ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮುಖ್ಯಮಂತ್ರಿಗಳ ಭರವಸೆ ಬಳಿಕವೂ ನಿಲ್ಲದ ಕಬ್ಬು ಬೆಳೆಗಾರರ ಪ್ರತಿಭಟನೆ

|
Google Oneindia Kannada News

ಬಾಗಲಕೋಟೆ, ನವೆಂಬರ್ 18 : ಬಾಲಗಕೋಟೆ ಜಿಲ್ಲೆಯ ಕಬ್ಬು ಬೆಳೆಗಾರರ ಪ್ರತಿಭಟನೆ 2ನೇ ದಿನವೂ ಮುಂದುವರೆದಿದೆ. ಶುಕ್ರವಾರ ಮುಧೋಳ ಬಂದ್ ಮಾಡಿ ರೈತರು ಪ್ರತಿಭಟನೆ ನಡೆಸಿದ್ದರು. ತಮ್ಮ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿದ್ದರು.

ಕಬ್ಬು ಬೆಳೆಗಾರರ ಸಮಸ್ಯೆಯನ್ನು ಆಲಿಸಿ ಪರಿಹಾರ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಈಗಾಗಲೇ ಭರವಸೆ ನೀಡಿದ್ದಾರೆ. ರೈತ ಮುಖಂಡರ ಜೊತೆ ಸಭೆ ನಡೆಸಲು ಒಪ್ಪಿಗೆ ನೀಡಿದ್ದಾರೆ.

ರಾಜ್ಯ ರೈತರಿಗೆ ಮೈತ್ರಿ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿರಾಜ್ಯ ರೈತರಿಗೆ ಮೈತ್ರಿ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ

ಆದರೆ, ಶನಿವಾರ ರೈತರು ಬಾಗಲಕೋಟೆ ಮತ್ತು ಬೆಳಗಾವಿ ಜಿಲ್ಲೆಯ ವಿವಿಧ ಕಡೆ ಪ್ರತಿಭಟನೆ ನಡೆಸಿದರು. ಅಥಣಿ ತಾಲೂಕಿನ ಮುರಗುಂಡಿ ಗ್ರಾಮದ ಬಳಿ 200ಕ್ಕೂ ಹೆಚ್ಚು ಕಬ್ಬು ಸಾಗಿಸುತ್ತಿದ್ದ ಟ್ರಾಕ್ಟರ್‌ಗಳನ್ನು ತಡೆದು ನಿಲ್ಲಿಸಿದರು.

ಮುಧೋಳ ಬಂದ್‌ಗೆ ಕರೆ ಕೊಟ್ಟ ಕಬ್ಬು ಬೆಳೆಗಾರರುಮುಧೋಳ ಬಂದ್‌ಗೆ ಕರೆ ಕೊಟ್ಟ ಕಬ್ಬು ಬೆಳೆಗಾರರು

Sugarcane farmers protest

ಸಕ್ಕರೆ ಕಾರ್ಖಾನೆಗಳು ಬಾಕಿ ಪಾವತಿ ಮಾಡಲು ಹಾಗೂ 2018-19ನೇ ಸಾಲಿನ ಎಫ್ಆರ್‌ಪಿ ದರ ಪ್ರಕಟಿಸುವಂತೆ ಆಗ್ರಹಿಸಿ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ರೈತರು ಶುಕ್ರವಾರ ಮುಧೋಳ ಬಂದ್ ನಡೆಸಿದ್ದರು.

ಸಾಲಮನ್ನಾ ಘೋಷಣೆ : ಸ್ಥಿತಿ-ಗತಿಗಳ ವರದಿ ಕೊಟ್ಟ ಕರ್ನಾಟಕ ಸರ್ಕಾರಸಾಲಮನ್ನಾ ಘೋಷಣೆ : ಸ್ಥಿತಿ-ಗತಿಗಳ ವರದಿ ಕೊಟ್ಟ ಕರ್ನಾಟಕ ಸರ್ಕಾರ

ಬಾಗಲಕೋಟೆ ಜಿಲ್ಲೆ ಮುಧೋಳದಲ್ಲಿ ರೈತರು ನಡೆಸುತ್ತಿರುವ ಧರಣಿಯು ಶನಿವಾರವೂ ಮುಂದುವರೆದಿದ್ದು 14ನೇ ದಿನಕ್ಕೆ ಕಾಲಿಟ್ಟಿದೆ. ತಮ್ಮ ಬೇಡಿಕೆ ಈಡೇರಿಸುವ ತನಕ ಕಬ್ಬು ಸಾಗಿಸುವುದಿಲ್ಲ ಎಂದು ರೈತರು ಪಟ್ಟು ಹಿಡಿದಿದ್ದರು.

ಪ್ರತಿಭಟನೆಯ ನಡುವೆಯೇ ಕಬ್ಬು ಸಾಗಿಸುತ್ತಿದ್ದ ಟ್ರಾಕ್ಟರ್‌ಗಳನ್ನು ತಡೆದು ಆಕ್ರೋಶ ವ್ಯಕ್ತಪಡಿಸಿದರು. ವಾಹನಗಳ ಚಕ್ರದ ಗಾಳಿಯನ್ನು ತೆಗೆದು ಆಕ್ರೋಶ ವ್ಯಕ್ತಪಡಿಸಿದರು. ಇದರಿಂದಾಗಿ 3 ಕಿ.ಮೀ. ತನಕ ವಾಹನಗಳು ಸಾಲುಗಟ್ಟಿ ನಿಂತಿದ್ದವು.

ಮುಧೋಳ ತಾಲೂಕಿನ 4 ಸಕ್ಕರೆ ಕಾರ್ಖಾನೆಗಳ ಪೈಕಿ ಮೂರು ಕಾರ್ಖಾನೆಗಳು ಇದುವರೆಗೂ ಕಬ್ಬು ನುರಿಸುವ ಕೆಲಸವನ್ನು ಆರಂಭಿಸಿಲ್ಲ. ರೈತರ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಕೆಲಸ ಆರಂಭವಾಗಿದ್ದು, ಸ್ಥಗಿತಗೊಳಿಸುವಂತೆ ಆಡಳಿತ ಮಂಡಳಿಗೆ ರೈತರು ಮನವಿ ಮಾಡಿದ್ದಾರೆ.

English summary
After November 16, 2018 Mudhol bandh Sugarcane farmers protest continue for 2nd day. Farmers demanding for Rs 2500 thousand fixed rate for one ton sugarcane.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X