ಬಾಗಲಕೋಟೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಾಗಲಕೋಟೆ : ಪರಿಷತ್ ಚುನಾವಣೆಗೆ ಸುನೀಲ್ ಪಾಟೀಲ್ ನಾಮಪತ್ರ ಸಲ್ಲಿಕೆ

By Gururaj
|
Google Oneindia Kannada News

ಬಾಗಲಕೋಟೆ, ಆಗಸ್ಟ್ 20 : ಬಾಗಲಕೋಟೆ-ವಿಜಯಪುರ ಸ್ಥಳೀಯ ಸಂಸ್ಥೆಗಳಿಂದ ನಡೆಯುವ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸುನೀಲ್ ಪಾಟೀಲ್ ನಾಮಪತ್ರ ಸಲ್ಲಿಸಿದರು. ಸೆ.6ರಂದು ಚುನಾವಣೆ ನಡೆಯಲಿದೆ.

ಸೋಮವಾರ ಎಐಸಿಸಿ ಮಾಜಿ ಸಚಿವ ಎಂ.ಬಿ.ಪಾಟೀಲ್ ಸಹೋದರ ಸುನೀಲ್ ಪಾಟೀಲ್ ಅಭ್ಯರ್ಥಿ ಎಂದು ಘೋಷಣೆ ಮಾಡಿತು. ಮಧ್ಯಾಹ್ನ ಸುನೀಲ್ ಪಾಟೀಲ್ ಮಾಜಿ ಸಚಿವ ಎಸ್.ಆರ್.ಪಾಟೀಲ್, ಉಮಾಶ್ರೀ ಮುಂತಾದ ನಾಯಕರ ಜೊತೆ ತೆರಳಿ ನಾಮಪತ್ರವನ್ನು ಸಲ್ಲಿಕೆ ಮಾಡಿದರು.

ಯತ್ನಾಳ ರಾಜಿನಾಮೆ ನೀಡಿದ್ದ ಸ್ಥಾನಕ್ಕೆ ಜಿದ್ದಾಜಿದ್ದಿ: ಸೆ.6ಕ್ಕೆ ಮತದಾನಯತ್ನಾಳ ರಾಜಿನಾಮೆ ನೀಡಿದ್ದ ಸ್ಥಾನಕ್ಕೆ ಜಿದ್ದಾಜಿದ್ದಿ: ಸೆ.6ಕ್ಕೆ ಮತದಾನ

Sunil Patil files nomination for Legislative Council election

ಬಾಗಲಕೋಟೆ-ವಿಜಯಪುರ ಕ್ಷೇತ್ರದಿಂದ ಗೆಲುವು ಸಾಧಿಸಿದ್ದ ಬಸನಗೌಡ ಪಾಟೀಲ್ ಯತ್ನಾಳ್ 2018ರ ವಿಧಾನಸಭೆ ಚುನಾವಣೆಯಲ್ಲಿ ಜಯಗಳಿಸಿದ್ದರು. ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಸೆ.6ರಂದು ಚುನಾವಣೆ ನಡೆಯಲಿದೆ.

ವಿಧಾನ ಪರಿಷತ್ತಿನಲ್ಲಿ ತಾರಾ ಅನುರಾಧ ವಿದಾಯದ ಭಾಷಣವಿಧಾನ ಪರಿಷತ್ತಿನಲ್ಲಿ ತಾರಾ ಅನುರಾಧ ವಿದಾಯದ ಭಾಷಣ

ವಿಧಾನಪರಿಷತ್ ಟಿಕೆಟ್‌ಗಾಗಿ ಸುನೀಲ್ ಪಾಟೀಲ್, ಮಾಜಿ ಶಾಸಕ ಶರಣಪ್ಪ ಸುಣಗಾರ ಮತ್ತು ಮಲ್ಲಿಕಾರ್ಜುನ ಲೋಣಿ ಅವರ ನಡುವೆ ಪ್ರಬಲ ಪೈಪೋಟಿ ನಡೆದಿತ್ತು. ಅಂತಮವಾಗಿ ಸಹೋದರನಿಗೆ ಟಿಕೆಟ್ ಕೊಡಿಸಲು ಎಂ.ಬಿ.ಪಾಟೀಲ್ ಯಶಸ್ವಿಯಾಗಿದ್ದಾರೆ.

ರಾಜ್ಯದಲ್ಲಿ ಮೈತ್ರಿ ಸರ್ಕಾರವಿದೆ. ಕ್ಷೇತ್ರದ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯನ್ನ ಕಣಕ್ಕಿಳಿಸಿಲ್ಲ. ಎರಡೂ ಪಕ್ಷಗಳು ಪರೋಕ್ಷವಾಗಿ ಮೈತ್ರಿಯನ್ನು ಮಾಡಿಕೊಂಡು ಚುನಾವಣೆಯನ್ನು ಎದುರಿಸುತ್ತಿವೆ.

English summary
Congress candidate Sunil Patil filed nomination for Legislative Council election from Vijayapur and Bagalkot local bodies constituency. Election will be held on September 6 and result will be announced on September 11, 2018.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X