Accident News: ಇನ್ನೋವಾ ಕಾರು-ಟೆಂಪೋ ನಡುವೆ ಭೀಕರ ಅಪಘಾತ: ಇಬ್ಬರು ಸಾವು, ಮೂವರಿಗೆ ಗಂಭೀರ ಗಾಯ
Accident News: ಇತ್ತೀಚಿನ ದಿನಗಳಲ್ಲಿ ಅಪಘಾತಗಳ ಪ್ರಕರಣಗಳು ಹೆಚ್ಚಾಗುತ್ತಲಿವೆ. ಇನ್ನು ಇದೀಗ ಇನ್ನೋವಾ ಕಾರು ಹಾಗೂ ಟೆಂಪೋ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ.
ಇನ್ನೋವಾ ಕಾರು ಹಾಗೂ ಟಂಟಂ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲ್ಲೂಕಿನ ಅನಗವಾಡಿ ಬ್ರಿಡ್ಜ್ ಬಳಿ ನಡೆದಿದೆ. ಇನ್ನೋವಾ ಕಾರು ಹಾಗೂ ಟಂಟಂ ವಾಹನಗಳು ಪರಸ್ಪರ ಡಿಕ್ಕಿ ಹೊಡೆದುಕೊಂಡಿವೆ. ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಮಹೇಶ್ ನಾಯ್ಕರ್ (27) ಮತ್ತು ಮೆಹಬೂಬ್ ಶೇಖ್ (30) ಎಂಬುವವರು ಅಪಘಾತದಲ್ಲಿ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಇನ್ನು ವಿಶಾಲ್ ವರತಿಲ್ಲೆ, ವಿಜಯಕುಮಾರ್ ಭೋವಿ, ಗುರುಪ್ರಸಾದ್ ಸುಂಕದ ಎಂಬುವರು ಗಾಯಾಳುಗಳಾಗಿದ್ದು, ಇವರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೃತರು ಮತ್ತು ಗಾಯಾಳುಗಳು ನವನಗರದ 45ನೇ ಸೆಕ್ಟರ್ ನಿವಾಸಿಗಳಾಗಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಘಟನೆ ಸ್ಥಳಕ್ಕೆ ಆಮಿಸಿದ ಕಲಾದಗಿ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎನ್ನಲಾಗುತ್ತಿದೆ.
ಅಪಘಾತಕ್ಕೆ ಕಾರಣ ಏನು?: ಊಟಕ್ಕೆಂದು ಹತ್ತಿರದ ವಿಜಯಪುರ ಜಿಲ್ಲೆಯ ಕೊಲ್ಹಾರಕ್ಕೆ ಹೋಗಿದ್ದ ಐವರಿದ್ದ ಟಂಟಂ ವಾಹನ ತಡರಾತ್ರಿ ಬಾಗಲಕೋಟೆ ಕಡೆಗೆ ವಾಪಸ್ ಬರುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಇನ್ನೋವಾ ಕಾರು ಚಾಲಕನ ಅಜಾಗರೂಕತೆ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಮುಂದೆ ಹೋಗುತ್ತಿದ್ದ ಮಹಿಂದ್ರಾ ಪಿಕ್ ಅಪ್ ವಾಹನಕ್ಕೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಎದುರಿಗೆ ಬರುತ್ತಿದ್ದ ಟಂಟಂಗೆ ಡಿಕ್ಕಿ ಹೊಡೆದಿದೆ ಎನ್ನುವ ಮಾಹಿತಿ ತಿಳಿದುಬಂದಿದೆ. ಹೀಗೆ ಅಪಘಾತ ಪ್ರಕರಾಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲಿವೆ.
6 ಸಾವು, 10 ಜನರಿಗೆ ಗಾಯ: ಬಸ್ ಹಾಗೂ ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಈ ವೇಳೆ 6 ಜನ ಸಾವಪ್ಪಿದ್ದು, 10 ಜನ ಗಾಯಗೊಂಡಿರುವ ಘಟನೆ ಒಡಿಶಾದಲ್ಲಿ ನಡೆದಿದೆ.
ಒಡಿಶಾದ ಸುಂದರಗಢ ಜಿಲ್ಲೆಯಲ್ಲಿ ಇತ್ತೀಚೆಗಷ್ಟೇ ಬಸ್ ಹಾಗೂ ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಪರಿಣಾಮ 6 ಜನ ಸಾವನ್ನಪ್ಪಿದ್ದು, 10 ಜನ ಗಾಯಗೊಂಡಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದೆ.
ಅಪಘಾತದಲ್ಲಿ ಸಾವನ್ನಪ್ಪಿದ 6 ಜನರಲ್ಲಿ ಮೂವರು ಮಹಿಳೆಯರಾಗಿದ್ದಾರೆ. ಕೆ ಬಲಂಗ್ ಪೊಲೀಸ್ ಠಾಣೆ ಬಳಿಯ ರಾಷ್ಟ್ರೀಯ ಹೆದ್ದಾರಿ 520ರಲ್ಲಿ ಬೆಳಗ್ಗೆ ಅಪಘಾತ ಸಂಭವಿಸಿದೆ. 5 ಮಂದಿ ಜನರು ಸ್ಥಳದಲ್ಲೇ ಸಾವನ್ನಪ್ಪಿದರೆ, ಇನ್ನೋರ್ವ ಚಿಕಿತ್ಸೆ ಪಡೆಯುತ್ತಿರುವಾಗಲೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದರು ಎಂದು ಪಶ್ಚಿಮ ವಲಯದ ಡಿಐಜಿ ಬ್ರಿಜೇಶ್ ಕುಮಾರ್ ರೈ ಮಾಹಿತಿ ನೀಡಿದ್ದಾರೆ ಅಂತಾ ವರದಿಯಾಗಿದೆ.
ಕರ್ಮಪಾಲ್ ಸಿಂಗ್, ಶಬರ್‌ಬಾಲಾ, ಪುಷ್ಪಾ ಗೋಪಿ, ಸತ್ಯಭಾಮ ಠಾಕೂರ್, ಮೇರಿ ನಾಗ್ ಅಪಘಾತದಲ್ಲಿ ಸಾವಪ್ಪಿದರವರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಗಾದೇ ಮೃತಪಟ್ಟ ಓರ್ವನ ಗುರುತು ಇನ್ನೂ ಪತ್ತೆಯಾಗಬೇಕಿದೆ. ಈ ಎಲ್ಲಾತೂ ಬಸ್‌ನಲ್ಲಿ ಪ್ರಯಾಣ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
ಬಸ್ ರೂರ್ಕೆಲಾದಿಂದ ಕೊಯ್ಡಾಗೆ ಹೋಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ರಸ್ತೆಯ ಒಂದು ಬದಿಯನ್ನು ದುರಸ್ತಿ ಹಿನ್ನೆಲೆ ಮುಚ್ಚಲಾಗಿತ್ತು. ಈ ಹಿನ್ನೆಲೆ ಬಸ್ ತಪ್ಪು ಪಥದಲ್ಲಿ ಪ್ರಯಾಣ ಮಾಡುತ್ತಿತ್ತು ಎಂದು ಪೊಲೀಸರ ಮೂಲಗಳಿಂದ ತಿಳಿದುಬಂದಿದೆ. ಇನ್ನು ಗಂಭೀರವಾಗಿ ಗಾಯಗೊಂಡವರನ್ನು ರೂರ್ಕೆಲಾದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಉಳಿದವರು ಕೊಯಿಡಾ ಮತ್ತು ಲಹುನಿಪಾದ ಆರೋಗ್ಯ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಡಿಐಜಿ ಹೇಳಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಈ ಬಗ್ಗೆ ಸಿಎಂ ಮೋಹನ್ ಚರಣ್ ಮಾಝಿ ದುಃಖ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಮೃತರ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ತಲಾ 4,00,000 ರೂಪಾಯಿ ಪರಿಹಾರ ಘೋಷಣೆ ಮಾಡಿದ್ದಾರೆ. ವಿಪಕ್ಷದ ನಾಯಕ ಮತ್ತು ಮಾಜಿ ಸಿಎಂ ನವೀನ್ ಪಟ್ನಾಯಕ್ ಸಹ ಘಟನೆ ಬಗ್ಗೆ ದುಃಖ ವ್ಯಕ್ತಪಡಿಸಿದರು.












Click it and Unblock the Notifications