ನಟಿ, ಮಾಜಿ ಸಚಿವೆ ಉಮಾಶ್ರೀ ಮನೆ ಕಳ್ಳತನ: ಕಳ್ಳರಿಗೆ ಬಲೆ ಬೀಸಿದ ಪೊಲೀಸರು
ಬಾಗಲಕೋಟೆ, ನವೆಂಬರ್ 2: ಬಾಗಲಕೋಟೆ ಜಿಲ್ಲೆಯ ಬನಹಟ್ಟಿ ತಾಲ್ಲೂಕಿನ ರಬಕವಿಯ ವಿದ್ಯಾನಗರದಲ್ಲಿರುವ ಮಾಜಿ ಸಚಿವೆ, ನಟಿ ಉಮಾಶ್ರೀ ಅವರ ಮನೆಯಲ್ಲಿ ಕಳ್ಳತನ ಮಾಡಲಾಗಿದೆ.
ರಬಕವಿಯ ಮನೆಯ ಬಾಗಿಲನ್ನು ಮುರಿದು ಒಳ ನಸುಳಿರುವ ಕಳ್ಳರು, ಅಪಾರ ಪ್ರಮಾಣದ ವಸ್ತು ಮತ್ತು ಹಣ ದರೋಡೆ ಮಾಡಿ ಹೋಗಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ.

ಕಳ್ಳತನವಾದ ಸ್ಥಳಕ್ಕೆ ದೌಡಾಯಿಸಿದ ಸಿಪಿಐ ಕರುಣೇಸಿಗೌಡ ಮತ್ತು ಪಿಎಸ್ಐ ವಿಜಯಕುಮಾರ ಕಾಂಬಳೆ ಪರಿಶೀಲನೆ ನಡೆಸಿದ್ದು, ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.

ಕಾಂಗ್ರೆಸ್ ಮುಖಂಡೆ ಹಾಗೂ ಮಾಜಿ ಸಚಿವೆ ಉಮಾಶ್ರೀ ಅವರು ಸದ್ಯ ಬೆಂಗಳೂರು ನಗರದಲ್ಲಿ ವಾಸ ಮಾಡುತ್ತಿದ್ದು, ಅವರ ಬಾಗಲಕೋಟೆ ಜಿಲ್ಲೆಯ ರಬಕವಿ ಮನೆಯಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿರುವ ಕಳ್ಳರು ಮನೆ ಬಾಗಿಲು ಮುರಿದು ಕಳ್ಳತನ ಮಾಡಿದ್ದಾರೆ.

ಬೆಂಗಳೂರಿನಿಂದ ನಟಿ ಉಮಾಶ್ರೀ ಅವರು ವಾಪಸು ಬಂದು ಪರಿಶೀಲನೆ ನಡೆಸಿದ ನಂತರ, ಎಷ್ಟು ಹಣ, ಚಿನ್ನಾಭರಣ ದರೋಡೆ ಮಾಡಲಾಗಿದೆ ಎಂಬುದು ಸ್ಪಷ್ಟವಾಗಲಿದೆ.
Recommended Video
ಉಮಾಶ್ರೀ ಅವರ ಮನೆಯ ಬಾಗಿಲನ್ನು ಮೊದಲು ಮುರಿದು, ನಂತರ ಕೊಠಡಿಯಲ್ಲಿರುವ ತಿಜೋರಿಯನ್ನು ಮುರಿದು ಕಳ್ಳತನ ಮಾಡಿದ್ದಾರೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications