ಬಾದಾಮಿಯಲ್ಲಿ ನಾಮಪತ್ರ ಸಲ್ಲಿಸಿದ ಸಿದ್ದರಾಮಯ್ಯ, ಶ್ರೀರಾಮುಲು

Recommended Video

      ಬಾದಾಮಿ ಕ್ಷೇತ್ರದಲ್ಲಿ ಇಂದು ನಾಮಪತ್ರ ಸಲ್ಲಿಸಿದ ಸಿದ್ದರಾಮಯ್ಯ | Oneindia Kananda

      ಬಾದಾಮಿ, ಏಪ್ರಿಲ್ 24: ಬಾಗಲಕೋಟೆ ಜಿಲ್ಲೆಯ ಬಾದಾಮಿ ಮದಗಜಗಳ ಕಾದಾಟಕ್ಕೆ ಸಜ್ಜಾಗಿದೆ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಬಿಜೆಪಿಯಿಂದ ಸಂಸದ ಶ್ರೀರಾಮುಲು ಬಾದಾಮಿಯಲ್ಲಿ ನಾಮಪತ್ರ ಸಲ್ಲಿಸಿದ್ದು, ಇಬ್ಬರ ನಡುವಿನ ಹೋರಾಟಕ್ಕೆ ವೇದಿಕೆ ಸಿದ್ದವಾಗಿದೆ.

      ಬಿಜೆಪಿ ಐದನೇ ಪಟ್ಟಿಯಲ್ಲಿ ಬಾದಾಮಿ ಕ್ಷೇತ್ರದಲ್ಲಿ ಶ್ರೀರಾಮುಲು ಸ್ಪರ್ಧೆ ಬಗ್ಗೆ ಘೋಷಣೆ ಮಾಡಿರಲಿಲ್ಲ. ಹೀಗಿದ್ದೂ ಅವರು ನಾಮಪತ್ರ ಸಲ್ಲಿಸಿದ್ದಾರೆ.

      ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವ ಮತ್ತು ಕರ್ನಾಟಕ ಬಿಜೆಪಿ ಉಸ್ತುವಾರಿ ಪ್ರಕಾಶ್ ಜಾವ್ಡೇಕರ್, ಮುರಳೀಧರ್ ರಾವ್ ಜೊತೆಗೆ ಆಗಮಿಸಿದ ಶ್ರೀರಾಮುಲು ನಾಮಪತ್ರ ಸಲ್ಲಿಸಿದರು.

      In Pics: ಬಾದಾಮಿಯಲ್ಲಿ ನಾಮಪತ್ರ ಸಲ್ಲಿಸಿದ ಸಿದ್ದರಾಮಯ್ಯ,

      Siddaramaiah and Sriramulu files nomination in Badami

      ಇದಾದ ಬಳಿಕ ಬಾದಾಮಿ ಬನಶಂಕರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ನಾಮಪತ್ರ ಸಲ್ಲಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಿದರು. ಸಚಿವ ಆರ್.ಬಿ. ತಿಮ್ಮಾಪುರ, ಪರಿಷತ್ ಸದಸ್ಯ ಸಿಎಂ ಇಬ್ರಾಹಿಂ, ಕಾಂಗ್ರೆಸ್ ಕಾರ್ಯಾಧ್ಯಕ್ಷ ಎಸ್.ಆರ್.ಪಾಟೀಲ್, ಸ್ಥಳೀಯ ಶಾಸಕ ಬಿ.ಬಿ.ಚಿಮ್ಮನಕಟ್ಟಿ ಈ ಸಂದರ್ಭದಲ್ಲಿ ಹಾಜರಿದ್ದರು.

      Siddaramaiah and Sriramulu files nomination in Badami

      ನಾಮಪತ್ರ ಸಲ್ಲಿಸಿದ ನಂತರ ಮಾತನಾಡಿದ ಸಿದ್ದರಾಮಯ್ಯ, "ಉತ್ತರ ಕರ್ನಾಟಕದಿಂದ ಸ್ಪರ್ಧಿಸುವಂತೆ ಒತ್ತಡವಿತ್ತು. ಅದರಂತೆ ಬಾದಾಮಿಯಿಂ ಚುನಾವಣೆಗೆ ಸ್ಪರ್ಧಿಸುತ್ತಿದ್ದೇನೆ," ಎಂದು ಹೇಳಿದರು.

      ಬಳಿಕ ಬಾದಾಮಿ ನಗರದಲ್ಲಿ ಸಿಎಂ ಭರ್ಜರಿ ರೋಡ್ ಶೋ ನಡೆಸಿದರು. ಸಾವಿರಾರು ಜನರು ನಾಡಿನ ದೊರೆಯನ್ನು ಕಣ್ತುಂಬಿಕೊಳ್ಳಲು ರಸ್ತೆಯ ತುಂಬೆಲ್ಲಾ ನೆರೆದಿದ್ದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+