ಬಾದಾಮಿಯಲ್ಲಿ ಸಿದ್ದು ವಿರುದ್ಧ 'ಮೇಟಿ ಸಿಡಿ' ವಿಜಯಲಕ್ಷ್ಮಿ ಸ್ಪರ್ಧೆ

Posted By: ಬಾಗಲಕೋಟೆ ಪ್ರತಿನಿಧಿ
Subscribe to Oneindia Kannada

ಬಾಗಲಕೋಟೆ, ಏಪ್ರಿಲ್ 14: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಸ್ಪರ್ಧೆ ಮಾಡಲು ಸಿದ್ಧ ಇರುವುದಾಗಿ ಮಾಜಿ ಸಚಿವ ಎಚ್.ವೈ.ಮೇಟಿ ರಾಸಲೀಲೆ ಸಿಡಿಯ ಸಂತ್ರಸ್ತೆ ವಿಜಯಲಕ್ಷ್ಮಿ ಸರೂರ ಘೋಷಿಸಿದ್ದಾರೆ. ವಿಜಯಲಕ್ಷ್ಮಿ ಸರೂರ ಬಾದಾಮಿ ಕ್ಷೇತ್ರದಿಂದ ಸ್ಪರ್ಧೆ ಮಾಡುವ ಜತೆಗೆ ಬಾಗಲಕೋಟೆಯಲ್ಲೂ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣಾ ಕಣದಲ್ಲಿರುತ್ತೇನೆ ಎಂದು ಮಾಧ್ಯಮದವರಿಗೆ ತಿಳಿಸಿದ್ದಾರೆ.

ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಬಿಜೆಪಿ ಅಭ್ಯರ್ಥಿಗಳ ಮೊದಲ ಅಧಿಕೃತ ಪಟ್ಟಿ ಪ್ರಕಟ

ಸಿದ್ದರಾಮಯ್ಯ ವಿರುದ್ಧ ಅಖಾಡಕ್ಕೆ ಎಲ್ಲ ಸಿದ್ಧತೆ ಮಾಡಿಕೊಳ್ಳುತ್ತಿದ್ದೇನೆ ಎಂದು ತಿಳಿಸಿದ್ದಾರೆ‌. ಅಂದಹಾಗೆ, ವಿಜಯಲಕ್ಷ್ಮಿ ಸರೂರ ಅವರು ಬಾಗಲಕೋಟೆ ಶಾಸಕ ಎಚ್.ವೈ.ಮೇಟಿ ರಾಸಲೀಲೆ ಸಿಡಿಯ ಸಂತ್ರಸ್ತೆ ಆಗಿದ್ದಾರೆ. ಈ ಹಿಂದೆ ಮೇಟಿ ವಿರುದ್ಧ ಬಾಗಲಕೋಟೆ ಕ್ಷೇತ್ರದಲ್ಲಿ ಸ್ಪರ್ಧಿಸುವುದಾಗಿ ತಿಳಿಸಿದ್ದರು. ಈಗ ಬಾಗಲಕೋಟೆಯ ಬಾದಾಮಿ ಕ್ಷೇತ್ರದಿಂದಲೂ ಸ್ಪರ್ಧಿಸುವುದಾಗಿ ಹೇಳಿಕೆ ನೀಡಿದ್ದಾರೆ.

ಸಿದ್ದರಾಮಯ್ಯ ಬಾದಾಮಿಯನ್ನೇ ಆಯ್ದುಕೊಂಡದ್ದೇಕೆ? ಜಾತಿಲೆಕ್ಕಾಚಾರ ಏನು?

ಸಿದ್ದರಾಮಯ್ಯ ಅವರು ಬಾದಾಮಿ ಕ್ಷೇತ್ರದಿಂದ ಸ್ಪರ್ಧೆ ಮಾಡುವುದು ಖಚಿತವಾಗುತ್ತಿದ್ದಂತೆ ವಿಜಯಲಕ್ಷ್ಮಿ ಸರೂರ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಯಾವುದೇ ಆಸೆ- ಆಮಿಷಕ್ಕೆ ಒಳಗಾಗುವುದಿಲ್ಲ. ಸ್ಪರ್ಧೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ‌. ಯಾವುದೇ ಪಕ್ಷದವರು ಮುಖ್ಯಮಂತ್ರಿ ವಿರುದ್ದ ಸ್ಪರ್ಧಿಸಲು ನನ್ನನ್ನು ಪ್ರೇರೇಪಿಸಿಲ್ಲ. ಇದು ನನ್ನ ಸ್ವಂತ ನಿರ್ಧಾರ ಎಂದಿದ್ದಾರೆ.

Vijayalakshmi Saragura contest from Badami against Siddaramaiah

ಬಾದಾಮಿ ಕ್ಷೇತ್ರದ ಕುರುಬ ಸಮುದಾಯದವರು ನನಗೆ ಸಹಕಾರ‌ ನೀಡಲಿದ್ದಾರೆ. ರಾಸಲೀಲೆ ಸಿಡಿ ಪ್ರಕರಣದಲ್ಲಿ ಎಚ್.ವೈ.ಮೇಟಿ ಅವರಿಗೆ ಕ್ಲೀನ್ ಚಿಟ್ ನೀಡಿದ್ದಕ್ಕೆ ಸೇಡು ತೀರಿಸಿಕೊಳ್ಳಲು ವಿಜಯಲಕ್ಷ್ಮಿ ಈ ರೀತಿ ನಿರ್ಧಾರ ತೆಗೆದುಕೊಂಡಿರಬಹುದು ಎಂದು ಚರ್ಚೆಗೆ ಗ್ರಾಸವಾಗಿದೆ.

ಸಿದ್ದರಾಮಯ್ಯ, ಮೇಟಿ ವಿರುದ್ಧ ಸ್ಪರ್ಧಿಸದಂತೆ ಬೆದರಿಕೆ ಇದೆ. ಆದರೆ ಯಾವುದೇ ಕಾರಣಕ್ಕೂ ಚುನಾವಣೆಯಿಂದ ಹಿಂದೆ ಸರಿಯುವುದಿಲ್ಲ ಎಂದು ವಿಜಯಲಕ್ಷ್ಮೀ ತಿಳಿಸಿದ್ದಾರೆ‌.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Karnataka Assembly Elections 2018: Former minister HY Meti CD victim Vijayalakshmi Saragura announced that, she will contest for assembly elections against Siddarmaiah in Badami constituency, Bagalkot district.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ