ಬಳ್ಳಾರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಳ್ಳಾರಿ; ತುಂಗಭದ್ರಾ ಜಲಾಶಯದಿಂದ 1 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ

By ಬಳ್ಳಾರಿ ಪ್ರತಿನಿಧಿ
|
Google Oneindia Kannada News

ಬಳ್ಳಾರಿ, ಸೆಪ್ಟೆಂಬರ್ 21: ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಬಳ್ಳಾರಿಯ ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳವಾಗಿದೆ. 46,886 ಕ್ಯೂಸೆಕ್ ಒಳ ಹರಿವು ದಾಖಲಾಗಿದೆ.

ಭದ್ರಾ ಮತ್ತು ತುಂಗಾ ಅಣೆಕಟ್ಟುಗಳು ಮತ್ತು ಮಧ್ಯಂತರ ಜಲಾನಯನ ಪ್ರದೇಶಗಳ ಒಳಹರಿವು ಹೆಚ್ಚಳವಾಗಿದೆ.‌ ಹಾಗಾಗಿ ತುಂಗಭದ್ರಾ ಜಲಾಶಯ ಒಳಹರಿವು ಹೆಚ್ಚಾಗಿದೆ. ಜಲಾಶಯಕ್ಕೆ ಒಳಹರಿವು ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಸದ್ಯಕ್ಕೆ ಒಂದು ಲಕ್ಷ ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಲಾಗಿದೆ. ಜಲಾಶಯದ 28 ಕ್ರಸ್ಟ್ ಗೇಟ್ ಗಳ ಮೂಲಕ ತುಂಗಭದ್ರಾ ನದಿಗೆ ನೀರು ಬಿಡುಗಡೆ ಮಾಡಲಾಗಿದೆ.

ಎಲ್ಲಾ ದಿಕ್ಕುಗಳಲ್ಲೂ ಆವರಿಸಿದ ಮಳೆ, ಕರ್ನಾಟಕ ಗಢಗಢಎಲ್ಲಾ ದಿಕ್ಕುಗಳಲ್ಲೂ ಆವರಿಸಿದ ಮಳೆ, ಕರ್ನಾಟಕ ಗಢಗಢ

ಹಂಪಿಯ ಹಲವು ಸ್ಮಾರಕಗಳು ಜಲಾವೃತವಾಗಿವೆ. ಪುರಂದರ ದಾಸರ ಮಂಟಪ, ಸಾಲುಮಂಟಪ, ಧಾರ್ಮಿಕ ವಿಧಿಗಳನ್ನು ಮಾಡುವ ಮಂಟಪಗಳು ಸೇರಿದಂತೆ ಹಲವು ಸ್ಮಾರಕಗಳು ಮುಳುಗಡೆಯಾಗಿವೆ. ಇಂದು ಸಂಜೆ ವೇಳೆಗೆ 1.5 ಲಕ್ಷಕ್ಕೂ ಕ್ಯೂಸೆಕ್ ನೀರನ್ನು ಹೊರ ಬಿಡುವ ಸಾಧ್ಯತೆ ಇದ್ದು, ನದಿ ಪಾತ್ರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಜಿಲ್ಲಾಡಳಿತವು ಎಚ್ಚರಿಕೆ ನೀಡಿದೆ.

Ballari: 1 lakh cusecs Water Released From Tungabhadra Dam; Historical Monuments In Hampi Inundated

ಜಿಲ್ಲೆಯ ಕಂಪ್ಲಿ ಸೇತುವೆಯೂ ಮುಳುಗಡೆ ಭೀತಿಯಲ್ಲಿದೆ. ಕಳೆದ ವಾರದಿಂದಲೂ ಬಳ್ಳಾರಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿದ್ದು, ಮಳೆಯಿಂದ ಜಮೀನುಗಳೂ ಜಲಾವೃತವಾಗಿದ್ದವು. ಇದೀಗ ತುಂಗಭದ್ರಾ ಜಲಾಶಯದ ನೀರಿನ ಮಟ್ಟದಲ್ಲಿ ಏರಿಕೆಯಾಗಿದೆ.

English summary
1 lakh cusecs Water Released From Tungabhadra Dam and Historical Monuments In Hampi Inundated in ballari
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X