ಬಾಗಲಕೋಟೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

IBPS ಮೋಸ: ಕನ್ನಡಿಗರಿಗೆ ಆನ್ಯಾಯ, ಸಿದ್ದರಾಮಯ್ಯ ಕಿಡಿ

|
Google Oneindia Kannada News

ಬಾದಾಮಿ, ಜುಲೈ 13: ''ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ಹುದ್ದೆಗಳಿಗೆ ನೇಮಕ ಮಾಡುವ ಬ್ಯಾಂಕ್‌ ಸಿಬ್ಬಂದಿ ನೇಮಕಾತಿ ಸಂಸ್ಥೆ (ಐಬಿಪಿಎಸ್‌) ಕನ್ನಡಿಗರಿಗೆ ಮೋಸ ಮಾಡಿದ್ದು, ಕನ್ನಡದಲ್ಲಿ ಪರೀಕ್ಷೆ ಬರೆಯಲು ಆಸ್ಪದ ನೀಡದೆ ದ್ರೋಹ ಎಸಗಿದೆ,'' ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಕನ್ನಡದಲ್ಲಿಯೇ ವ್ಯವಹಾರ ನಡೆಸಲು ಅನುಕೂಲವಾಗಬೇಕು ಮತ್ತು ರಾಜ್ಯದ ಅಭ್ಯರ್ಥಿಗಳಿಗೆ ಅವಕಾಶ ದೊರೆಯಬೇಕೆಂಬ ಉದ್ದೇಶದಿಂದ ಬ್ಯಾಂಕ್‌ ಹುದ್ದೆಗಳ ನೇಮಕ ಪ್ರಕ್ರಿಯೆಯಲ್ಲಿ ಬದಲಾವಣೆ ತರುವಂತೆ ಆಗ್ರಹಿಸಿ ಹಲವು ವರ್ಷಗಳಿಂದ ಕನ್ನಡ ಪರ ಸಂಘಟನೆಗಳು ಹೋರಾಟ ನಡೆಸುತ್ತಾ ಬಂದಿವೆ.

ಮತ್ತೆ ಕನ್ನಡಿಗರಿಗೆ ಅನ್ಯಾಯ: ಕೊಟ್ಟ ಮಾತು ಮರೆತ ಕೇಂದ್ರ ಸರ್ಕಾರಮತ್ತೆ ಕನ್ನಡಿಗರಿಗೆ ಅನ್ಯಾಯ: ಕೊಟ್ಟ ಮಾತು ಮರೆತ ಕೇಂದ್ರ ಸರ್ಕಾರ

ಸಮಸ್ಯೆ ಏನಾಗಿದೆ?: ಮುಖ್ಯವಾಗಿ ಕನ್ನಡದಲ್ಲಿ ಬರೆಯಲು ಅವಕಾಶವನ್ನೇ ನೀಡಿಲ್ಲ. ಇಂಗ್ಲಿಷ್ ಅಥವಾ ಹಿಂದಿ ಭಾಷೆಯಲ್ಲಿ ಮಾತ್ರ ಪರೀಕ್ಷೆ ಬರೆಯಬಹುದಾಗಿದೆ. ಈ ಮೂಲಕ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನೀಡಿದ್ದ ಭರವಸೆ ಈ ಸಲವೂ ಈಡೇರಿಲ್ಲ. ಇದರ ವಿರುದ್ಧ ಮತ್ತೆ ಆಕ್ರೋಶ ವ್ಯಕ್ತವಾಗಿದೆ. ಐಬಿಪಿಎಸ್ ಮೋಸ ಮತ್ತೆ ಮುಂದುವರೆದಿದೆ.

'ಐಬಿಪಿಎಸ್ ಮೋಸ' ಎಂಬ ಹೆಸರಲ್ಲಿ ಆಕ್ರೋಶ

'ಐಬಿಪಿಎಸ್ ಮೋಸ' ಎಂಬ ಹೆಸರಲ್ಲಿ ಆಕ್ರೋಶ

'ಐಬಿಪಿಎಸ್ ಮೋಸ' ಎಂಬ ಆಕ್ರೋಶ ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತವಾಗಿತ್ತು. ಕನ್ನಡಪರ ಸಂಘಟನೆಗಳು ಪ್ರತಿಭಟನೆಯನ್ನೂ ನಡೆಸಿದ್ದವು. ರಾಜ್ಯದಿಂದ ಕೇಂದ್ರ ಸರ್ಕಾರವನ್ನು ಪ್ರತಿನಿಧಿಸುತ್ತಿರುವ ಸಂಸದರು ಈ ಬಗ್ಗೆ ಧ್ವನಿ ಎತ್ತಬೇಕು ಎಂಬ ಒತ್ತಡ ಹೇರಲಾಗಿತ್ತು. ರಾಜ್ಯದ ಸಂಸದರ ನಿಯೋಗವು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತ್ತು. ಆದರೆ, ಪರಿಸ್ಥಿತಿ ಬದಲಾಗಿಲ್ಲ, ಈ ಬಗ್ಗೆ ಸಿದ್ದರಾಮಯ್ಯ ದನಿ ಎತ್ತಿದ್ದಾರೆ.

ಐಬಿಪಿಎಸ್ ಪರೀಕ್ಷೆಗೆ ಆಹ್ವಾನ

ಐಬಿಪಿಎಸ್ ಪರೀಕ್ಷೆಗೆ ಆಹ್ವಾನ

ಐಬಿಪಿಎಸ್ ಇದೀಗ ಹನ್ನೊಂದು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ 3000 ಕಾರಕೂನ ಹುದ್ದೆಗಳಿಗೆ ಅರ್ಜಿ ಆಹ್ಹಾನಿಸಿದ್ದು ಇವುಗಳಲ್ಲಿ 407 ಹುದ್ದೆಗಳು ಕರ್ನಾಟಕ ರಾಜ್ಯಕ್ಕೆ ಸೇರಿದ್ದಾಗಿದೆ. ಕನ್ನಡಕ್ಕೆ ಆಗಿರುವ ಅನ್ಯಾಯದಿಂದಾಗಿ ತೀವ್ರ ನಿರುದ್ಯೋಗದ ಸಮಸ್ಯೆ ಎದುರಿಸುತ್ತಿರುವ ಕನ್ನಡಿಗ ಯುವಜನರು ಉದ್ಯೋಗದ ಅವಕಾಶದಿಂದ ವಂಚಿತರಾಗಲಿದ್ದಾರೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

2014ರ ನಂತರ ಬದಲಾದ ವ್ಯವಸ್ಥೆ

2014ಕ್ಕಿಂತ ಮೊದಲು IBPS ನಡೆಸುತ್ತಿದ್ದ ಪರೀಕ್ಷೆಗಳಲ್ಲಿ ರಾಜ್ಯಭಾಷೆಗಳಲ್ಲಿಯೂ ಬರೆಯುವ ಅವಕಾಶ ಇತ್ತು. 2014ರಲ್ಲಿ ಬಿಜೆಪಿ ಸರ್ಕಾರ ನಿಯಮಾವಳಿಗೆ ತಿದ್ದುಪಡಿ ಮಾಡಿ ಇಂಗ್ಲೀಷ್ ಮತ್ತು ಹಿಂದಿಯೇತರ ಭಾಷಿಕ ಯುವಜನರಿಗೆ ಅನ್ಯಾಯಮಾಡಿದೆ. ಈ ಅನ್ಯಾಯವನ್ನು ಪ್ರತಿಭಟಿಸಿ ಹಿಂದಿನ ನಮ್ಮ ಸರ್ಕಾರ ಕೇಂದ್ರಕ್ಕೆ ಪತ್ರವನ್ನೂ ಬರೆದಿತ್ತು ಎಂದು ಹೇಳಿದ್ದಾರೆ.

Recommended Video

BUS ನಿಂದ ಕೆಳಗೆ ನಿಂತಿದ್ದ BMTC ಕಂಡಕ್ಟರ್ ಗೆ ಡಿಕ್ಕಿ ಹೊಡೆದ ಬೈಕ್ ಸವಾರ | Oneindia Kannada

ಸಂಸದರಿಂದಲೂ ಅನ್ಯಾಯ

ಕೇಂದ್ರ ಮತ್ತು ರಾಜ್ಯದಲ್ಲಿ ಒಂದೇ ಪಕ್ಷ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಸೌಲಭ್ಯಗಳ ಸುನಾಮಿ ಬರಲಿದೆ ಎಂದು ಲೋಕಸಭಾ ಚುನಾವಣೆಯ ಕಾಲದಲ್ಲಿ ಬುರುಡೆಬಿಟ್ಟ ಬಿಜೆಪಿ ಸರ್ಕಾರ. ಲೋಕಸಭೆಗೆ ಆಯ್ಕೆಯಾದ 25 ಸಂಸದರು ಹಾಗೂ ರಾಜ್ಯಸಭೆ ಸದಸ್ಯರಿಂದ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯಗಳ ಸರಮಾಲೆಯ ಬಗ್ಗೆ ಬಾಯಿಗೆ ಬೀಗ ಹಾಕಿಕೊಂಡು ಕೂತಿದ್ದಾರೆ.

English summary
Narendra Modi is betraying Kannadigas by not allowing candidates to take IBPS exams in Kannada. BJP having anti-Kannada stand tweets Siddaramaiah.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X