ್ಥಾನಮಾನ ನೀಡಬಾರದು. ನೀಡಿದ್ದೇ ಆದರೆ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದರು.

English summary
Karnataka Election Results 2018:Block Congress president Gangadhar doddamani said that should not be given a ministerial post for S.R. Patil. He is responsible for congress failed in five constituencies.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X