ಸಿದ್ದರಾಮಯ್ಯ ಕ್ಷೇತ್ರದ ರಸ್ತೆ ಅಭಿವೃದ್ಧಿಗೆ 65 ಕೋಟಿ ಕೊಟ್ಟ ಸರ್ಕಾರ!
ಬಾದಾಮಿ, ಸೆ.27: ಸಿದ್ದರಾಮಯ್ಯ ಕ್ಷೇತ್ರ ಬಾದಾಮಿ ರಸ್ತೆ ಅಭಿವೃದ್ಧಿಗೆ ಮೊದಲನೇ ಹಂತದಲ್ಲಿ ರಾಜ್ಯ ಸರ್ಕಾರ 65 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿದೆ.
ಬಾದಾಮಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ರಸ್ತೆಗಳ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ಕೋರಿ ಸಿದ್ದರಾಮಯ್ಯ ಅವರು ಬರೆದಿದ್ದ ಪತ್ರಗಳಿಗೆ ಪ್ರತಿಯಾಗಿ ಮೊದಲ ಹಂತದಲ್ಲೇ ರಾಜ್ಯ ಸರ್ಕಾರ 65 ಕೋಟಿ ರೂಗಳ ಅನುದಾನ ಮಂಜೂರು ಮಾಡಿದೆ.
ಲೋಕೋಪಯೋಗಿ ಇಲಾಖೆಯಿಂದ ಆದೇಶ ಹೊರಬಿದ್ದಿದೆ, ಬಾದಾಮಿ ತಾಲೂಕಿನ 9 ಪ್ರವಾಸಿ ಮಂದಿರಗಳ ನವೀಕರಣ, 8 ರಾಜ್ಯ ಹೆದ್ದಾರಿ, 8 ಜಿಲ್ಲಾ ಮುಖ್ಯ ರಸ್ತೆ ಹಾಗೂ 6 ಗ್ರಾಮೀಣ ರಸ್ತೆ ಅಭಿವೃದ್ಧಿ ಕಾಮಗಾರಿ ಇದರಲ್ಲಿ ಸೇರಿದೆ.

ಇದಲ್ಲದೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ವತಿಯಿಂದಲೂ ವಿವಿಧ ಯೋಜನೆಗಳಡಿ ಅನುದಾನ ಒದಗಿಸಲಾಗಿದೆ. ಐತಿಹಾಸಿಕ ಪ್ರವಾಸಿ ತಾಣಗಳಾದ ಬಾದಾಮಿ, ಪಟ್ಟದಕಲ್ಲು ಹಾಗೂ ಐಹೊಳೆಯಲ್ಲಿ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಯೋಜನೆ ಸಿದ್ಧಪಡಿಸಲು ಮಾಜಿ ಮುಖ್ಯಮಂತ್ರಿ, ಬಾದಾಮಿ ಶಾಸಕ ಸಿದ್ದರಾಮಯ್ಯ ಅವರು ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದರು. ಅಷ್ಟೇ ಅಲ್ಲದೆ ಬಾದಾಮಿ ರಸ್ತೆಗಳ ಅಭಿವೃದ್ಧಿ ಮಾಡುವಂತೆ ಸರ್ಕಾರಕ್ಕೆ ಪತ್ರ ಬರೆದಿದ್ದರು.












Click it and Unblock the Notifications