ಬಾಗಲಕೋಟೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಭರ್ತಿಯಾದ ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಬಿಎಸ್‌ವೈ

|
Google Oneindia Kannada News

ಬಾಗಲಕೋಟೆ, ಆಗಸ್ಟ್ 25: ವಿವಿಧ ಜಿಲ್ಲೆಗಳ ಪ್ರವಾಸದಲ್ಲಿರುವ ಕರ್ನಾಟಕದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಿಸಿದರು. ಬಾಗಲಕೋಟೆಯಲ್ಲಿರುವ ಜಲಾಶಯ ಸಂಪೂರ್ಣ ಭರ್ತಿಯಾಗಿದೆ.

Recommended Video

Corona Vaccine ವಿಚಾರದಲ್ಲಿ ಚೀನಾ ರೂಪಿಸಿಕೊಂಡಿದ್ದ ಕಾನೂನು ಏನು ? | Oneindia Kannada

ಮಂಗಳವಾರ ಬೆಳಗಾವಿಯಿಂದ ಬಾಗಲಕೋಟೆಗೆ ಆಗಮಿಸಿದ ಯಡಿಯೂರಪ್ಪ ಆಲಮಟ್ಟಿಯ ಲಾಲ್‌ಬಹದ್ದೂರ್ ಶಾಸ್ತ್ರಿ ಸಾಗರಕ್ಕೆ ಬಾಗಿನ ಅರ್ಪಿಸಿದರು. ಉಪ ಮುಖ್ಯಮಂತ್ರಿ ಹಾಗೂ ಬಾಗಲಕೋಟೆ ಜಿಲ್ಲಾ‌ ಉಸ್ತುವಾರಿ ಸಚಿವರಾದ ಗೋವಿಂದ‌ ಕಾರಜೋಳ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಮಹಾರಾಷ್ಟ್ರದಲ್ಲಿ ಸುರಿದ ಭಾರಿ ಮಳೆಯ ಕಾರಣ ಆಲಮಟ್ಟಿ ಜಲಾಶಯಕ್ಕೆ ಸಾಕಷ್ಟು ನೀರು ಹರಿದು ಬಂದಿದ್ದು, ಜಲಾಶಯ ಭರ್ತಿಯಾಗಿದೆ. ಗರಿಷ್ಠ 519.60 ಮೀಟರ್ ಎತ್ತರದ ಜಲಾಶಯದಲ್ಲಿ ಸೋಮವಾರ ಸಂಜೆ 519.32 ಮೀಟರ್ ನೀರಿನ ಸಂಗ್ರಹವಿತ್ತು.

Yediyurappa Offeres Bagina For Alamatti Dam

ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಜಲಾಶಯದಲ್ಲಿ 123.081 ಟಿಎಂಸಿ ಅಡಿ ನೀರನ್ನು ಸಂಗ್ರಹ ಮಾಡಬಹುದಾಗಿದೆ. ಜಲಾಶಯಕ್ಕೆ ಸೋಮವಾರ 1,88,264 ಕ್ಯುಸೆಕ್ ಒಳ ಹರಿವು ಇತ್ತು, ಹೊರ ಹರಿವು 1 ಲಕ್ಷ ಕ್ಯೂಸೆಕ್ ದಾಖಲಾಗಿತ್ತು.

Yediyurappa Offeres Bagina For Alamatti Dam

ಬಾಗಿಲ ಅರ್ಪಣೆ ಕಾರ್ಯಕ್ರಮದಲ್ಲಿ ಕಂದಾಯ ಸಚಿವ ಆರ್. ಅಶೋಕ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳೆ, ವಿಧಾನ ಪರಿಷತ್ ವಿರೋಧ ಪಕ್ಷದ‌ನಾಯಕ ಎಸ್. ಆರ್.ಪಾಟೀಲ ಮುಂತಾದವರು ಉಪಸ್ಥಿತರಿದ್ದರು.

English summary
Karnataka Chief Minister B. S. Yediyurappa offered bagina for Alamatti dam in Bagalkot district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X