ಪುಟ್ಟಕ್ಕನಿಗೆ ಕೈತಪ್ಪಿದ ತೇರದಾಳ ಟಿಕೆಟ್- ಸಿದ್ದು ಸವದಿ ವಿರುದ್ಧ ಸಿದ್ದಪ್ಪ ಕೊಣ್ಣೂರು ಸ್ಪರ್ಧೆ
ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಹತ್ತಿರವಾಗುತ್ತಿದ್ದಂತೆ ಕಾಂಗ್ರೆಸ್ ಇಂದು (ಏಪ್ರಿಲ್ 15) ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕಾಂಗ್ರೆಸ್ 43 ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ರಿಲೀಸ್ ಮಾಡಿದೆ. ಈ ಪಟ್ಟಿಯಲ್ಲಿ ಬಾಗಲಕೋಟೆಯ ತೇರದಾಳ ವಿಧಾನಸಭಾ ಕ್ಷೇತ್ರಕ್ಕೂ ಅಭ್ಯರ್ಥಿಯನ್ನು ಕಾಂಗ್ರೆಸ್ ಘೋಷಿಸಿದೆ. ತೇರದಾಳದಿಂದ ಸ್ಪರ್ಧಿಸಲು ಸಿದ್ದಪ್ಪ ಕೊಣ್ಣೂರು ಅವರಿಗೆ ಕಾಂಗ್ರೆಸ್ ಮಣೆ ಹಾಕಿದೆ.
ಆದರೆ ಇಲ್ಲಿ ನಟಿ, ಮಾಜಿ ಸಚಿವೆ ಉಮಾಶ್ರೀ ಅವರು ತೇರದಾಳ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಕಾಂಗ್ರೆಸ್ ಈ ಕ್ಷೇತ್ರದಿಂದ ಸಿದ್ದಪ್ಪ ಕೊಣ್ಣೂರು ಅವರಿಗೆ ಟಿಕೆಟ್ ಘೋಷಣೆ ಮಾಡಿದ್ದು ಪುಟ್ಟಕ್ಕನಿಗೆ ಬಿಗ್ ಶಾಕ್ ಕೊಟ್ಟಿದೆ.

ತೇರದಾಳದಲ್ಲಿ ಸದ್ಯ ಬಿಜೆಪಿ ಪಕ್ಷ ಆಡಳಿತದಲ್ಲಿದೆ. 2018ರ ಕಳೆದ ಚುನಾವಣೆಯಲ್ಲಿ ಇಲ್ಲಿ ಭಾರತೀಯ ಜನತಾ ಪಾರ್ಟಿ ಪಕ್ಷದ ಸಿದ್ದು ಸವದಿ ಜಯ ಗಳಿಸಿದ್ದರು. ಕಾಂಗ್ರೆಸ್‌ನ ಉಮಾಶ್ರೀ 20889 ಮತಗಳ ಅಂತರದಿಂದ ಸೋಲನ್ನು ಅನುಭವಿಸಿದ್ದರು.
ತೇರದಾಳ ವಿಧಾನಸಭಾ ಮತಕ್ಷೇತ್ರದಲ್ಲಿ ಇಲ್ಲಿಯವರೆಗೆಗೆ ಮೂರು ಚುನಾವಣೆ ನಡೆದಿದೆ. ಇದರಲ್ಲಿ ಎರಡು ಬಾರಿ ಬಿಜೆಪಿಯಿಂದ ಶಾಸಕರಾಗಿ ಸಿದ್ದು ಸವದಿ ಗೆದ್ದು ಬಂದಿದ್ದರೆ, ಒಂದು ಬಾರಿ ಉಮಾಶ್ರೀ ಶಾಸಕಿಯಾಗಿ ಸಚಿವೆ ಆಗಿದ್ದರು. ಸದ್ಯ ಈ ಕ್ಷೇತ್ರದ ಹಾಲಿ ಶಾಸಕ ಬಿಜೆಪಿಯ ಸಿದ್ದು ಸವದಿ ಆಗಿದ್ದು, ಈ ಹಿಂದೆ ಈ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಮಾಜಿ ಸಚಿವೆ ಉಮಾಶ್ರೀ ಸ್ಪರ್ದಿಸಿ ಒಮ್ಮೆ ಗೆಲುವು ಕಂಡು ಕಳೆದ ಬಾರಿ ಸಿದ್ದು ಸವದಿ ವಿರುದ್ಧ ಸೋಲನ್ನು ಅನುಭವಿಸಿದ್ದಾರೆ.
ಈ ಹಿಂದೆ ಕಾಂಗ್ರೆಸ್ ಉಮಾಶ್ರೀ ಅವರಿಗೆ ಟಿಕೆಟ್ ನೀಡಿತ್ತು. ಆದರೆ ಈ ಬಾರಿ ಮತಕ್ಷೇತ್ರದಲ್ಲಿ ಸ್ಥಳೀಯರಿಗೆ ಆದ್ಯತೆ ನೀಡಿ ಎಂಬ ಕೂಗು ಬಲವಾಗಿ ಕೇಳಿ ಬಂದಿತ್ತು. ಜೊತೆಗೆ ಉಮಾಶ್ರೀ ಅವರು ಬೆಂಗಳೂರಿನಲ್ಲಿ ಇರುತ್ತಾರೆ. ಸ್ಥಳೀಯವಾಗಿ ಕಾರ್ಯಕರ್ತರಿಗೆ ಸಿಗೋದಿಲ್ಲ ಎಂಬ ಆರೋಪಗಳು ಇತ್ತು. ಹೀಗಾಗಿ ಉಮಾಶ್ರೀ ಬಗ್ಗೆ ಕಾರ್ಯಕರ್ತರಲ್ಲಿ ಅಸಮಧಾನ ಇದ್ದು ಸ್ಥಳೀಯರಿಗೇ ಟಿಕೆಟ್ ನೀಡಬೇಕು ಎನ್ನುವ ಬೇಡಿಕೆ ಇತ್ತು.

ಈ ನಡುವೆ ಕಾಂಗ್ರೆಸ್‌ನಲ್ಲಿ ಪ್ರಬಲ ಅಭ್ಯರ್ಥಿಯಾದ ಸಿದ್ದಪ್ಪ ಕೊಣ್ಣೂರು ಟಿಕೆಟ್‌ಗಾಗಿ ನಡೆಸಿದ ಕಸರತ್ತು ಪ್ರಯೋಜನ ಪಡೆದಿದೆ. ಈ ಬಾರಿ ಅವರಿಗೆ ಹೈಕಮಾಂಡ್ ಟಿಕೆಟ್ ನೀಡಿದೆ. ಇವರೊಂದಿಗೆ ಕಾಂಗ್ರೆಸ್‌ನಲ್ಲಿ ಡಾ.ಎಂ.ಎಸ್ ದಡ್ಡೇನವರ, ಡಾ.ಪದ್ಮಜೀತ್ ನಾಡಗೌಡ, ಡಾ.ಎ.ಆರ್.ಬೆಳಗಲಿ ಸೇರಿದಂತೆ ಹಲವರು ಟಿಕೆಟ್ ಆಕಾಂಕ್ಷಿಗಳಾಗಿದ್ದರು.
ಉಮಾಶ್ರೀ ಅವರಿಗೆ ಕರೆ ಮಾಡಿದ ಸಿದ್ದರಾಮಯ್ಯ
ಉಮಾಶ್ರೀ ಅವರಿಗೆ ಕರೆ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಟಿಕೆಟ್ ಹಂಚಿಕೆಯ ಕುರಿತು ಮಾಹಿತಿಯನ್ನು ನೀಡಿದ್ದಾರಂತೆ. ಪಕ್ಷ ಅಧಿಕಾರಕ್ಕೆ ಬಂದಾಗ ಸೂಕ್ತ ಸ್ಥಾನಮಾನದ ಭರವಸೆಯನ್ನು ಸಿದ್ದರಾಮಯ್ಯ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಇದಕ್ಕೆ ಉಮಾಶ್ರೀ ಸಹ ಒಮ್ಮತ ಸೂಚಿಸಿದ್ದಾರೆ ಎನ್ನಲಾಗಿದೆ. ಉಮಾಶ್ರೀ ಅವರು ಪುಟ್ಟಕ್ಕನ ಮಕ್ಕಳು ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಶೂಟಿಂಗ್ ಹಿನ್ನೆಲೆ ಉಮಾಶ್ರೀ ಕ್ಷೇತ್ರದಲ್ಲಿರಲ್ಲ ಎಂಬ ಮಾತುಗಳು ಕೇಳಿ ಬಂದಿವೆ.
ತೇರದಾಳ ಕ್ಷೇತ್ರದಿಂದ ಬಿಜೆಪಿ ಸಿದ್ದು ಸವದಿ ಅವರಿಗೆ ಈ ಬಾರಿ ಟಿಕೆಟ್ ನೀಡಿದೆ. ಹೀಗಾಗಿ ಸಿದ್ದು ಸವದಿ ಹಾಗೂ ಸಿದ್ದಪ್ಪ ಕೊಣ್ಣೂರು ಅವರ ನಡುವೆ ನೇರ ಹಣಾಹಣಿ ನಡೆಯಲಿದೆ.
2018ರ ಚುನಾವಣೆ ಫಲಿತಾಂಶ
2018ರ ಚುನಾವಣೆ ಫಲಿತಾಂಶ 2008ರಲ್ಲಿ ಬಿಜೆಪಿಯ ಸಿದ್ದು ಸವದಿ 62,595 ಮತಗಳನ್ನು ಪಡೆದು ಕಾಂಗ್ರೆಸ್ ಅಭ್ಯರ್ಥಿ ಉಮಾಶ್ರೀ ವಿರುದ್ಧ ಜಯ ಸಾಧಿಸಿದ್ದರು. ಉಮಾಶ್ರೀ 50,351 ಮತಗಳನ್ನು ಪಡೆದು ಸೋಲನ್ನು ಅನುಭವಿಸಿದ್ದರು. 2013 ರ ಚುನಾವಣೆಯಲ್ಲಿ ಬಿಜೆಪಿಯಿಂದ ಸಿದ್ದು ಸವದಿ ಕಣಕ್ಕಿಳಿದಿದ್ದರು. ಉಮಾಶ್ರೀ 70,189 ಮತಗಳನ್ನು ಪಡೆದರೆ ಸಿದ್ದು ಸವದಿ 67,590 ಮತಗಳನ್ನು ಗಳಿಸಿ ಸೋಲನ್ನು ಅನುಭವಿಸಿದ್ದರು.
ಬಿಜೆಪಿ-ಕೆಜೆಪಿ ಗೊಂದಲ ಕಾರಣದಿಂದಾಗಿ ಸಿದ್ದು ಸವದಿ ಅವರಿಗೆ ಸೋಲಾಗಿತ್ತು. ಬಿಜೆಪಿ ತೊರೆದು ಕೆಜೆಪಿ ಸೇರಿದ್ದ ಮುಖಂಡರಿಂದಾಗಿ ಬಿಜೆಪಿಗೆ ಅಭ್ಯರ್ಥಿಗೆ ಹಿನ್ನಡೆ ಉಂಟಾಗಿತ್ತು. 2018ರ ಕಳೆದ ಚುನಾವಣೆಯಲ್ಲಿ ಇಲ್ಲಿ ಭಾರತೀಯ ಜನತಾ ಪಾರ್ಟಿ ಪಕ್ಷದ ಸಿದ್ದು ಸವದಿ ಜಯ ಗಳಿಸಿದ್ದರು. ಕಾಂಗ್ರೆಸ್‌ನ ಉಮಾಶ್ರೀ 20889 ಮತಗಳ ಅಂತರದಿಂದ ಸೋಲನ್ನು ಅನುಭವಿಸಿದ್ದರು. ಸಿದ್ದು ಸವದಿ 87,213 ಮತಗಳನ್ನು ಪಡೆದು ಜಯ ಸಾಧಿಸಿದ್ದರು.
ಕಾಂಗ್ರೆಸ್‌ನ ಮೂರು ಪಟ್ಟಿಗಳ ವಿವರ
ರಾಜ್ಯ ವಿಧಾನಸಭಾ ಚುನಾವಣಾ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದೆ. ಪಕ್ಷವನ್ನ ಈ ಬಾರಿ ಅಧಿಕಾರಕ್ಕೆ ತರಲು ಕಾಂಗ್ರೆಸ್ ಕಲಿಗಳು ಭರ್ಜರಿ ಸಿದ್ದತೆಯನ್ನ ನಡೆಸಿದ್ದು, ಈಗಾಗಲೇ 224 ಅಭ್ಯರ್ಥಿಗಳ ಪೈಕಿ 166 ಅಭ್ಯರ್ಥಿಗಳನ್ನ ಚುನಾವಣಾ ಕಣಕ್ಕಿಳಿಸಿದೆ. ಈಗಾಗಲೇ ಯಾವುದೇ ಗೊಂದಲವಿಲ್ಲದೇ ಮೊದಲ ಪಟ್ಟಿಯಲ್ಲಿ 124 ಕ್ಷೇತ್ರಗಳ ಅಭ್ಯರ್ಥಿಗಳನ್ನ ಘೋಷಿಸಿದ್ದ ಕಾಂಗ್ರೆಸ್ ಹೈಕಮಾಂಡ್‌ಎರಡನೇ ಪಟ್ಟಿಯಲ್ಲಿ 42 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನ ರಿಲೀಸ್ ಮಾಡಿದ್ದು, ಇಂದು(ಶನಿವಾರ) ಮೂರನೇ ಪಟ್ಟಿ ಬಿಡುಗಡೆ ಮಾಡಿದ್ದು, 43 ಅಭ್ಯರ್ಥಿಗಳಿಗೆ ಎಐಸಿಸಿ ಟಿಕೆಟ್ ನೀಡಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications