ಇವರೆಂಥಾ ಶಿಕ್ಷಕರು? ಹಣ ಕದ್ದರೆಂದು ರಾಘಾಪುರದಲ್ಲಿ ವಿದ್ಯಾರ್ಥಿಗಳ ಮೇಲೆ ಹಲ್ಲೆ

ಬಾಗಲಕೋಟೆ, ಆಗಸ್ಟ್.08: ಬ್ಯಾಗ್ ನಲ್ಲಿದ್ದ 500 ರೂಪಾಯಿ ಕಾಣದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳನ್ನು ಶಿಕ್ಷಕ ಮತ್ತು ಶಿಕ್ಷಕಿ ಹಿಗ್ಗಾಮುಗ್ಗಾ ಥಳಿಸಿದ ಘಟನೆ ಜಿಲ್ಲೆಯ ಬಾದಾಮಿ ತಾಲೂಕಿನ ರಾಘಾಪುರ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕಿ ಅಶ್ವಿನಿ ಅಂಗಡಿ‌ ಮತ್ತು ಶಿಕ್ಷಕ ಚಂದ್ರು ದಾಸರ ಐದನೇ ತರಗತಿಯ ಹತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳ ಮೇಲೆ ಮನ ಬಂದಂತೆ ಹಲ್ಲೆ ಮಾಡಿದ್ದಾರೆ.

ಇದರಿಂದ ವಿದ್ಯಾರ್ಥಿಗಳ ಬೆನ್ನು , ತೊಡೆ, ಸೊಂಟದ ಭಾಗದಲ್ಲಿ ಬಾಸುಂಡೆಗಳು ಕಾಣಿಸಿಕೊಂಡಿವೆ. ವಿದ್ಯಾರ್ಥಿಗಳು ಹಣ ಕದ್ದಿದ್ದಾರೆ ಎಂದ ಆರೋಪಿಸಿ ಸಾಮೂಹಿಕವಾಗಿ ವಿದ್ಯಾರ್ಥಿಗಳಿಗೆ ಕೋಲಿನಿಂದ ಹಲ್ಲೆ ಮಾಡಿದ್ದಾರೆ. ಇದರಿಂದ ಸಿಟ್ಟಿಗೆದ್ದ ಪಾಲಕರು ಶಿಕ್ಷಕ ಚಂದ್ರು ದಾಸರ ಮತ್ತು ಶಿಕ್ಷಕಿ ಅಶ್ವಿನಿ ಅಂಗಡಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Students attacked by teachers in Raghapura for money is stolen

ಶನಿವಾರ ಈ ಘಟನೆ ನಡೆದಿದ್ದು, ಗ್ರಾಮದ ಹಿರಿಯರ ಸಮ್ಮುಖದಲ್ಲಿ ರಾಜಿ ಪಂಚಾಯಿತಿ ಮಾಡಿ ವಿಷಯ ಮುಂದುವರೆಸದೆ ವಿಷಯ ಮುಚ್ಚಿ ಹಾಕಲಾಗಿದೆ. ಇಬ್ಬರೂ ಶಿಕ್ಷಕ, ಶಿಕ್ಷಕಿಗೆ ಎಚ್ಚರಿಕೆ ನೀಡಿ ಪ್ರಕರಣವನ್ನು ಮುಕ್ತಾಯಗೊಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+