ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಸಿದ್ದರಾಮಯ್ಯ!

Recommended Video

      ಸಿದ್ದರಾಮಯ್ಯನವರಿಂದ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ | Oneindia Kannada

      ಬಾಗಲಕೋಟೆ, ಅಕ್ಟೋಬರ್ 17 : ಮಾಜಿ ಮುಖ್ಯಮಂತ್ರಿ ಮತ್ತು ಬಾದಾಮಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಸಿದ್ದರಾಮಯ್ಯ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ಇನ್ನು ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ ಎಂದು ಹೇಳಿದ್ದಾರೆ.

      ಬುಧವಾರ ಬಾಗಲಕೋಟೆ ಜಿಲ್ಲೆಯ ಬಾದಾಮಿ ವಿಧಾನಸಭೆ ಕ್ಷೇತ್ರದ ಗುಳೇದಗುಡ್ಡ ಪಟ್ಟಣದಲ್ಲಿ ಪುರಸಭೆಗೆ ನೂತನವಾಗಿ ಆಯ್ಕೆಯಾಗಿರುವ ಸದಸ್ಯರನ್ನು ಅಭಿನಂದಿಸುವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಿದ್ದರಾಮಯ್ಯ ಅವರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

      ಸಮಾರಂಭದಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು, 'ನಾನು 13 ವರ್ಷ ಚುನಾವಣೆ ಎದುರಿಸಿದ್ದೇನೆ. ಈ ಐದು ಪೂರೈಸಿದ ಮೇಲೆ ಇನ್ನು ಮುಂದೆ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ. ಆದರೆ, ರಾಜಕಾರಣ ಬಿಡುವುದಿಲ್ಲ' ಎಂದು ಘೋಷಿಸಿದರು.

      2018ರ ವಿಧಾನಸಭೆ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದರು. ಅಂತಿಮವಾಗಿ ಚುನಾವಣೆ ಸಂದರ್ಭದಲ್ಲಿ ಹೈಕಮಾಂಡ್ ನಾಯಕರ ಒತ್ತಾಯಕ್ಕೆ ಮಣಿದು ಮೈಸೂರಿನ ಚಾಮುಂಡೇಶ್ವರಿ, ಬಾದಾಮಿ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದರು. ಬಾದಾಮಿಯಲ್ಲಿ ಗೆದ್ದಿದ್ದರು.

      ಸಿದ್ದರಾಮಯ್ಯ ಹೇಳಿದ್ದೇನು?

      ಸಿದ್ದರಾಮಯ್ಯ ಹೇಳಿದ್ದೇನು?

      'ನನಗೂ ಸಹ ವಯಸ್ಸಾಗುತ್ತಿದೆ. ನನಗೆ 71 ವರ್ಷ ವಯಸ್ಸಾಗಿದೆ. ಹಾಗಾಗಿ ಈಗಿನ 5 ವರ್ಷ ಪೂರೈಸಿದ ಮೇಲೆ ಇನ್ನು ಮುಂದೆ ಚುನಾವಣೆಗೆ ನಿಲ್ಲೋದಿಲ್ಲ. ಅಭಿವೃದ್ಧಿ ಕೆಲಸ ಮಾಡಲು ಚುನಾವಣೆಗೆ ನಿಲ್ಲಬೇಕೆಂದಿಲ್ಲ. ಆದರೆ, ರಾಜಕೀಯದಿಂದ ನಾನು ದೂರವಾಗುವುದಿಲ್ಲ' ಎಂದು ಸಿದ್ದರಾಮಯ್ಯ ಹೇಳಿದರು. ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದರು.

      ಹೈಕಮಾಂಡ್ ಒತ್ತಡ

      ಹೈಕಮಾಂಡ್ ಒತ್ತಡ

      2013ರ ಚುನಾವಣೆಯಲ್ಲಿ ವರುಣಾ ಕ್ಷೇತ್ರದಿಂದ ಸ್ಪರ್ಧಿಸಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದರು. ಆದರೆ, 2018ರ ಚುನಾವಣೆಯಲ್ಲಿ ಕ್ಷೇತ್ರವನ್ನು ಪುತ್ರ ಡಾ.ಯತೀಂದ್ರ ಅವರಿಗೆ ಬಿಟ್ಟುಕೊಟ್ಟಿದ್ದರು. ತಾವು ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ ಎಂದು ಹೇಳಿದ್ದರು. ಆದರೆ, ಹೈಕಮಾಂಡ್ ನಾಯಕರು ಅವರ ಮೇಲೆ ಒತ್ತಡ ಹಾಕಿದ್ದರು.

      2 ಕ್ಷೇತ್ರದಿಂದ ಸ್ಪರ್ಧೆ

      2 ಕ್ಷೇತ್ರದಿಂದ ಸ್ಪರ್ಧೆ

      ಹೈಕಮಾಂಡ್ ಒತ್ತಡದ ಹಿನ್ನಲೆಯಲ್ಲಿ ಸಿದ್ದರಾಮಯ್ಯ ಅವರು ಮೈಸೂರಿನ ಚಾಮುಂಡೇಶ್ವರಿ ಮತ್ತು ಬಾಗಲಕೋಟೆ ಜಿಲ್ಲೆಯ ಬಾದಾಮಿ ಕ್ಷೇತ್ರದಿಂದ ಕಣಕ್ಕಿಳಿದಿದ್ದರು. ಆದರೆ, ಚಾಮುಂಡೇಶ್ವರಿ ಕ್ಷೇತ್ರದಲ್ಲಿ 85,283 ಮತಗಳನ್ನು ಪಡೆದು ಸೋಲು ಅನುಭವಿಸಿದ್ದರು. ಬಾದಾಮಿ ಕ್ಷೇತ್ರದಲ್ಲಿ 67,599 ಮತಗಳನ್ನು ಪಡೆದು ಜಯಗಳಿಸಿದ್ದರು.

      ಈಗಲೂ ಸಾಕಷ್ಟು ಪ್ರಭಾವ

      ಈಗಲೂ ಸಾಕಷ್ಟು ಪ್ರಭಾವ

      ಸಿದ್ದರಾಮಯ್ಯ ಅವರು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಚುನಾವಣೆಯಲ್ಲಿ ಸೋತರೂ ಅವರ ಪ್ರಭಾವ ಕುಗ್ಗಿಲ್ಲ. ಮೈಸೂರಿನ ನಿವಾಸಕ್ಕೆ ಹೋದರೆ ನೂರಾರು ಜನರು ಸಮಸ್ಯೆ ಹೊತ್ತು ಆಗಮಿಸುತ್ತಾರೆ. ಕರ್ನಾಟಕದಲ್ಲಿ ಕಾಂಗ್ರೆಸ್‌-ಜೆಡಿಎಸ್ ಸಮ್ಮಿಶ್ರ ಸರ್ಕಾರವಿದ್ದು, ಅವರು ಸಮನ್ವಯ ಸಮಿತಿ ಅಧ್ಯಕ್ಷರಾಗಿದ್ದಾರೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ಅಧ್ಯಕ್ಷರೂ ಅವರೇ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+