IBPS ಮೋಸ: ಕನ್ನಡಿಗರಿಗೆ ಆನ್ಯಾಯ, ಸಿದ್ದರಾಮಯ್ಯ ಕಿಡಿ
ಬಾದಾಮಿ, ಜುಲೈ 13: ''ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ಹುದ್ದೆಗಳಿಗೆ ನೇಮಕ ಮಾಡುವ ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ (ಐಬಿಪಿಎಸ್) ಕನ್ನಡಿಗರಿಗೆ ಮೋಸ ಮಾಡಿದ್ದು, ಕನ್ನಡದಲ್ಲಿ ಪರೀಕ್ಷೆ ಬರೆಯಲು ಆಸ್ಪದ ನೀಡದೆ ದ್ರೋಹ ಎಸಗಿದೆ,'' ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಕನ್ನಡದಲ್ಲಿಯೇ ವ್ಯವಹಾರ ನಡೆಸಲು ಅನುಕೂಲವಾಗಬೇಕು ಮತ್ತು ರಾಜ್ಯದ ಅಭ್ಯರ್ಥಿಗಳಿಗೆ ಅವಕಾಶ ದೊರೆಯಬೇಕೆಂಬ ಉದ್ದೇಶದಿಂದ ಬ್ಯಾಂಕ್ ಹುದ್ದೆಗಳ ನೇಮಕ ಪ್ರಕ್ರಿಯೆಯಲ್ಲಿ ಬದಲಾವಣೆ ತರುವಂತೆ ಆಗ್ರಹಿಸಿ ಹಲವು ವರ್ಷಗಳಿಂದ ಕನ್ನಡ ಪರ ಸಂಘಟನೆಗಳು ಹೋರಾಟ ನಡೆಸುತ್ತಾ ಬಂದಿವೆ.
ಸಮಸ್ಯೆ ಏನಾಗಿದೆ?: ಮುಖ್ಯವಾಗಿ ಕನ್ನಡದಲ್ಲಿ ಬರೆಯಲು ಅವಕಾಶವನ್ನೇ ನೀಡಿಲ್ಲ. ಇಂಗ್ಲಿಷ್ ಅಥವಾ ಹಿಂದಿ ಭಾಷೆಯಲ್ಲಿ ಮಾತ್ರ ಪರೀಕ್ಷೆ ಬರೆಯಬಹುದಾಗಿದೆ. ಈ ಮೂಲಕ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನೀಡಿದ್ದ ಭರವಸೆ ಈ ಸಲವೂ ಈಡೇರಿಲ್ಲ. ಇದರ ವಿರುದ್ಧ ಮತ್ತೆ ಆಕ್ರೋಶ ವ್ಯಕ್ತವಾಗಿದೆ. ಐಬಿಪಿಎಸ್ ಮೋಸ ಮತ್ತೆ ಮುಂದುವರೆದಿದೆ.

'ಐಬಿಪಿಎಸ್ ಮೋಸ' ಎಂಬ ಹೆಸರಲ್ಲಿ ಆಕ್ರೋಶ
'ಐಬಿಪಿಎಸ್ ಮೋಸ' ಎಂಬ ಆಕ್ರೋಶ ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತವಾಗಿತ್ತು. ಕನ್ನಡಪರ ಸಂಘಟನೆಗಳು ಪ್ರತಿಭಟನೆಯನ್ನೂ ನಡೆಸಿದ್ದವು. ರಾಜ್ಯದಿಂದ ಕೇಂದ್ರ ಸರ್ಕಾರವನ್ನು ಪ್ರತಿನಿಧಿಸುತ್ತಿರುವ ಸಂಸದರು ಈ ಬಗ್ಗೆ ಧ್ವನಿ ಎತ್ತಬೇಕು ಎಂಬ ಒತ್ತಡ ಹೇರಲಾಗಿತ್ತು. ರಾಜ್ಯದ ಸಂಸದರ ನಿಯೋಗವು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತ್ತು. ಆದರೆ, ಪರಿಸ್ಥಿತಿ ಬದಲಾಗಿಲ್ಲ, ಈ ಬಗ್ಗೆ ಸಿದ್ದರಾಮಯ್ಯ ದನಿ ಎತ್ತಿದ್ದಾರೆ.

ಐಬಿಪಿಎಸ್ ಪರೀಕ್ಷೆಗೆ ಆಹ್ವಾನ
ಐಬಿಪಿಎಸ್ ಇದೀಗ ಹನ್ನೊಂದು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ 3000 ಕಾರಕೂನ ಹುದ್ದೆಗಳಿಗೆ ಅರ್ಜಿ ಆಹ್ಹಾನಿಸಿದ್ದು ಇವುಗಳಲ್ಲಿ 407 ಹುದ್ದೆಗಳು ಕರ್ನಾಟಕ ರಾಜ್ಯಕ್ಕೆ ಸೇರಿದ್ದಾಗಿದೆ. ಕನ್ನಡಕ್ಕೆ ಆಗಿರುವ ಅನ್ಯಾಯದಿಂದಾಗಿ ತೀವ್ರ ನಿರುದ್ಯೋಗದ ಸಮಸ್ಯೆ ಎದುರಿಸುತ್ತಿರುವ ಕನ್ನಡಿಗ ಯುವಜನರು ಉದ್ಯೋಗದ ಅವಕಾಶದಿಂದ ವಂಚಿತರಾಗಲಿದ್ದಾರೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
|
2014ರ ನಂತರ ಬದಲಾದ ವ್ಯವಸ್ಥೆ
2014ಕ್ಕಿಂತ ಮೊದಲು IBPS ನಡೆಸುತ್ತಿದ್ದ ಪರೀಕ್ಷೆಗಳಲ್ಲಿ ರಾಜ್ಯಭಾಷೆಗಳಲ್ಲಿಯೂ ಬರೆಯುವ ಅವಕಾಶ ಇತ್ತು. 2014ರಲ್ಲಿ ಬಿಜೆಪಿ ಸರ್ಕಾರ ನಿಯಮಾವಳಿಗೆ ತಿದ್ದುಪಡಿ ಮಾಡಿ ಇಂಗ್ಲೀಷ್ ಮತ್ತು ಹಿಂದಿಯೇತರ ಭಾಷಿಕ ಯುವಜನರಿಗೆ ಅನ್ಯಾಯಮಾಡಿದೆ. ಈ ಅನ್ಯಾಯವನ್ನು ಪ್ರತಿಭಟಿಸಿ ಹಿಂದಿನ ನಮ್ಮ ಸರ್ಕಾರ ಕೇಂದ್ರಕ್ಕೆ ಪತ್ರವನ್ನೂ ಬರೆದಿತ್ತು ಎಂದು ಹೇಳಿದ್ದಾರೆ.
Recommended Video
|
ಸಂಸದರಿಂದಲೂ ಅನ್ಯಾಯ
ಕೇಂದ್ರ ಮತ್ತು ರಾಜ್ಯದಲ್ಲಿ ಒಂದೇ ಪಕ್ಷ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಸೌಲಭ್ಯಗಳ ಸುನಾಮಿ ಬರಲಿದೆ ಎಂದು ಲೋಕಸಭಾ ಚುನಾವಣೆಯ ಕಾಲದಲ್ಲಿ ಬುರುಡೆಬಿಟ್ಟ ಬಿಜೆಪಿ ಸರ್ಕಾರ. ಲೋಕಸಭೆಗೆ ಆಯ್ಕೆಯಾದ 25 ಸಂಸದರು ಹಾಗೂ ರಾಜ್ಯಸಭೆ ಸದಸ್ಯರಿಂದ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯಗಳ ಸರಮಾಲೆಯ ಬಗ್ಗೆ ಬಾಯಿಗೆ ಬೀಗ ಹಾಕಿಕೊಂಡು ಕೂತಿದ್ದಾರೆ.
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL












Click it and Unblock the Notifications