ಸಿದ್ದರಾಮಯ್ಯ ಅವರ ಬಾದಾಮಿ ಕ್ಷೇತ್ರದಲ್ಲಿ ಒಂದೇ ದಿನ 13 ಕೇಸ್
ಬೆಂಗಳೂರು, ಮೇ 06: ಕೊರೊನಾ ವೈರಸ್ ಮಹಾಮಾರಿ ಇದೀಗ ನಗರಗಳಿಂದ ಗ್ರಾಮೀಣ ಪ್ರದೇಶಗಳಿಗೆ ದಾಳಿ ಇಟ್ಟಿದೆ. ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಅವರು ಪ್ರತಿನಿಧಿಸುವ ಬಾದಾಮಿ ತಾಲೂಕಿನ ಧಾಣಕಶಿರೂರ್ ಗ್ರಾಮದಲ್ಲಿ ಒಂದೇ ದಿನ 13 ಕೊರೊನಾ ವೈರಸ್ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಇದು ಕೊರೊನಾ ವೈರಸ್ ಸಮುದಾಯದಲ್ಲಿ ಹರಡುತ್ತಿದೆಯಾ ಎಂಬ ಸಂಶಯಕ್ಕೆ ಕಾರಣವಾಗಿದೆ.
ತಮ್ಮ ಕ್ಷೇತ್ರದಲ್ಲಿ ಕೊರೊನಾ ವೈರಸ್ ಪ್ರಕರಣಗಳು ಹೆಚ್ಚಾಗುತ್ತಿದ್ದಂತೆಯೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಕ್ಷೇತ್ರದ ಶಾಸಕ ಸಿದ್ದರಾಮಯ್ಯ ಅವರು ತಾಲೂಕು ಅಧಿಕಾರಿಗಳಿಗೆ ಸೂಚಿಸಿದ್ದಾರೆ. 13 ಪಾಸಿಟಿವ್ ಪ್ರಕರಣಗಳು ವರದಿಯಾಗಿರುವ ಹಿನ್ನೆಲೆಯಲ್ಲಿ ಎಚ್ಚರ ವಹಿಸುವಂತೆ ಹಾಗೂ ಸೋಂಕು ಹರಡದಂತೆ ನೋಡಿಕೊಳ್ಳಲು ತಿಳಿಸಿದ್ದಾರೆ.

ಬಾಗಲಕೋಟೆ ಜಿಲ್ಲಾಧಿಕಾರಿಗಳು, ಬಾದಾಮಿ ತಹಸೀಲ್ದಾರ್, ತಾಲೂಕು ಪಂಚಾಯತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಜೊತೆ ಸಿದ್ದರಾಮಯ್ಯ ಅವರು ದೂರವಾಣಿ ಮೂಲಕ ಮಾತನಾಡಿ ಮಾಹಿತಿ ಪಡೆದುಕೊಂಡಿದ್ದಾರೆ. ಮಾಸ್ಕ್, ಸ್ಯಾನಿಟೈಸರ್ ಜೊತೆಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಅವರು ಕ್ಷೇತ್ರದ ಜನರಲ್ಲಿಯೂ ಮನವಿ ಮಾಡಿದ್ದಾರೆ.
-
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications