ಬಳ್ಳಾರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಳ್ಳಾರಿಯಲ್ಲಿ ಪೊಲೀಸರಿಗೆಂದೇ ವಿಶೇಷ ಕೋವಿಡ್ ಕೇರ್ ಸೆಂಟರ್

By ಬಳ್ಳಾರಿ ಪ್ರತಿನಿಧಿ
|
Google Oneindia Kannada News

ಬಳ್ಳಾರಿ, ಆಗಸ್ಟ್‌ 10: ಗಣಿ ನಾಡು ಬಳ್ಳಾರಿಯಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಮುಂದುವರೆಯುತ್ತಲೇ ಇದೆ. ಇದುವರೆಗೂ ಜಿಲ್ಲೆಯಲ್ಲಿ 10, 263 ಜನರಿಗೆ ಸೋಂಕು ತಗುಲಿದೆ. ಅದರಲ್ಲಿ ಸುಮಾರು 296 ಜನ ಪೊಲೀಸ್ ಸಿಬ್ಬಂದಿಗೆ ಸೋಂಕು ದೃಢವಾಗಿದೆ.

Recommended Video

Mumbai ಮಳೆಯಲ್ಲಿ ರಸ್ತೆ ನಡುವೆ ನಿಂತು ಮಾನವೀಯತೆ ಮೆರೆದ ಮಹಿಳೆ | Oneindia Kannada

296 ಜನರಲ್ಲಿ ಬಹುತೇಕ ಸಿಬ್ಬಂದಿ ಎ ಸಿಮ್ಟೆಮ್ಯಾಟಿಕ್ ಹೊಂದಿರುವ ಕಾರಣ ಪೊಲೀಸ್ ಇಲಾಖೆ ತನ್ನ ಎಲ್ಲಾ ಸಿಬ್ಬಂದಿಗೆ ಒಂದೇ ಕಡೆಯಲ್ಲಿ ಚಿಕಿತ್ಸೆ ನೀಡಲು ಮುಂದಾಗಿದೆ.‌ ಹೀಗಾಗಿ ಬಳ್ಳಾರಿಯ ಕೌಲ್ ಬಜಾರ್ ಬಳಿ ಇರುವ ವಾಲ್ಮೀಕಿ ಭವನವನ್ನು ಸುಮಾರು ನೂರು ಬೆಡ್ ಸಾಮರ್ಥ್ಯದ ಕೋವಿಡ್ ಕೇರ್ ಸೆಂಟರ್ ನಿರ್ಮಾಣ ಮಾಡಲಾಗಿದೆ. ಇನ್ನು ಮುಂದೆ ಜಿಲ್ಲೆಯಲ್ಲಿ ಇರುವ ಸೋಂಕಿತ ಪೊಲೀಸರಿಗೆ ಇನ್ನು‌ ಮುಂದೆ ವಾಲ್ಮೀಕಿ ಭವನದಲ್ಲಿ ಚಿಕಿತ್ಸೆ ನೀಡಲಾಗುವುದು. ‌

Ballari: 100 Beds Special Covid Care Centre For Police

ಜಿಲ್ಲಾಧಿಕಾರಿ ಎಸ್ ಎಸ್ ನಕುಲ್ ಹಾಗೂ ಎಸ್ ಪಿ ಸಿಕೆ ಬಾಬಾ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ‌ಇದೇ ವೇಳೆ ಮಾತನಾಡಿದ ಜಿಲ್ಲಾ ಎಸ್ಪಿ, ದಿನೇ ದಿನೇ ಪೊಲೀಸರು ಹೆಚ್ಚು ಸೋಂಕಿತರಾಗುತಿದ್ದಾರೆ. ಅವರ ಆರೋಗ್ಯ ಕಾಪಾಡುವುದು ನಮ್ಮ ಜವಾಬ್ದಾರಿ. ಹೀಗಾಗಿ ಅವರಿಗೆ ಪ್ರತ್ಯೇಕವಾದ ಕೋವಿಡ್ ಕೇರ್ ಸೆಂಟರ್ ನಿರ್ಮಾಣ ಮಾಡಿ ಬೇಗ ಚಿಕಿತ್ಸೆ ನೀಡಿ ಮತ್ತೆ ಅವರನ್ನು ಕೆಲಸಕ್ಕೆ ಹಾಜರಾಗುವಂತೆ ಮಾಡಲಾಗುವುದು" ಎಂದಿದ್ದಾರೆ.

ಜಿಲ್ಲೆಯಲ್ಲಿ ಈವರೆಗೂ ಕೊರೊನಾ ಸೋಂಕಿನಿಂದ ನಾಲ್ವರು ಪೊಲೀಸರು ಸಾವನ್ನಪ್ಪಿದ್ದಾರೆ.

English summary
The Valmiki Bhavan near Kaul Bazaar, Ballari has been converted into a covid Care Center for police with around one hundred bed capacity,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X