• search
 • Live TV
ಬಳ್ಳಾರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬಳ್ಳಾರಿಯಲ್ಲಿ ಶಿಕ್ಷಕರ ಸಾವು; ಶಾಲಾರಂಭದ ಬಗ್ಗೆ ಸರ್ಕಾರಕ್ಕೆ ಎಚ್ಚರಿಕೆ?

By ಬಳ್ಳಾರಿ ಪ್ರತಿನಿಧಿ
|

ಬಳ್ಳಾರಿ, ಅಕ್ಟೋಬರ್ 9: ಶಾಲಾ ಕಾಲೇಜುಗಳನ್ನು ಆರಂಭ ಮಾಡುವ ತವಕದಲ್ಲಿರುವ ಸರ್ಕಾರಕ್ಕೆ ಆಘಾತ ಆಗಿದೆ. ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಮಕ್ಕಳು ಶಿಕ್ಷಣದಿಂದ ದೂರ ಉಳಿಯಬಾರದು ಎನ್ನುವ ಕಾರಣಕ್ಕೆ ಸರ್ಕಾರ ಎರಡು ತಿಂಗಳಿನಿಂದ ವಿದ್ಯಾಗಮ ಯೋಜನೆಯಡಿ ವಠಾರ ಶಾಲೆ ಆರಂಭ ಮಾಡಿತ್ತು.

ಆದರೆ ಜಿಲ್ಲೆಯಲ್ಲಿ ವಿದ್ಯಾಗಮ ಯೋಜನೆ ಜಾರಿಯಾದ ಬಳಿಕ ಸರ್ಕಾರಿ ಶಾಲಾ ಶಿಕ್ಷಕರ ಸರಣಿ ಸಾವು ಸಂಭವಿಸುತ್ತಿದೆ. ಬಳ್ಳಾರಿ ನಗರದಲ್ಲಿ 5 ಮಂದಿ ಶಿಕ್ಷಕರು ಸೋಂಕಿನಿಂದ ಬಲಿಯಾದರೆ, ಉಳಿದ ತಾಲೂಕಿನಲ್ಲಿ 5 ಜನ ಸೇರಿದಂತೆ ಒಟ್ಟು ಜಿಲ್ಲೆಯಲ್ಲಿ 10 ಮಂದಿ ಶಿಕ್ಷಕರು ಕೊರೊನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕಳೆದ ಮೂರು ತಿಂಗಳಿಂದ ಶಿಕ್ಷಕರ ಸಾವು ಸಂಭವಿಸುತ್ತಿದೆ.

ಶಾಲೆ-ಕಾಲೇಜು ಆರಂಭಿಸುವ ಬಗ್ಗೆ ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹ!

ವಿದ್ಯಾಗಮ ಯೋಜನೆ ಜಾರಿಯಾದ ಬಳಿಕ 8 ಜನ ಶಿಕ್ಷಕರು ಬಲಿಯಾಗಿದ್ದಾರೆ. ಉಳಿದಂತೆ ಈ ಯೋಜನೆ ಜಾರಿಯಾಗುವ ಮೊದಲ ಇಬ್ಬರು ಶಿಕ್ಷಕರು ಕೊರೊನಾದಿಂದ ಸಾವನ್ನಪ್ಪಿದ್ದರು. ಶಾಲೆ ಆರಂಭ ಮಾಡುವ ಆತುರದಲ್ಲಿ ಇರುವ ಸರ್ಕಾರಕ್ಕೆ ಇದು ದೊಡ್ಡ ಶಾಕ್ ಆಗಿದೆ. ಹೀಗಾಗಿ ಶಾಲೆಗಳನ್ನು ಆರಂಭಿಸುವ ಮುನ್ನ ಸರ್ಕಾರ ಯೋಚಿಸಲೇಬೇಕಾಗಿದೆ.

ಶಿಕ್ಷಕರು ಕೊರೊನಾ ಸೋಂಕಿನಿಂದ ಸಾವನ್ನಪ್ಪುತ್ತಿರುವ ಕಾರಣದಿಂದಾಗಿ ಮಕ್ಕಳನ್ನು ವಠಾರ ಶಾಲೆಗೂ ಕಳುಹಿಸಲು ಪೋಷಕರು ಹಿಂದೇಟು ಹಾಕುತ್ತಿದ್ದಾರೆ.

ಬಳ್ಳಾರಿ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 33764 ಆಗಿದ್ದು, ಸೋಂಕಿಗೆ ಈವರೆಗೂ 485 ಮಂದಿ ಬಲಿಯಾಗಿದ್ದಾರೆ. ಆದರೆ ಸೋಕಿನಿಂದ ಗುಣಮುಖ ಆದವರ ಸಂಖ್ಯೆಯೂ ಹೆಚ್ಚಳವಾಗಿದೆ. ಈವರೆಗೂ ಒಟ್ಟು 30429 ಮಂದಿ ಗುಣಮುಖ ಆಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 2850 ಸಕ್ರಿಯ ಪ್ರಕರಣಗಳಿವೆ. ಸಾವಿನ ಪ್ರಮಾಣ ಮಾತ್ರ ಇನ್ನೂ ಕಡಿಮೆಯಾಗಿಲ್ಲ.

   RR Nagar ByElection : ಕುಮಾರಣ್ಣ ಸ್ಪಷ್ಟವಾಗಿ ಹೇಳಿದರು | Oneindia Kannada

   English summary
   Since three months, ten teachers in ballari district dies due to coronavirus. Government has to rethink about reopening of schools
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X